ಬ್ಯೂಟಿ ಮತ್ತು ವೆಲ್ ನೆಸ್ ಕ್ಷೇತ್ರದಲ್ಲಿದೆ ಭರ್ಜರಿ ಅವಕಾಶಗಳು: ಮಣಿಪಾಲದ ಒರೇನ್ ಇಂಟರ್ ನ್ಯಾಷನಲ್ MSDC ತೆರೆಯಲಿದೆ ನಿಮಗಾಗಿ ಅವಕಾಶದ ಬಾಗಿಲು.!

ಮಣಿಪಾಲ: ಒರೇನ್ ಇಂಟರ್‌ನ್ಯಾಷನಲ್ MSDC – ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಕಾಸ್ಮೆಟಾಲಜಿ ವಿಭಾಗದಲ್ಲಿ ಬಿ.ವಾಕ್ (B.Voc) ಒರೇನ್ ಇಂಟರ್‌ನ್ಯಾಷನಲ್ ಜೊತೆ ಕಾಸ್ಮೆಟಾಲಜಿಯಲ್ಲಿ ಬಿ.ವಾಕ್ ಪದವಿ ಪಡೆದು, UGC ಮಾನ್ಯತೆ ಪಡೆದ ಶಿಕ್ಷಣ ಹಾಗೂ ಉದ್ಯಮೋಚಿತ ಕೌಶಲ್ಯಗಳನ್ನು ಸಂಪಾದಿಸಿ, ಬ್ಯೂಟಿ ಮತ್ತು ವೆಲ್‌ನೆಸ್ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿ ನಿರ್ಮಿಸಿಕೊಳ್ಳಲು ಈಗ ಸದವಕಾಶ. ಅರ್ಹತೆ: 10+2 (ಪಿಯುಸಿ)ಆಕರ್ಷಕ ವೃತ್ತಿ ಅವಕಾಶಗಳಿಗೆ ತೆರೆದುಕೊಳ್ಳಿ!ಕಾಸ್ಮೆಟಾಲಜಿಯಲ್ಲಿ ಬಿ.ವಾಕ್ ಎಂಬುದು 3 ವರ್ಷಗಳ ಪದವಿ ಕೋರ್ಸ್ ಆಗಿದ್ದು, ಸೌಂದರ್ಯ ಚಿಕಿತ್ಸೆಗಳು (Beauty Therapy)ಮೇಕಪ್ ಕಲೆ […]

ಉಡುಪಿ: ಲೀಡಿಂಗ್ ಕಾರ್ಪೊರೇಟ್ ಕಂಪನಿಯಲ್ಲಿ ಉದ್ಯೋಗಾವಕಾಶ

ಉಡುಪಿ:ಪ್ರಮುಖ ಕಾರ್ಪೊರೇಟ್ ಸಂಸ್ಥೆಯೊಂದು ಉಡುಪಿ ಜಿಲ್ಲೆಯಲ್ಲಿ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ (BDM)ಹಾಗೂ ಏಜೆನ್ಸಿ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ ನಡೆಸುತ್ತಿದೆ. 25 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಯಾವುದೇ ಪದವಿ ಹೊಂದಿರುವವರು ಹಾಗೂ ಯಾವುದೇ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಇರುವವರಿಗೆ ಅವಕಾಶ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ರಿಂದ ₹40,000 ವರೆಗೆ ವೇತನ ನೀಡಲಾಗುತ್ತದೆ.ಮಾರಾಟ ಘಟಕವನ್ನು ನಿರ್ಮಿಸಿ ಮುನ್ನಡೆಸುವ ಸಂಪೂರ್ಣ ಅಧಿಕಾರದೊಂದಿಗೆ, ಬಲವಾದ ಬ್ಯಾಕ್‌ಎಂಡ್ ಹಾಗೂ ವೃತ್ತಿಪರ ತರಬೇತಿ ಬೆಂಬಲವನ್ನು […]

ಉಡುಪಿ: ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಜಿಲ್ಲೆಯ ಆಹಾರ, ಆಚಾರ ವಿಚಾರ ಮತ್ತು ಆತಿಥ್ಯಕ್ಕೆ ಜಾಗತಿಕ ಮನ್ನಣೆ ದೊರೆತಿದೆ. ಜಗತ್ತಿನ ಮೂಲೆಮೂಲೆಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಜಿಲ್ಲೆಯ ಪುರಾತನ ದೇವಸ್ಥಾನ ಸೇರಿದಂತೆ ಐತಿಹಾಸಿಕ ಸ್ಥಳಗಳ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಲು ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಕರನ್ನು ನಿಯೋಜಿಸುವ ಕಾರ್ಯಕ್ಕೆ ಸರಕಾರ ಹೆಚ್ಚಿನ ಪ್ರಾಶಸ್ತ್ಯ ನೀಡಿದರೆ, ಉಡುಪಿ ಜಿಲ್ಲೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ಎತ್ತರಕ್ಕೆ ಬೆಳೆಯಲಿದೆ ಎಂದು ಹೊಟೇಲ್ ವೈಟ್ ಲೋಟಸ್ ಎಂ.ಡಿ. ಅಜಯ್ […]

ಉಡುಪಿ:ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ : ಉದ್ಘಾಟನಾ ಕಾರ್ಯಕ್ರಮ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮವು ಫೆಬ್ರವರಿ 10 ರಂದು ಮಧ್ಯಾಹ್ನ 12.45 ಕ್ಕೆ ಉಡುಪಿಯ ಬಾಲಕಿಯರ ಸರಕಾರಿಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಇಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ […]

ಉಡುಪಿ:ಮಾನವ ಕಳ್ಳ ಸಾಗಾಣಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣಗಳಾಗದಂತೆ ಎಚ್ಚರ ವಹಿಸಿ : ಮನು ಪಟೇಲ್ ಬಿ.ವೈ

ಉಡುಪಿ: ದೇಶದ ಅತಿ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿ ಬೆಳೆಯುತ್ತಿರುವ ಮಾನವ ಕಳ್ಳ ಸಾಗಾಣಿಕೆ ಪ್ರಕರಣವನ್ನುಗಂಭೀರವಾಗಿ ಪರಿಗಣಿಸುವುದರೊಂದಿಗೆ ಇಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಜಾರಿಗೊಳಿಸಲಾದ ಕಾನೂನು ಕ್ರಮಗಳನ್ನು ಕ್ಷೇತ್ರ ಮಟ್ಟದಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯಕಾರ್ಯದರ್ಶಿ ಮನು ಪಟೇಲ್ ಬಿ.ವೈ ಹೇಳಿದರು. ಅವರು ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಡುಪಿ ಜಿಲ್ಲೆ […]