ಏಪ್ರಿಲ್ ನಲ್ಲಿ 5 ರಾಜ್ಯಗಳ ಚುನಾವಣೆ; ಮಾರ್ಚ್ ನಲ್ಲಿ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ.!

ನವದೆಹಲಿ: ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ವಿಧಾನಸಭೆಗಳಿಗೆ ಏಪ್ರಿಲ್‌ನ ವಿವಿಧ ದಿನಾಂಕಗಳಲ್ಲಿ ಚುನಾವಣೆ ನಡೆಯಲಿವೆ. ಮಾರ್ಚ್‌ ಮಧ್ಯಭಾಗದಲ್ಲಿ ಆಯೋಗ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಐದು ರಾಜ್ಯಗಳ ವಿಧಾನಸಭೆ ಅವಧಿಯು ಮೇ ಮತ್ತು ಜೂನ್‌ನಲ್ಲಿ ಅಂತ್ಯಗೊಳ್ಳಲಿದೆ. ಆಯೋಗವು ಮಾರ್ಚ್‌ ಮಧ್ಯಭಾಗದಲ್ಲಿ ಒಟ್ಟಿಗೆ ಚುನಾವಣೆ ನಡೆಸಲು ಅಧಿಸೂಚನೆ ಘೋಷಣೆ ಮಾಡಬಹುದು. ಆಯೋಗದ ಅಧಿಕಾರಿಗಳು ಈಗಾಗಲೇ ಐದೂ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಅಸ್ಸಾಂನಲ್ಲಿ ಚುನಾವಣೆ ಸಿದ್ಧತೆ […]

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ(ಫೆ.19) ರಮಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ. ಉಳ್ಳಾಲ ಖಾಝಿ ಎ.ಪಿ ಅಬೂಬಕ್ಕರ್ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಳಿ ಮುಸ್ಲಿಯಾ‌ರ್ ತಿಳಿಸಿರುತ್ತಾರೆಂದು ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ […]

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಕ್ರೈನ್

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೈನ್ ಹರಿದ ಘಟನೆ ಉಡುಪಿ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ನಡೆದಿದೆ. ವ್ಯಕ್ತಿಯು ಕ್ರೈನ್ ನ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಎದುರಿನಲ್ಲಿ ಬರುತ್ತಿದ್ದ ಕಾರಿಗೆ ಸೈಡ್ ಕೊಡುವ ಭರದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಾಲಕ ಕ್ರೈನ್ ಹರಿಸಿದ್ದಾನೆ. ಬಳಿಕ ಕ್ರೈನ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫೆ.21ರಂದು “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆ

ಉಡುಪಿ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಪ್ರತಿನಿಧಿ ಜಯಾನಂದ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಆರಂಭಗೊಳ್ಳುವ ತೀರ್ಥಾಟನೆಯು ನಗರದಲ್ಲಿ ಸುಮಾರು 7 ಕಿ.ಮೀ.ಗಳ ನಡಿಗೆಯ ಮೂಲಕ 11 ಗಂಟೆಗೆ ಕುದ್ರೋಳಿ ಕ್ಷೇತ್ರವನ್ನು ತಲುಪಲಿದೆ. ಗುರು ಪ್ರಾರ್ಥನೆಯೊಂದಿಗೆ ಆರಂಭಗೊಳ್ಳುವ ಈ ತೀರ್ಥಾಟನೆಯು ಕ್ಷೇತ್ರ […]

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ; ಯುವತಿ ಮೃತ್ಯು.!

ಬೆಂಗಳೂರು: ಯುವತಿ ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗವಾಗಿ ಬಂದ ಬುಲೆಟ್ ಬೈಕ್ ಸವಾರನೊಬ್ಬ ಯುವತಿಗೆ ಡಿಕ್ಕಿ ಹೊಡೆದಿದ್ದ ಪರಿಣಾಮ ಯುವತಿಯು ಮೃತಪಟ್ಟಿದ್ದಾರೆ. ಘಟನೆಯು ರಾಜ್‌ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ಫೆ.16 ರಂದು ನಡೆದಿದೆ. ಮೃತಪಟ್ಟ ಯುವತಿಯನ್ನು ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್ ನಿವಾಸಿ 27 ವರ್ಷದ ಯೋಗೇಶ್ವರಿ ಎಂದು ಗುರುತಿಸಿದೆ. ಯೋಗೇಶ್ವರಿ, ನಿನ್ನೆ ಮಧ್ಯಾಹ್ನ ತಮ್ಮ ಕೆಲಸದ ಸ್ಥಳದ ಸಮೀಪ ಊಟಕ್ಕೆಂದು ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರ […]