ಮುನಿಯಾಲು ನಾಗಮಂಡಲಕ್ಕೆ ನಾಗ ಸಾಧುಗಳು ಭೇಟಿ

ಕಾರ್ಕಳ: ಹೆಬ್ರಿ ತಾಲ್ಲೂಕಿನ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಇದೇ 19 ರಿಂದ 21ರ ತನಕ ನಡೆಯಲಿರುವ ಏಕಪವಿತ್ರ ಶ್ರೀಮನ್ನಾಗಮಂಡಲ ನಡೆಯಲಿದ್ದು ಗೋಧಾಮಕ್ಕೆ ಬುಧವಾರ 10ಕ್ಕೂ ಹೆಚ್ಚು ನಾಗಸಾಧುಗಳು ಧಿಢೀರ್ ಭೇಟಿ ನೀಡಿ ನಾಗಮಂಡಲಕ್ಕೆ ಶುಭಾಶೀರ್ವಾದ ನೀಡಿದರು.ಸಂಜೀವಿನಿ ಗೋಧಾಮದ ಸವಿತಾ ಆರ್. ಆಚಾರ್, ರಕ್ಷತ್ ಆರ್ ಆಚಾ‌ರ್, ಶ್ರೀಮನ್ನಾಗಮಂಡಲ ಸೇವಾ ಸಮಿತಿಯ ಪದಾಧಿಕಾರಿಗಳು, ಉಪ ಸಮಿತಿಯ ಪ್ರಮುಖರು, ವಿಶ್ವಕರ್ಮ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಮಂಗಳೂರು: ಯುವಕ ಆತ್ಮಹತ್ಯೆ

ಮಂಗಳೂರು: ನಗರದ ಐಸ್‌ಕ್ರೀಂ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಕೈ ಕೊಯ್ದುಕೊಂಡು ಬಳಿಕ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕದ್ರಿ ಶಿವಭಾಗ್‌ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೆರುವಾಡ್ ನಿವಾಸಿ ರೋಶನ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಕದ್ರಿ ಪಾರ್ಕ್ ಬಳಿಯ ಐಸ್‌ಕ್ರೀಂ ಅಂಗಡಿಯಲ್ಲಿ ಕೆಲಸಕ್ಕಿದ್ದ ಈತ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ. ಮಂಗಳವಾರ ರಾತ್ರಿ ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ 10 ಗಂಟೆಯಾದರೂ […]

ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 37,337 ಮಂದಿ ಅಭ್ಯರ್ಥಿಗಳು – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು: ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,745 ವಿದ್ಯಾರ್ಥಿಗಳು ಮತ್ತು 18592 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 37,337 ಮಂದಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. ತಿಳಿಸಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು 15 ಸರಕಾರಿ, 22 ಖಾಸಗಿ ಮತ್ತು 22 ಅನುದಾನರಹಿತ ಖಾಸಗಿ ಕಾಲೇಜುಗಳು ಸೇರಿದಂತೆ 59 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಮಂಗಳೂರು 21, […]

ವಾರ್ತಾಲಾಪ : ಉಡುಪಿ ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ

ಉಡುಪಿ: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ವಾರ್ತಾಲಾಪ – ಉಡುಪಿ ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರವು ಫೆಬ್ರವರಿ 24 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ […]

ಉಡುಪಿ:ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ನಿಂದ ಕಡಲ ಭದ್ರತೆ ಬಗ್ಗೆ ಜಾಗೃತಿ: ಸಂದೀಪ್ ಚಕ್ರವರ್ತಿ

ಉಡುಪಿ: “ಸುರಕ್ಷಿತ ತಟ್, ಸಮೃದ್ಧ ಭಾರತ್” (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ವಿಷಯದ ಮೇಲೆ ಕೇಂದ್ರಿತ ಸಿಐಎಸ್‌ಎಫ್-ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ 2026 ಅನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು ಆಯೋಜಿಸಿದ್ದು ಇದು ಬೃಹತ್ ರಾಷ್ಟ್ರೀಯ ಜಾಗೃತಿ ಅಭಿಯಾನವಾಗಿದೆ. ಅಭಿಯಾನ ಜನವರಿ 28 ರಂದು ಪ್ರಾರಂಭವಾಗಿ ಫೆಬ್ರವರಿ 22 ರವರೆಗೆ ನಡೆಯಲಿದ್ದು 6,553 ಕಿ.ಮೀ.ಗೂ ಹೆಚ್ಚು ದೂರದ ಈ ಸೈಕಲ್ ಯಾತ್ರೆ, ಕರಾವಳಿ ತೀರದ ಭದ್ರತೆ, ದೇಶಭಕ್ತಿ ಮತ್ತು “ವಂದೇ ಮಾತರಂ” ಗೀತೆಯ 150 ನೇ ವರ್ಷವನ್ನು […]