ಹೆಬ್ರಿಯ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯಿಂದ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್ ಹಸ್ತಾಂತರ.

ಹೆಬ್ರಿ: ಹೆಬ್ರಿಯ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಎಸ್ ಆರ್ ಆಡಿಯಟೋರಿಯಂನಲ್ಲಿ “ಪೊಲೀಸ್ ಬ್ಯಾರಿಕೇಡ್ ಹಸ್ತಾಂತರ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ” ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರವಿ ಬಿ ಕೆ ಪಿಎಸ್ಐ, ಹೆಬ್ರಿ ಪೊಲೀಸ್ ಠಾಣೆ ಭಾಗವಹಿಸಿ ಮಾತನಾಡಿದರು. ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಾವಶ್ಯಕ ಎಂದು ಅವರು ತಿಳಿಸಿದರು. ಹೆಲ್ಮೆಟ್ ಧರಿಸುವುದು, ಸೀಟ್‌ಬೆಲ್ಟ್ ಕಡ್ಡಾಯವಾಗಿ ಬಳಸುವುದು ಹಾಗೂ ಮದ್ಯಪಾನದ ನಂತರ ವಾಹನ ಚಾಲನೆ ಮಾಡದಿರುವುದು […]
ಪದವಿ ತೇರ್ಗಡೆಯಾದವರಿಗೆ ಗುಡ್ ನ್ಯೂಸ್: ಪ್ಯಾರಾಮಿಲಿಟರಿ ಪಡೆಗಳಲ್ಲಿದೆ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳು

ಬೆಂಗಳೂರು: ದೇಶದ ಪ್ಯಾರಾ ಮಿಲಿಟರಿ ಪಡೆಗಳ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡಬೇಕು ಎಂದು ಕನಸು ಕಟ್ಟಿಕೊಂಡಿರುವ ಯುವಕ–ಯುವತಿಯರಿಗೆ ಮತ್ತೊಂದು ಅವಕಾಶ ಒದಗಿ ಬಂದಿದೆ. ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಕೇಂದ್ರ ಗೃಹ ಇಲಾಖೆಯ ಅಂಗ ಸಂಸ್ಥೆಯಾದ ಕೇಂದ್ರಿಯ ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್) ವಿವಿಧ ಘಟಕಗಳಲ್ಲಿ ಖಾಲಿ ಇರುವ 349 ‘ಅಸಿಸ್ಟಂಟ್ ಕಮಾಂಡೆಂಟ್’– ‘ಗ್ರೂಪ್ –ಎ’ ಹುದ್ದೆಗಳ ಭರ್ತಿಗೆ ನೇಮಕಾತಿ ಪರೀಕ್ಷೆ ನಡೆಸುತ್ತಿದೆ. ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇದೇ ಫೆಬ್ರುವರಿ 20 ರಿಂದ ಆರಂಭವಾಗಿದ್ದು, ಮಾರ್ಚ್ […]
ಉಡುಪಿ: ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟ; ಸುಳ್ಳು ಸುದ್ದಿ ನಂಬಬೇಡಿ – ವಿದ್ಯಾರ್ಥಿಗಳು, ಹೆತ್ತವರಲ್ಲಿ ಶಾಲಾ ಶಿಕ್ಷಣ ಇಲಾಖೆ ಮನವಿ.!

ಉಡುಪಿ: ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆಗಳು ಮಾರಾಟ ವಾಗುತ್ತಿದೆ ಎಂಬ ಸುದ್ದಿಯನ್ನು ಕೆಲವು ಸುದ್ದಿ ಮಾಧ್ಯಮಗಳಲ್ಲಿ ಪ್ರಚಾರ ಪಡಿಸಲಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಲಾಗಿ ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇದು ತಪ್ಪು ಮಾಹಿತಿಯಾಗಿದ್ದು, ವಿದ್ಯಾರ್ಥಿ ಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ದಾರಿ ತಪ್ಪಿಸುವ ಹುನ್ನಾರವಾಗಿದೆ ಎಂದು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂತಹ ಸುಳ್ಳು ಸುದ್ದಿ ಹರಡುವವರನ್ನು ಗುರುತಿಸಿ ಅಂತಹವರ ವಿರುದ್ಧ ಕಾನೂನಾತ್ಮಕ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.ಸಾರ್ವಜನಿಕರು, ಪಾಲಕ, […]
NCERT ವಿವಾದಾತ್ಮಕ ಪುಸ್ತಕದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಸುಪ್ರೀಂ ಕೋರ್ಟ್.!

ನವದೆಹಲಿ: ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿದ್ದ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಯ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ನಿಷೇಧಿಸಿದೆ. ಇದು ಆಳವಾಗಿ ಸಂಚಿನ ಫಲವಾಗಿದ್ದು, ಇದಕ್ಕೆ ಹೊಣೆಗಾರರಾದವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕು ಎಂದು ಸಿಜೆಐ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೊಯಮಲ್ಯ ಬಾಗ್ಚಿ ಹಾಗೂ ವಿಪುಲ್. ಎಂ. ಪಂಚೋಲಿ ಅವರಿದ್ದ ನ್ಯಾಯಪೀಠ ಆದೇಶಿಸಿದೆ. ಈ ವಿಚಾರದ ಬಗ್ಗೆ ಆಳವಾದ ತನಿಖೆ ಬೇಕು. ಯಾರು ಹೊಣೆಗಾರರು ಎಂಬುದನ್ನು ಪತ್ತೆಹಚ್ಚಬೇಕು. […]
ಫೆ.28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ; 7.10 ಲಕ್ಷ ವಿಧ್ಯಾರ್ಥಿಗಳು ನೊಂದಣಿ.!

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫೆ.28ರಿಂದ ಆರಂಭ ಆಗಲಿದ್ದು, ಮೊದಲ ದಿನ ಕನ್ನಡ, ಅರೆಬಿಕ್ ಭಾಷಾ ಪರೀಕ್ಷೆಗಳು ನಡೆಯಲಿವೆ.5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. 1,217 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರವೂ ಸಿ.ಸಿ.ಟಿ.ವಿ ಕ್ಯಾಮೆರಾ ಒಳಗೊಂಡಿದೆ. ವಿವಿಧ ಹಂತದ ಅಧಿಕಾರಿಗಳು ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ […]