ಕಾರ್ಕಳ: ಫೆ.25ರಂದು ಕಿಸಾನ್ ಸಭಾಸಭಾಂಗಣದ ಉದ್ಘಾಟನೆ, ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ- ಸಿಎಂ ಭಾಗಿ

ಉಡುಪಿ: ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ ಇದೇ ಫೆ. 25ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ತಿಳಿಸಿದರು. ಕಾರ್ಕಳದ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಹಿಂದುಳಿದ ಗ್ರಾಮೀಣ ಮಕ್ಕಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣ ನೀಡುವುದು ಈ […]

ಉಡುಪಿ: ಯುವತಿ ನಾಪತ್ತೆ

ಉಡುಪಿ, ಫೆಬ್ರವರಿ 23: ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ, ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (20) ಎನ್ನುವ ಯುವತಿಯು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಮಾಡಿ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಲಂಬಾಣಿ ಹಾಗೂ ಹಿಂದಿ […]

ಅಖಿಲ ಭಾರತ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಉಡುಪಿ ಶಾಖೆಯ ಅಧ್ಯಕ್ಷರಾಗಿ ಸಿ.ಎ. ಎಂ.ರಾಘವೇಂದ್ರ ಮೊಗೇರಾಯ ಆಯ್ಕೆ.

ಉಡುಪಿ: ಅಖಿಲ ಭಾರತ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಉಡುಪಿ ಶಾಖೆಯ 2026–27ನೇ ಸಾಲಿನ ಅಧ್ಯಕ್ಷರಾಗಿ ಸಿ.ಎ. ಎಂ. ರಾಘವೇಂದ್ರ ಮೊಗೇರಾಯ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 2026–27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಫೆ. 20ರಂದು ಕುಂಜಿಬೆಟ್ಟುವಿನ ಐಸಿಎಐ ಭವನದಲ್ಲಿ ನಡೆಯಿತು. ಸಿ.ಎ. ಎಂ. ರಾಘವೇಂದ್ರ ಮೊಗೇರಾಯ 2026–27ನೇ ಸಾಲಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಸಿ.ಎ. ಅಶ್ವಥ್ ಜೆ ಶೆಟ್ಟಿ, ಕಾರ್ಯದರ್ಶಿಯಾಗಿ ಸಿ.ಎ. ಕೆ. ಲಕ್ಷ್ಮೀಶ ರಾವ್, ಕೋಶಾಧಿಕಾರಿಯಾಗಿ ಸಿ.ಎ. ಅರ್ಚನಾ ಆರ್. ಮಯ್ಯ, ಸಿಕಾಸ […]

ಕ್ರೈಸ್ಟ್ ಕಿಂಗ್: ವಿಶ್ವ ಸ್ಕೌಟ್ಸ್ ದಿನಾಚರಣೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಸ್ಕೌಟ್ಸ್ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ನ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಜಾಲ್ಸೂರು ಅವರು ಸರ್ವ ಧರ್ಮ ಪ್ರಾರ್ಥನೆಯನ್ನು ನೆರವೇರಿಸಿಕೊಟ್ಟರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಸಾವಿತ್ರಿ ಮನೋಹರ್‌ರವರು ವಿದ್ಯಾರ್ಥಿಗಳಿಗೆ ವಿವಿಧ ಹಾಡು ಹಾಗೂ ಚಟುವಟಿಕೆಗಳ ಮೂಲಕ ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯಯೋಜನೆಗಳ ಬಗ್ಗೆ ಅರಿವು ಮೂಡಿಸಿದರು. ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ […]

ಉಡುಪಿ: ಸನ್ಯಾಸಿ ವೇಷಧರಿಸಿಕೊಂಡು ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನ- ಓರ್ವ ವಶಕ್ಕೆ

ಉಡುಪಿ: ಸನ್ಯಾಸಿ ವೇಷಧರಿಸಿಕೊಂಡು ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದ ವಂಚಕನೋರ್ವನನ್ನು ವಶಕ್ಕೆ ಪಡೆಯುವಲ್ಲಿ ಉಡುಪಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಾರ್ಯಾಚರಣೆಗೆ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ನೆರವಾಗಿದ್ದರು. ವಂಚಕ ನಕಲಿ ಹುಲಿ ಉಗುರನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಾರ್ವಜನಿಕರು ನಾಗರಿಕ ಸಮಿತಿಯ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಆತ ಪರಾರಿಯಾಗಲು ಯತ್ನಿಸಿದಾಗ ನಗರ ಪೋಲಿಸ್ ಠಾಣೆಯ‌ ಪೋಲಿಸರು ನಗರದ ಹಳೆ ಬಸ್ಸು ನಿಲ್ದಾಣದಲ್ಲಿ ವಶಕ್ಕೆ ಪಡೆದು ಬಳಿಕ, […]