ಬ್ರಹ್ಮಾವರ: ಫೆ.16 ರಿಂದ 28 ರವರೆಗೆ ಕೃಷಿ ಉದ್ಯಮಿ ತರಬೇತಿ

ಬ್ರಹ್ಮಾವರ:ಬ್ರಹ್ಮಾವರ ಸಮೀಪ ಹೇರೂರು ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗಿ ಆಕಾಂಕ್ಷಿಗಳಿಗೆ ಉಚಿತ ಕೃಷಿ ಉದ್ಯಮಿ ತರಬೇತಿ ಕಾರ್ಯಕ್ರಮವನ್ನು 16-02-2026 ರಿಂದ 28-02-2026 ರವರೆಗೆ ಆಯೋಜಿಸಲಾಗಿದೆ. ತರಬೇತಿಗೆ ಸೇರಲು ಬೇಕಾಗಿರುವ ಅರ್ಹತೆಗಳು:🔹 18 ರಿಂದ 50 ವರ್ಷ ವಯೋಮಿತಿಯಲ್ಲಿರಬೇಕು.🔹ಕನ್ನಡ ಓದು ಬರಹ ಬಲ್ಲವರಾಗಿರಬೇಕು.🔹ಸ್ವ ಉದ್ಯೋಗ ಆರಂಭಿಸಲು ಆಸಕ್ತಿ ಇರಬೇಕು.🔹ಗ್ರಾಮಾಂತರ ಪ್ರದೇಶದವರು, BPL ಕಾರ್ಡ್ ಹೊಂದಿರಬೇಕು. ಉಚಿತ ತರಬೇತಿ: ಕೋಳಿ ಸಾಕಾಣಿಕೆ:ಕೋಳಿ ಸಾಕಾಣಿಕೆ, ಬ್ರಾಯ್ಲರ್ ಮತ್ತು ಊರ ಕೋಳಿ ಸಾಕಾಣಿಕೆ, ಆಹಾರ ವಿಧಾನ, ಮೊಟ್ಟೆ ಉತ್ಪಾದನೆ,ಮುಂಜಾಗ್ರತಾ ಕ್ರಮಗಳು. ಜೇನು […]

ಉಡುಪಿ:ಮಾನವ – ಹಾವುಗಳ ಸಂವಹನ ತುರ್ತು ಪ್ರತಿಕ್ರಿಯೆ ತರಬೇತಿ ಕಾರ್ಯಗಾರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ವಿಭಾಗ, ಕುಂದಾಪುರ, ಇವರ ಜಂಟಿ ಆಶ್ರಯದಲ್ಲಿ, ಮಾನವ – ಹಾವುಗಳ ಸಂವಹನ ತುರ್ತು ಪ್ರತಿಕ್ರಿಯೆ ತರಬೇತಿ ಕಾರ್ಯಗಾರವು ಇಂದು ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ.ಜಿ.ಹುಬ್ಭಳ್ಳಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.ಜಿಲ್ಲಾ […]

ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ: ಆರೋಪಿ ಖುಲಾಸೆ

ಮಂಗಳೂರು: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಪ್ರಕರಣವೊಂದರ ಆರೋಪಿಯನ್ನು ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ‘ಆರೋಪಿಯು 2025ರ ಜುಲೈ ಎರಡನೇ ವಾರದಲ್ಲಿ ಬಾಲಕಿಯನ್ನು ಬೈಕ್‌ನಲ್ಲಿ ಕಾಪು ಕಿನಾರೆಗೆ ಕರೆದೊಯ್ದು ಅರಣ್ಯ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ ಮತ್ತು ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆಯನ್ನೂ ಹಾಕಿದ್ದ’ ಎಂದು ಮೂಲ್ಕಿ ಠಾಣೆಯಲ್ಲಿ 2025ರ ಜುಲೈ 23ರಂದು ದೂರು ದಾಖಲಾಗಿತ್ತು. ಆರೋಪಿಯನ್ನು ಪೊಲೀಸರು ಅದೇ ದಿನ ಬಂಧಿಸಿದ್ದರು. ಸಂತ್ರಸ್ತ […]

ಉಡುಪಿ:ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಾತ್ರಾ ಮಹೋತ್ಸವ : ಮದ್ಯ ಮಾರಾಟ ನಿಷೇಧ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಹೆಗ್ಗುಂಜೆ ಗ್ರಾಮ ಪಂಚಾಯತ್ […]

ಉಡುಪಿ:ಉತ್ತಮ ನಾಯಕತ್ವ ಕೌಶಲ್ಯಗಳನ್ನು ಯುವಜನರು ಅಳವಡಿಸಿಕೊಳ್ಳಿ : ಬಸ್ರೂರು ರಾಜೀವ್ ಶೆಟ್ಟಿ

ಉಡುಪಿ: ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ಯುವಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನ ಶಿಬಿರವನ್ನು ಆಯೋಜಿಸಲಾಗಿದ್ದು, ಯುವಜನತೆತರಬೇತಿಯ ಲಾಭ ಪಡೆದುಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಾಗಬೇಕು ಎಂದು ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು. ಅವರು ಗುರುವಾರ ನಗರದ ಬ್ರಹ್ಮಗಿರಿಯ ಭಾರತೀಯ ರೆಡ್‌ಕ್ರಾಸ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಘಟಕ ಉಡುಪಿ ಜಿಲ್ಲೆ ಇವರ […]