ಉಡುಪಿ ಪ್ರಸಿದ್ಧ ಹೋಟೆಲ್‌ನಲ್ಲಿ ಉದ್ಯೋಗಾವಕಾಶ

ಉಡುಪಿ: ಉಡುಪಿ ನಗರದ ಪ್ರಸಿದ್ಧ ಹೋಟೆಲ್ ಒಂದರಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೋಟೆಲ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಪುರುಷರು ಹಾಗೂ ಮಹಿಳೆಯರಿಗೆ ಇದು ಉತ್ತಮ ಅವಕಾಶವಾಗಿದೆ. ಲಭ್ಯವಿರುವ ಹುದ್ದೆಗಳು: ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿದ್ದರೆ ಪ್ರಾಧಾನ್ಯ ನೀಡಲಾಗುತ್ತದೆ. ಆಸಕ್ತರು ತಕ್ಷಣ ಸಂಪರ್ಕಿಸಬಹುದು.ಸಂಪರ್ಕಿಸಿ:📞 +91 9449104708
ಕಾರ್ಕಳ: ದ್ವಿಚಕ್ರ ವಾಹನ ಸ್ಕಿಡ್; ಸಹಸವಾರೆ ಮೃತ್ಯು

ಕಾರ್ಕಳ: ನಗರದ ಸರ್ವಜ್ಞ ಸರ್ಕಲ್‌ನಿಂದ ನಕ್ರೆಯ ಕಡೆಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಹ ಸವಾರೆ ಕುಕ್ಕುಂದೂರು ಗ್ರಾಮದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಾವಿಗೀಡಾಗಿದ್ದಾರೆ. ಜಯಲಕ್ಷ್ಮಿ ಮೃತಪಟ್ಟವರು. ಅವರ ತಲೆ ಹಾಗೂ ಇನ್ನಿತರ ಕಡೆಗಳಲ್ಲಿ ಗಂಭೀರ ಗಾಯಗಳಾಗಿದ್ದವು. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೂ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಳ್ಳಾಡಿ ಜಯರಾಮ ಶೆಟ್ಟರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ಪ್ರದಾನ

ಉಡುಪಿ: ಹಳ್ಳಾಡಿ ಜಯರಾಮ ಶೆಟ್ಟಿ ಅವರಂತಹ ಹಿರಿಯ ಯಕ್ಷಗಾನ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತೋಷ ತಂದಿದೆ. ಅವರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ನೀಡಿರುವುದು ನೈಜ ಸಾಧಕನಿಗೆ ಸಂದ ಗೌರವವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಧರ್ಮಪತ್ನಿ ಜಿ. […]
ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕಿನ ಮೂಡುತೋನ್ಸೆ ಗ್ರಾಮದ ನೇಜಾರು ರಾಜೀವ ನಗರದ ನಿವಾಸಿ ಸತೀಶ್ (43) ಎಂಬ ವ್ಯಕ್ತಿಯುಕಳೆದ ಡಿಸೆಂಬರ್ ತಿಂಗಳಿನಲ್ಲಿ ಮನೆಯಿಂದ ಕೆಲಸಕ್ಕೆಂದು ತೆರಳಿದ್ದವರು ವಾಪಸು ಬರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು ತುಳು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಮಲ್ಪೆ ಪಿ.ಎಸ್.ಐ ನಂ:9480805447, ಮಲ್ಪೆ ವೃತ್ತ ನಿರೀಕ್ಷಕರುಮೊ.ನಂ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾ […]
ಉಡುಪಿ:ಮಾನವ ಹಕ್ಕು ಉಲ್ಲಂಘನೆ : ಸಾರ್ವಜನಿಕರಿಂದ ದೂರು ಸ್ವೀಕಾರ

ಉಡುಪಿ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಹಣಾ ಅಧ್ಯಕ್ಷರಾದ ಡಾ.ಟಿ.ಶಾಂ ಭಟ್ ಹಾಗೂಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ಫೆಬ್ರವರಿ 18 ಮತ್ತು 19 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಆಯೋಗದ ಮುಂದೆ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ನಡೆಸುವುದರ ಜೊತೆಗೆ ಮಾನವ ಹಕ್ಕು ಉಲ್ಲಂಘನೆಗಳಿಗೆ ಸಂಬಂಧಿಸಿದ ಹೊಸ ದೂರುಗಳನ್ನು ಸ್ವೀಕರಿಸಲಿದ್ದಾರೆ. ಫೆ. 19 ರಂದು ಮಣಿಪಾಲದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪೂರ್ಣ ಪೀಠ ಸಭೆಗಳನ್ನು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಹಾಗೂ […]