ಮುನಿಯಾಲು ಗೋಧಾಮಕ್ಕೆ ಶಾಸಕ ಸುನಿಲ್‌ ಕುಮಾ‌ರ್ ಭೇಟಿ

ಉಡುಪಿ: ಫೆ.19-21 ರ ವರೆಗೆ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ನಡೆಯಲಿರುವ ಶ್ರೀಮನ್ನಾಗಮಂಡಲದ ಹಿನ್ನೆಲೆಯಲ್ಲಿ ಗೋದಾಮಕ್ಕೆ ಕಾರ್ಕಳ ಶಾಸಕ, ಮಾಜಿ ಸಚಿವರಾದ ವಿ.ಸುನಿಲ್‌ ಕುಮಾರ್ ಭೇಟಿ ನೀಡಿದರು. ನಾಗಮಂಡಲದ ಹಿನ್ನೆಲೆಯಲ್ಲಿ ಗೋಧಾಮದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭ ಕಡ್ತಲ ಗ್ರಾಮ ಪಂಚಾಯತ್‌ ಅಧ್ಯಕ್ಷ ಸುಕೇಶ್ ಹೆಗ್ಡೆ ಕಡ್ತಲ, ನಾಗಮಂಡಲ ಸಮಿತಿಯ ಕಾರ್ಯದರ್ಶಿ ದಾಮೋಧರ ಶರ್ಮ, ಜ್ಯೋತಿ ಹರೀಶ್, ಗೋಧಾಮದ ರಕ್ಷಿತ್ ಆಚಾರ್ಯ, ಪ್ರಕಾಶ್ ಶೆಟ್ಟಿ, ಸುಹಾಸ್‌ ಶೆಟ್ಟಿ, ಆಶಿತ್, ದಯಾನಂದ್ ಕೆ. ಮತ್ತಿತರರು ಉಪಸ್ಥಿತರಿದ್ದರು.

ಚರಂಡಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು!

ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕ 5 ವರ್ಷದ ಅವಿನಾಶ್. ಆಟವಾಡುವ ವೇಳೆ ಮನೆಯ ಮುಂದಿನ ಚರಂಡಿ ಕಾಲುವೆಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಶುಕ್ರವಾರ ಸಂಜೆ 6 ಗಂಟೆಯಿಂದ ಕಾಣೆಯಾಗಿದ್ದ ಬಾಲಕನಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದರು. ಆದರೆ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಮೃತಪಟ್ಟಿರುವುದು ಗೊತ್ತಾಗಿದೆ. […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್ ಡಿ ಆರ್ ಎಫ್ ಸಹಭಾಗಿತ್ವದಲ್ಲಿ ವಿಪತ್ತು ನಿರ್ವಹಣಾ ಜಾಗೃತಿ ಕಾರ್ಯಕ್ರಮ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ, 10ನೇ ಬೆಟಾಲಿಯನ್ ಹಾಗೂ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಇದರ ಸಹಯೋಗದೊಂದಿಗೆ ವಿಪತ್ತು ನಿರ್ವಹಣೆ – ಎನ್‌ಡಿಆರ್‌ಎಫ್ ಪರಿಚಯ ಹಾಗೂ ಸಮುದಾಯ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 13 ಫೆಬ್ರವರಿ 2026 ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ವಿದ್ಯಾರ್ಥಿಗಳು ಮತ್ತುಸಮುದಾಯದವರಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳು, ತುರ್ತು ಪ್ರಕ್ರಿಯೆ ವಿಧಾನಗಳು ಮತ್ತು ಜೀವ […]

ಮುನಿಯಾಲು ಶ್ರೀಮನ್ನಾಗಮಂಡಲದಲ್ಲಿ “ರೈತಪೀಠ” ಪ್ರಶಸ್ತಿ ಪ್ರದಾನ.

ಮುನಿಯಾಲು: ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 19ರಿಂದ 21 ರ ತನಕ ನಡೆಯುವ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದಲ್ಲಿ ಫೆಬ್ರವರಿ 20ರಂದು ಸಂಜೆ ಶ್ರೀನಿವಾಸ ಸಭಾಮಂಟಪದಲ್ಲಿ ರೈತಪೀಠ ಪ್ರಶಸ್ತಿ ಪ್ರಧಾನ ನಡೆಯಲಿದೆ. 240ಕ್ಕೂ ಹೆಚ್ಚು ಭಾರತೀಯ ಭತ್ತದ ತಳಿಗಳನ್ನು ಸಂರಕ್ಷಣೆ ಮಾಡಿದ ಅಪರೂಪದ ಕೃಷಿಕ ಋಷಿ ಬಿ.ಕೆ.ದೇವರಾಯ ಮಿತ್ತಬಾಗಿಲು ಅವರು ಮೂಡಬಿದರೆ ಎಸ್‌ ಕೆಎಫ್‌ ಸಂಸ್ಥೆ ನೀಡುವ ನೂತನ ಪ್ರಥಮ ರೈತಪೀಠ ಪ್ರಶಸ್ತಿಯನ್ನು ಸ್ವೀಕರಿಸುವರು. ತಮ್ಮ ಬದುಕನ್ನೇ ಕೃಷಿ ಕಾಯಕಕ್ಕೆ ಅರ್ಪಿಸಿರುವ […]

ಕುಂದಾಪುರ: ಎಂಐಟಿಕೆ “ಇನ್ಫೋ ಸ್ಪಾರ್ಕ್” ಉದ್ಘಾಟನೆ.

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (MCA) ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ನವೀನ ಚಿಂತನೆಗಳನ್ನು ಉತ್ತೇಜಿಸುವ ಉದ್ದೇಶದಿಂದ ನೂತನ ವೇದಿಕೆಯಾದ “ಇನ್ಫೋ ಸ್ಪಾರ್ಕ್” ಅನ್ನು ಉದ್ಘಾಟಿಸಿತು. ವಿಭಾಗದ ಮುಖ್ಯಸ್ಥರಾದ ಡಾ. ಟಿ. ನಂದಿನಿ ಅವರು ಸ್ವಾಗತಿಸಿ, “ಇನ್ಫೋ ಸ್ಪಾರ್ಕ್” ವೇದಿಕೆಯು ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ವೃದ್ಧಿಸುವ ದಿಕ್ಕಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳು ಇದರ […]