ಉಡುಪಿ:ಜಿಲ್ಲೆಯ 2,72,477 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ

ಉಡುಪಿ: ಜಿಲ್ಲೆಯಲ್ಲಿ ಫೆಬ್ರವರಿ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತಿದ್ದು, 1 ರಿಂದ 19ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ ಇದರ ನಿವಾರಣೆಗಾಗಿ ಉಡುಪಿ ತಾಲೂಕಿನಲ್ಲಿ 1,35,244, ಕುಂದಾಪುರತಾಲೂಕಿನಲ್ಲಿ 87,320 ಹಾಗೂ ಕಾರ್ಕಳ ತಾಲೂಕಿನಲ್ಲಿ 49,913 ಸೇರಿದಂತೆ ಒಟ್ಟು 2,72,477 ಮಕ್ಕಳಿಗೆ ಅಲ್‌ಬೆಂಡಾಝೋಲ್ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು. ಈ ಮಾತ್ರೆಯನ್ನು ಮಧ್ಯಾಹ್ನ ಊಟದ ನಂತರ ಶಾಲೆಗಳಲ್ಲಿ ಶಾಲಾ ಶಿಕ್ಷಕರ ಮತ್ತು ಅಂಗನವಾಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯವರಉಪಸ್ಥಿತಿಯಲ್ಲಿ ನೀಡಲಾಗುವುದು. ಶಿಕ್ಷಕರು, ಬಿಸಿಯೂಟ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯವರಿಗೆ ಕೂಡಾ […]

ಉಡುಪಿ:ಯುವ ಜನರಿಗೆ ಸೃಜನ ಶೀಲತೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

ಉಡುಪಿ: ಯುವ ಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಭಾರತೀಯ ರೆಡ್‌ಕ್ರಾಸ್‌ನ ಸಹಯೋಗದೊಂದಿಗೆ ಫೆಬ್ರವರಿ 12 ಮತ್ತು 13 ರಂದು ಎರಡು ದಿನಗಳ ತರಬೇತಿ ಶಿಬಿರವನ್ನು ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಏರ್ಪಡಿಸಲಾಗಿದೆ. ಜಿಲ್ಲೆಯ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಅಧ್ಯಯನ ಮಾಡುತ್ತಿರುವ ಮತ್ತು ಪದವಿ ಪೂರ್ಣಗೊಳಿಸಿದ 29 ವರ್ಷದ ಒಳಗಿನ ಯುವ ಜನರು ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ, […]

ಉಡುಪಿ:ಮಾರಣಾಂತಿಕ ರೋಗ ಕ್ಯಾನ್ಸರ್ ಬಗ್ಗೆ ಜನಜಾಗೃತಿಯಿಂದ ಆರಂಭಿಕ ಪತ್ತೆ ಹಾಗೂ ಚಿಕಿತ್ಸೆ ಸಾಧ್ಯ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಕ್ಯಾನ್ಸರ್ ಮಾರಣಾಂತಿಕ ರೋಗವಾಗಿದ್ದು, ರೋಗದ ಆರಂಭಿಕ ಪತ್ತೆಯಿಂದ ಅನೇಕ ಜೀವಗಳನ್ನು ಉಳಿಸಬಹುದು.ಅನಾರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ಬರುವ ಸಂಭವ ಹೆಚ್ಚು. ರೋಗ ಹಾಗೂ ಆರಂಭಿಕ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿಮೂಡಿಸಿದಾಗ ಕ್ಯಾನ್ಸರ್ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಗ್ಗಿಸಿ ಆರೋಗ್ಯಯುಕ್ತ ಜೀವನವನ್ನು ನಮ್ಮದಾಗಿಸಿಕೊಳ್ಳಬಹುದು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಆದರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆದರ್ಶ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್,ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸಾಂಕ್ರಾಮಿಕ ರೋಗಗಳ […]