ಬ್ರಹ್ಮಾವರ: ಹಿರಿಯ ಪತ್ರಕರ್ತ, ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ

ಉಡುಪಿ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು. ಬ್ರಹ್ಮಾವರ ಕ್ರಾಸ್‌ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಉಡುಪಿ:ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ ಉಡುಪಿ ಅಗ್ನಿಶಾಮಕ ಠಾಣೆಯ ಸತೀಶ್ ಇವರು ಇಲಾಖೆಯಲ್ಲಿನ ತಮ್ಮ ಉತ್ತಮ ಸೇವೆಗಾಗಿ ಮತ್ತು ತುರ್ತು ಪರಿಸ್ಥಿತಿಯಲ್ಲಿ ನೀಡಿದ ಶ್ರೇಷ್ಠ ಕಾರ್ಯಕ್ಕಾಗಿ 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿದ್ದಾರೆ. ಬೆಂಗಳೂರಿನ ಆರ್.ಎ ಮುಂಡ್ಕೂರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪದಕಗಳನ್ನು ನೀಡಿ ಗೌರವಿಸಿದ್ದಾರೆ.

ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ರಿಕ್ಷಾ ಚಾಲಕನ ಬಂಧನ

ಕಾರ್ಕಳ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬೋಳ ನಿವಾಸಿ ಅಮರನಾಥ್ ಪೂಜಾರಿ(31) ಬಂಧಿತ ಆರೋಪಿ. 16ವರ್ಷ ಪ್ರಾಯದ ಬಾಲಕಿ ಫೆ.25ರಂದು ಶಾಲೆ ಮುಗಿಸಿ ಮನೆಗೆ ತೆರಳಿದ್ದಾಗ ಅಮರನಾಥ್, ಮನೆಗೆ ಬಿಡುವುದಾಗಿ ನಂಬಿಸಿ ಆಕೆಯನ್ನು ಕರೆದು ಕೊಂಡು ಬಂದನು. ಬಳಿಕ ದಾರಿ ಮಧ್ಯೆ ಆಕೆಗೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದನು. ಆಗ ಆಕೆ ಅಲ್ಲಿಂದ ತಪ್ಪಿಸಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. […]

ಉಡುಪಿ: ಯಕ್ಷ ಗುರು ಉದಯ ಕುಮಾರ್ ಮಧ್ಯಸ್ಥ ಅವರಿಗೆ ಸನ್ಮಾನ.

ಉಡುಪಿ: ಉಡುಪಿ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 75 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಯಕ್ಷ ಗುರು ಉದಯ ಕುಮಾರ್ ಮಧ್ಯಸ್ಥ ಇವರನ್ನು ಸನ್ಮಾನಿಸಲಾಯಿತು. ಗೌರವಾಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಅದಿತಿ ಬಿಲ್ಡರ್ ಮಾಲಕ ರಂಜನ್ ಕೆ, ಅಧ್ಯಕ್ಷ ಕೇಶವಮೂರ್ತಿ ಬೆಲ್ಪತ್ರೆ, ಯಕ್ಷಗಾನ ವಿಮರ್ಶಕ ಫ್ರೊ ಉದಯ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ನಿಟ್ಟೂರು ಮಹಾಬಲ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಜಿ ಬಾಬು ಗೌಡ, ಅಮೃತ ಮಹೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿ ಭಾಸ್ಕರ್ […]

ಉಡುಪಿ:80 ಬಡಗಬೆಟ್ಟು ಗ್ರಾಮ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದಲ್ಲಿ 6.30 ಎಕರೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಮೀನಿನಲ್ಲಿ ಉಡುಪಿ ಕಂಬಳ ಆಯೋಜನೆ ಸಂಬಂಧ ಫೆ.28ರ ಬೆಳಗ್ಗೆ 10 ಗಂಟೆಗೆ ಶಂಕುಸ್ಥಾಪನೆ ಮಾಡಲು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಂದಾಗಿದ್ದರು. ಅದಕ್ಕೆ ವ್ಯತಿರಿಕ್ತವಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಮಾ.4ರಂದು ಶಂಕುಸ್ಥಾಪನೆ ನಡೆಸಲು ತೀರ್ಮಾನಿಸಿದ್ದಾರೆ. ಇದೀಗ ಇಂದು ಕಾರ್ಯಕ್ರಮ ನಡೆಯದಂತೆ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಅದೇಶ ಹೊರಡಿಸಿದೆ. […]