ಉಡುಪಿ: ಪಿಕಪ್ ವಾಹನ ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು

ಉಡುಪಿ: ಪಿಕಪ್ ವಾಹನವೊಂದು ಮೈಮೇಲೆ ಹರಿದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಮುಂಭಾಗ ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಸವಾರನನ್ನು ಗೋಪಾಲ್ ಸಗ್ರಿ (65) ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಮಣಿಪಾಲ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎಂಜಿಎಂ ಕಾಲೇಜಿನ ಮುಂಭಾಗದಲ್ಲಿರುವ ಡಿವೈಡರ್ ಬಳಿ ಮತ್ತೊಂದು ಬೈಕ್ ಸವಾರನೋರ್ವ ಒಮ್ಮೇಲೆ ತಿರುವು ತೆಗೆದುಕೊಂಡು ರಸ್ತೆಗೆ ನುಗ್ಗಿದ್ದು, ಇದರಿಂದ ನಿಯಂತ್ರಣ ಕಳೆದುಕೊಂಡ ಗೋಪಾಲ್ ಅವರು […]