ಉಡುಪಿ :ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆಬ್ರವರಿ 25 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿ೦ದ ವಿಶೇಷ ವಿಮಾನದ ಮೂಲಕ ಹೊರಟು 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬೆಳಗ್ಗೆ 11.10 ಕ್ಕೆ ಹೆಲಿಕಾಪ್ಟರ್ ಮೂಲಕ ಹೊರಟು 11.30 ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಬಂದಿಳಿಯಲಿರುವ ಅವರು, ಕಾಬೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, ಕಾರ್ಕಳ ತಾಲೂಕು ಕಚೇರಿ […]

ಉಡುಪಿ:ಮೀನುಗಾರರಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ : ಸರಕಾರ ಮೀನುಗಾರರ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಹೆಚ್ಚು ಫಲಾನುಭವಿಗಳು ಇರುವ ಹಿನ್ನೆಲೆ, ಹೆಚ್ಚುವರಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆಯು ಸರ್ವಋತು ಬಂದರಾಗಿದ್ದು, ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ […]

ಉಡುಪಿ ನಗರಸಭೆಯಲ್ಲಿ ಆಸ್ತಿ ತೆರಿಗೆ ವಂಚನೆ ಪ್ರಕರಣ- ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ: ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರಸಭೆ ಹೊರಗಡೆ ತೆರಿಗೆ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬನ್ನಂಜೆ ನಿವಾಸಿ ಶಾಲಿನಿ ಹಾಗೂ ಕುಕ್ಕಿಕಟ್ಟೆಯ ಗಣೇಶ್ ಎಂದು ಗುರುತಿಸಲಾಗಿದೆ. ಆನಂದ ಸುವರ್ಣ ಎಂಬವರು ಕಲ್ಮಾಡಿಯಲ್ಲಿರುವ ತನ್ನ ಕಟ್ಟಡಕ್ಕೆ ಸಂಬಂಧಪಟ್ಟಂತೆ 2025ರ ಅ.16ರಂದು 12 ವರ್ಷಗಳ ಆಸ್ತಿ ತೆರಿಗೆ ಮೊತ್ತ ಒಟ್ಟು 34,730 ರೂ. ಹಣವನ್ನು ನಗರಸಭೆ ಕಚೇರಿಯಲ್ಲಿ ಹೊರಗಡೆ […]

ಕುಂದಾಪುರ: ಕುಲಾಲ ಸಮಾಜ ಭಾಂದವರಿಂದ 506ನೇ ಸರ್ವಜ್ಞ ಜಯಂತಿ ಆಚರಣೆ

ಕುಂದಾಪುರ: ತಾಲೂಕು ಕಛೇರಿ ಕುಂದಾಪುರದಲ್ಲಿ ಉಪ ತಹಶಿಲ್ದಾರರಾದ ವಿನಯ್ ಸರ್ ರವರ ಸಮುಖದಲ್ಲಿ ಕುಲಾಲ ಸಮಾಜ ಸುಧಾರಕ ಸಂಘ (ರಿ), ಕುಂದಾಪುರದ ಕುಲಾಲ ಸಮಾಜ ಭಾಂದವರ ಸಮುಖದಲ್ಲಿ 506ನೇ ಸರ್ವಜ್ಞ ಜಯಂತಿಯನ್ನು ಫೆ.20 ರಂದು ಆಚರಿಸಲಾಯಿತು. ಸರ್ವಜ್ಞ ಜಯಂತಿಯನ್ನು ವಿನಯ್ ಉಪ ತಹಶಿಲ್ದಾರರು ದೀಪ ಬೆಳಗಿಸಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುಲಾಲ ಸಮಾಜ ಸುಧಾರಕ ಸಂಘ (ರಿ) ಕುಂದಾಪುರದ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ಕುಲಾಲ್ ಕಾವ್ರಾಡಿ, ಉಡುಪಿ ಜಿಲ್ಲಾ […]

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ರಂಗಮಹೋತ್ಸವ ಗೌರವ.

ಉಡುಪಿ: ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರೀಯ ನಾಟಕ ಶಾಲೆ ನವದೆಹಲಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತ ಸಹಕಾರದಲ್ಲಿ ಬೆಂಗಳೂರಿನ ಕಲಾಗ್ರಾಮದಲ್ಲಿ ಫೆ.1ರಿಂದ 6ರವರೆಗೆ ನಡೆದ ‘ಭಾರತ ರಂಗ ಮಹೋತ್ಸವ -2026 ಹಾಗೂ ರಂಗ ಪರಿಷೆ ‘ ಕಾರ್ಯಕ್ರಮದಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷರು ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಸಮಾಜ ಸೇವೆ, ಯಕ್ಷಗಾನ, ಜಾನಪದ, ಧಾರ್ಮಿಕ […]