ಉಡುಪಿ: ಪಿಕಪ್ ವಾಹನ ಹರಿದು ದ್ವಿಚಕ್ರ ವಾಹನ ಸವಾರಗೆ ಗಂಭೀರ ಗಾಯ

ಉಡುಪಿ: ಪಿಕಪ್ ವಾಹನವೊಂದು ಮೈಮೇಲೆ ಹರಿದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಮುಂಭಾಗ ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಗಂಭೀರ ಗಾಯಗೊಂಡ ಸವಾರನನ್ನು ಗೋಪಾಲ್ ಸಗ್ರಿ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಮಣಿಪಾಲ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎಂಜಿಎಂ ಕಾಲೇಜಿನ ಮುಂಭಾಗದಲ್ಲಿರುವ ಡಿವೈಡರ್ ಬಳಿ ಮತ್ತೊಂದು ಬೈಕ್ ಸವಾರನೋರ್ವ ಒಮ್ಮೇಲೆ ತಿರುವು ತೆಗೆದುಕೊಂಡು ರಸ್ತೆಗೆ ನುಗ್ಗಿದ್ದು, ಇದರಿಂದ ನಿಯಂತ್ರಣ ಕಳೆದುಕೊಂಡ ಗೋಪಾಲ್ […]

ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಯೋಧನಿಗೆ ಅದ್ಧೂರಿ ಸ್ವಾಗತ

ಉಡುಪಿ: ಭಾರತೀಯ ಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ಹುಟ್ಟೂರಿಗೆ ಮರಳುತ್ತಿರುವ ಸೇನಾನಿ ಪೆರ್ಡೂರು ದೂಪದಕಟ್ಟೆಯ ರಮೇಶ್ ಕುಲಾಲ್ ಇವರನ್ನು ಉಡುಪಿ ರೈಲ್ವೆ ನಿಲ್ದಾಣದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರ್ ನವೀನ್ ಶೆಟ್ಟಿಯವರು ಹೂಬೊಕ್ಕೆಯನ್ನು ಕೊಟ್ಟು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಕಾರ್ಯದರ್ಶಿ ಗಿರೀಶ್ ಅಂಚನ್, ಪಕ್ಷದ ಮಾಜಿ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ […]

ಕೋಟೆಕಾರು: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಅವಘಡ; ನೋಡು ನೋಡುತ್ತಿದ್ದಂತೆ ಧಗಧಗನೆ ಹೊತ್ತಿಉರಿದ ಕಾರು!

ಉಳ್ಳಾಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿಉರಿದ ಘಟನೆ ಮಂಗಳೂರು ಉಳ್ಳಾಲದ ಕೋಟೆಕಾರು ಅಡ್ಕ ಬಳಿ ರಾ.ಹೆ 66 ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ತಲಪಾಡಿ ನಿವಾಸಿ ರಿಯಾಝ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್ ಒಂದರಲ್ಲಿ ದುರಸ್ತಿಗೊಳಿಸಲಾಗಿದ್ದ ತನ್ನ ಓಮ್ನಿ ಕಾರನ್ನು ವಾಪಸು ಪಡೆದು ಪೆಟ್ರೋಲ್ ತುಂಬಿಸಿ ತಲಪಾಡಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಹತ್ತಿದ ವಿಚಾರ ರಿಯಾಝ್ ಅವರ ಗಮನಕ್ಕೆ ಬಂದಿಲ್ಲ. ಈ ವೇಳೆ ಹಿಂದಿನಿಂದ […]

ಉಡುಪಿ: ಕೇಂದ್ರದ ನಾಲ್ಕು ಲೇಬರ್ ಕೋಡ್ ಹಿಂಪಡೆಯುವಂತೆ ಒತ್ತಾಯಿಸಿ ರಸ್ತೆ ತಡೆ- ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರದ ನಾಲ್ಕು ಲೇಬರ್ ಕೋಡ್ ಹಿಂಪಡೆಯಲು ಹಾಗೂ ಕೇಂದ್ರ ಸರ್ಕಾರದ ಕಾಯ್ದೆ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡದಂತೆ ಆಗ್ರಹಿಸಿ ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು. ಉಡುಪಿ ಸರ್ವಿಸ್ ನಿಲ್ದಾಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಕೆಎಂ ಮಾರ್ಗ, ಕೋರ್ಟ್ ರೋಡ್ ಮೂಲಕ ಸಾಗಿ ಜೋಡುಕಟ್ಟೆ ಬಳಿ ರಸ್ತೆ ತಡೆ ನಡೆಸುವ ಮೂಲಕ ಮುಕ್ತಾಯಗೊಂಡಿತು.ಜೋಡುಕಟ್ಟೆಯಲ್ಲಿ ರಸ್ತೆತಡೆ ನಡೆಸಿ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. […]

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್ ಆ್ಯಂಡ್ ಟಿಪ್ಪರ್ ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯೋಪಾಧ್ಯಾಯ

ಬೆಳ್ತಂಗಡಿ : ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನು ಬಾಹಿರವಾಗಿ ಸರಕು ಸಾಗಣೆಯಂತೆ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರ ನೇತೃತ್ವದಲ್ಲಿ ಫೆ.10 ರಂದು ಬೆಳಗ್ಗೆ ಶಾಲಾ ಮಕ್ಕಳನ್ನು KA-21-A-8776 […]