ಉಡುಪಿ:ಉತ್ತಮ ಆರೋಗ್ಯದಿಂದ ಶೈಕ್ಷಣಿಕ ಪ್ರಗತಿ ಸಾಧ್ಯ: ದಿನಕರ ಹೇರೂರು

ಉಡುಪಿ: ಆರೋಗ್ಯ ಮತ್ತು ಶಿಕ್ಷಣ ಒಂದಕ್ಕೊಂದು ಪೂರಕ. ಉತ್ತಮ ಆರೋಗ್ಯ ಹೊಂದಿದ್ದಾಗ ಪಾಠಗಳ ಬಗ್ಗೆ ಆಸಕ್ತಿ ಹೆಚ್ಚಿ ಕಲಿತದ್ದು ನೆನಪಿನಲ್ಲಿ ಉಳಿಯುತ್ತದೆ. ಇದರಿಂದಾಗಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯನ್ನು ಸಾಧಿಸುತ್ತಾರೆ. ರಾಷ್ಟ್ರೀಯ ಜಂತು ಹುಳು ನಿವಾರಣೆ ಕಾರ್ಯಕ್ರಮವು ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಲು ಸರ್ಕಾರದ ವತಿಯಿಂದ ನಡೆಸಲಾಗುವಉಪಕ್ರಮವಾಗಿದ್ದು, ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ ಎಂದು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು […]
ಉಡುಪಿ:ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ರ‍್ಯಾಲಿ ಯಶಸ್ವಿಗೊಳಿಸಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಉಡುಪಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ರ‍್ಯಾಲಿಯು ಇದೇಫೆಬ್ರವರಿ 18 ರಂದು ಜಿಲ್ಲೆಯಲ್ಲಿ ಸಂಚರಿಸಲಿದೆ. ಈ ಸೈಕ್ಲಿಂಗ್ ರ‍್ಯಾಲಿಯನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಸಿ.ಐ.ಎಸ್.ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಂದೇ ಮಾತರಂ ಗೀತೆಯು 150 […]