ಮಲ್ಪೆ: ಮೀನು ವ್ಯಾಪಾರಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಸುಲಿಗೆ: ಓರ್ವ ಆರೋಪಿ ಬಂಧನ

ಉಡುಪಿ: ಮಲ್ಪೆ ಬಂದರು ಸಮೀಪ ಖಾರದ ಪುಡಿ ಎರಚಿ ಮೀನು ವ್ಯಾಪಾರಿಗೆ ಹಲ್ಲೆ ಮಾಡಿ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನಿವಾಸಿ, ಪ್ರಸ್ತುತ ಮಲ್ಪೆ ಕೊಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಮುತ್ತಣ್ಣ (20) ಬಂಧಿತ ಆರೋಪಿ. ದಯಾನಂದ ಕುಂದರ್ ಅವರು ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ ಕೆಲಸ ಮಾಡಿಕೊಂಡಿದ್ದು, ಶೌಚಾಲಯಕ್ಕೆ ಹೋಗಿ ವಾಪಸ್ಸು ಬಂದರು ಕಡೆಗೆ ಬರುತ್ತಿದ್ದಾಗ ಆರೋಪಿ ಮುತ್ತಣ್ಣ […]
ಉಡುಪಿ:ಕರ್ನಾಟಕ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ದೊರಕುವಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಸರ್ಕಾರದ ಹಲವು ಸೇವೆಗಳು ನಗರ ಭಾಗದ ಸಾರ್ವಜನಿಕರ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲೆಯ ಕಾರ್ಕಳ ಹಾಗೂ ಕಾಪು ಪುರಸಭೆ ಮತ್ತು ಉಡುಪಿ ನಗರಸಭೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳನ್ನು ತೆರೆಯಲು ಆಸಕ್ತ ಅಭ್ಯರ್ಥಿಗಳಿಂದ […]
ಕಾರ್ಕಳ: ಕಾದ ಇಳೆಗೆ ತಂಪೆರೆದ ಮಳೆ

ಉಡುಪಿ: ಕಾರ್ಕಳ ತಾಲೂಕಿನ ಮಾಳ, ಬಜಗೋಳಿ ಪರಿಸರದಲ್ಲಿ ಶನಿವಾರ ಸಂಜೆ ಅಕಾಲಿಕ ಮಳೆ ಸುರಿದಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಒಂದು ತಾಸುಗಿಂತಲೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿಯಿತು. ಬಿಸಿಲಿನ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಬಿಸಿ ಗಾಳಿಯಿಂದ ತಪ್ಪಿಸಿಕೊಳ್ಳಲು ಜನ ಹರಸಾಹಸ ಪಡುತ್ತಿದ್ದಾರೆ. ಮಧ್ಯಾಹ್ನದ ವೇಳೆ ಮನೆಯಿಂದ ಹೊರ ಬರಲಾಗುತ್ತಿಲ್ಲ. ಕಾದ ಹೆಂಚಿನಂತಾಗಿದ್ದ ಭೂಮಿಗೆ ಮಳೆಯ ಹನಿಗಳ ಸ್ಪರ್ಶವಾಯಿತು. ಇಡೀ ದಿನ ಉರಿ ಬಿಸಿಲಿನಿಂದ ಹೈರಾಣಾಗಿದ್ದ ಜನರಿಗೆ ಸಂಜೆ ಹೊತ್ತಿಗೆ ಸುರಿದ […]
ಉಡುಪಿ:ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಅರ್ಹ ನವ ಕಾನೂನು ಪದವೀಧರರಿಗೆ ವಕೀಲರ ವೃತ್ತಿಯಲ್ಲಿ ಉತ್ತೇಜನ ನೀಡಲು ಪ್ರತಿ ತಿಂಗಳು ರೂ.2,000 ಗಳ ಪ್ರೋತ್ಸಾಹಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 2024 ರ ಜೂನ್ 1 ರಿಂದ 2025 ರ ಮೇ 31 ರ ಅವಧಿಯೊಳಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ವಕೀಲರ ವೃತ್ತಿಗೆ ನೋಂದಾಯಿಸಿಕೊ೦ಡಿರಬೇಕು. ಅಭ್ಯರ್ಥಿಯ ಅಥವಾ ಅವರ ಕುಟುಂಬದ ವಾರ್ಷಿಕ ಆದಾಯವು ರೂ.40,000/- ಮೀರಿರಬಾರದು. ಅರ್ಜಿಯೊಂದಿಗೆ ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. […]
ಉಡುಪಿ:ಕುಷ್ಠರೋಗ ಕುರಿತಾದ ಜಾಗೃತಿ ಆಂದೋಲನ

ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ವಿಭಾಗ ಉಡುಪಿ ಜಿಲ್ಲೆ ಮತ್ತು ಜಿ ಶಂಕರ್ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೇಚೆಗೆ ಕಾಲೇಜಿನ ಸಭಾಂಗಣದಲ್ಲಿ ಕುಷ್ಠರೋಗ ಕುರಿತಾದ ಜಾಗೃತಿ ಆಂದೋಲನ ಕಾರ್ಯಕ್ರಮವನ್ನು “ತಾರತಮ್ಯವನ್ನು ಕೊನೆಗೊಳಿಸುವುದು, ಘನತೆಯನ್ನು ಕಾಪಾಡುವುದು” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಯಿತು. ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಶಂಕರ್ ಪ್ರಥಮ ದರ್ಜೆ […]