ಮುನಿಯಾಲು: ಫೆ.19ರಿಂದ 21ರವರೆಗೆ ಶ್ರೀಮನ್ನಾಗಮಂಡಲ ಪವಿತ್ರ ಕಾರ್ಯಕ್ರಮ; ಆಮಂತ್ರಣ ಪತ್ರಿಕೆ ವಿತರಣೆ

ಉಡುಪಿ: ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದಲ್ಲಿ ಫೆ.19ರಿಂದ 21ರವರೆಗೆ ನಡೆಯಲಿರುವ ಶ್ರೀಮನ್ನಾಗಮಂಡಲ ಪವಿತ್ರ ಕಾರ್ಯಕ್ರಮವಾಗಿದ್ದು, ಭಕ್ತರು ಕುಟುಂಬ ಸಮೇತ ಭಾಗವಹಿಸಬೇಕು ಎಂದು ಶ್ರೀಮನ್ನಾಗಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್‌.ಆರ್. ದಾಮೋದರ ಶರ್ಮಾ ಬಾರ್ಕೂರು ಹೇಳಿದರು. ಧಾರ್ಮಿಕ ಮುಖಂಡ ಭಾಸ್ಕರ ಜೋಯಿಸ್ ಮಾತನಾಡಿದರು. ಎಲ್ಲರಿಗೂ ಆಮಂತ್ರಣ ಪತ್ರಿಕೆ ವಿತರಿಸಲಾಯಿತು. ಹೆಬ್ರಿಯ ಟಿ.ಜಿ. ಆಚಾರ್ಯ, ಮುನಿಯಾಲು ಗೋಧಾಮದ ರಕ್ಷತ್ ಆರ್. ಆಚಾರ್, ಗ್ರಾಮ ಪಂಚಾಯಿತಿ ಪೂರ್ವಾಧ್ಯಕ್ಷ ಎಚ್‌.ಕೆ. ಸುಧಾಕರ್, ರವೀಂದ್ರ ಪುರೋಹಿತ್ ಹೆಬ್ರಿ, ದಿನೇಶ ಶೆಟ್ಟಿ, ಶ್ರೀರಾಮ ಮಂಟಪದ ಅಧ್ಯಕ್ಷ […]

ಗೋಧಾಮದಿಂದ ಮುನಿಯಾಲಿಗೆ ಜಾಗತಿಕ ಮಟ್ಟದಲ್ಲಿ ಹೆಸರು

ಉಡುಪಿ: ಯುವಸಮುದಾಯವನ್ನು ಕೃಷಿಯತ್ತ ಆಕರ್ಷಿಸಲು ವಿಶೇಷ ಯೋಚನೆ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ಮುನಿಯಾಲಿನಲ್ಲಿ ಸಂಜೀವಿನಿ ಗೋಧಾಮವನ್ನು ಕೃಷಿ ಸಂಶೋಧನಾ ಕೇಂದ್ರದಂತೆ ನಿರ್ಮಿಸಿದ್ದಾರೆ. ಆ ಮೂಲಕ ಕೈಗಾರಿಕೋಧ್ಯಮಿಯೊಬ್ಬರು ಕೃಷಿಗೆ ಆದ್ಯತೆ ನೀಡುತ್ತಿರುವುದು ಮಹಾನ್‌ ಕಾರ್ಯ. ಗೋಧಾಮದ ಮೂಲಕ ಮುನಿಯಾಲಿನ ಹೆಸರು ಜಾಗತಿಕಮಟ್ಟದಲ್ಲಿ ರಾರಾಜಿಸುವಂತೆ ಆಗಿದೆ ಎಂದು ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಹೇಳಿದರು. ಅವರು ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 19ರಿಂದ 21ತನಕ ನಡೆಯುವ ಏಕಪವಿತ್ರ […]

ಮಣಿಪಾಲ- ಪೆರಂಪಳ್ಳಿ ಕಾಂಕ್ರೀಟ್ ರಸ್ತೆ ಸಂಚಾರಕ್ಕೆ ಮುಕ್ತ

ಉಡುಪಿ: ಕಾಂಕ್ರೀಟ್ ರಸ್ತೆ ಕಾಮಗಾರಿಯಿಂದಾಗಿ ಕಳೆದ ಒಂದು ತಿಂಗಳಿನಿಂದ ಬಂದ್ ಆಗಿದ್ದ ಪೆರಂಪಳ್ಳಿ- ಮಣಿಪಾಲ ರಸ್ತೆಯು ಶುಕ್ರವಾರದಿಂದ ಸಂಚಾರಕ್ಕೆ ಮುಕ್ತಗೊಂಡಿದೆ. ಮಣಿಪಾಲದ ಬಿವಿಟಿಯಿಂದ ಪೆರಂಪಳ್ಳಿಯ ಸಾಯಿರಾಧ ಗ್ರೀನ್ ವ್ಯಾಲಿಯವರೆಗೆ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾರಣದಿಂದ ಕಳೆದ ಒಂದು ತಿಂಗಳಿನಿಂದ ರಸ್ತೆಯನ್ನು ಮುಚ್ಚಲಾಗಿದೆ. ಇದೀಗ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೆರಂಪಳ್ಳಿ- ಮಣಿಪಾಲ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.

ಉಡುಪಿ:ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಕಛೇರಿ, ಹೋಟೆಲ್, ಬ್ಯಾಂಕ್, ಕಂಪೆನಿಗಳು, ಅಂಗಡಿಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿರುವಂತೆ ಹಾಗೂ ನಾಮಫಲಕದ ಜೊತೆಗೆ ಆ ಸ್ಥಳದ ಐತಿಹ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿಊರಿನ ಹೆಸರನ್ನು ಸಹ ನಮೂದಿಸುವುದು ಕಡ್ಡಾಯವಾಗಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು, ತಮ್ಮ ಉದ್ದಿಮೆಯ ನಾಮಫಲಕದಲ್ಲಿ ಊರಿನ ಹೆಸರಿನೊಂದಿಗೆ ಕನ್ನಡದಲ್ಲಿ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಮತ್ತು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕವನ್ನು ಶೇ.60ರಷ್ಟು ಪ್ರದರ್ಶಿಸಬೇಕು. ಈವರೆಗೂ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳದ/ನವೀಕರಿಸದೇ ಇರುವ […]

ಉಡುಪಿ:ಫೆ.15 ರಂದು ಸಂತ ಸೇವಾಲಾಲ ಜಯಂತಿ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೃಷ್ಣ ನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವು ಫೆಬ್ರವರಿ 15 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. […]