ಉಡುಪಿ:ಕಾಳುಮೆಣಸು ಮತ್ತಿತರೆ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು ಕುರಿತು ತರಬೇತಿ

ಉಡುಪಿ: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಚಿಕ್ಕಮಗಳೂರು ಇವರ ಸಹಯೋಗದಲ್ಲಿ “ಕಾಳುಮೆಣಸು ಮತ್ತಿತರೆ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು ಫೆಬ್ರವರಿ 17 ರಂದು ಬೆಳಗ್ಗೆ 10 ಗಂಟೆಗೆ ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ತರಬೇತಿಯನ್ನು ಸಂಬಾರು ಬೆಳೆಗಳ ವಿವಿಧ ವಿಷಯ ತಜ್ಞರು ನೀಡಲಿದ್ದು, ಸಂಬಾರು ಬೆಳೆಗಾರರು, ರೈತ […]
ಉಡುಪಿ:ಮಾನವ ಹಕ್ಕು ಉಲ್ಲಂಘನೆ : ಸಾರ್ವಜನಿಕರಿಂದ ದೂರು ಸ್ವೀಕಾರ

ಉಡುಪಿ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಹಣಾ ಅಧ್ಯಕ್ಷರಾದ ಡಾ.ಟಿ.ಶಾಂ ಭಟ್ ಹಾಗೂಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ಫೆಬ್ರವರಿ 18 ಮತ್ತು 19 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಆಯೋಗದ ಮುಂದೆ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ನಡೆಸುವುದರ ಜೊತೆಗೆ ಮಾನವ ಹಕ್ಕು ಉಲ್ಲಂಘನೆಗಳಿಗೆ ಸಂಬಂಧಿಸಿದ ಹೊಸ ದೂರುಗಳನ್ನು ಸ್ವೀಕರಿಸಲಿದ್ದಾರೆ. ಫೆ. 19 ರಂದು ಮಣಿಪಾಲದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪೂರ್ಣ ಪೀಠ ಸಭೆಗಳನ್ನು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಹಾಗೂ […]
ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಮೂಡುಗಿಳಿಯಾರು ನಿವಾಸಿ ಚೆನ್ನ ಪೂಜಾರಿ (52) ಎಂಬ ವ್ಯಕ್ತಿಯು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕಳೆದ ಏಳು ತಿಂಗಳಿನಿಂದ ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಿವುಡ ಹಾಗೂ ಮೂಗರಾಗಿರುತ್ತಾರೆ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂ: 0820-2564155, ಮೊ.ನಂ: 9480805454 ಅಥವಾ ಉಡುಪಿ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ:0820-2561966, ಮೊ.ನಂ: 9480805432 […]
ಉಡುಪಿ:ಗಾರೆ ಕೆಲಸಗಾರ ನಾಪತ್ತೆ

ಉಡುಪಿ: ಉಡುಪಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಬಸಪ್ಪ ಛಲವಾದಿ(50) ಎಂಬ ವ್ಯಕ್ತಿಯು ಜುಲೈ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಅಗಲ ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475, 8277988945 ಹಾಗೂ ಉಡುಪಿ ಕಂಟ್ರೋಲ್ ರೂಂ […]