ಕಾರ್ಕಳ: ಕಾರು-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸವಾರರು ಮೃತ್ಯು.

ಕಾರ್ಕಳ, ಮಾ.1: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ಫೆ.28ರಂದು ರಾತ್ರಿ 8.45ರ ಸುಮಾರಿಗೆ ಕುಕ್ಕುಂದೂರು ಗ್ರಾಮದ ಮಹಾತ್ಮ ಗಾಂಧಿ ಶಾಲೆ ಎದುರುಗಡೆ ನಡೆದಿದೆ. ಮೃತರನ್ನು ಎರ್ಲಪಾಡಿ ಗೋವಿಂದೂರಿನ ಬೈಕ್ ಸವಾರ ರಕ್ಷೀತ್(18) ಮತ್ತು ಅವರ ಸಂಬಂಧಿ ಸಹ ಸವಾರ ಶಿವಾನಂದ(19) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು, ಎದುರಿ ನಲ್ಲಿದ್ದ ವಾಹನವನ್ನು ಒವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಅಂದರೆ ಕಾರ್ಕಳದಿಂದ ಬೈಲೂರು ಕಡೆಗೆ ಬರುತ್ತಿದ್ದ […]
ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಲಿರೆಜಾ ಅರಾಫಿ ನೇಮಕ

ಟೆಹರಾನ್: ಇಸ್ರೇಲ್ ಹಾಗೂ ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಖಮೇನಿ ಹತ್ಯೆ ಬೆನ್ನಲ್ಲೇ ಮುಂದಿನ ನಾಯಕ ಯಾರು ಎಂಬ ಪ್ರಶ್ನೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅಧಿಕಾರಕ್ಕೇರಲಿದ್ದಾರೆ ಎಂಬ ಬಲವಾದ ಊಹಾಪೋಹಗಳ ನಡುವೆಯೂ, ಗಾರ್ಡಿಯನ್ ಕೌನ್ಸಿಲ್‌ನ ಧರ್ಮಗುರು ಅಯಾತೊಲ್ಲಾ ಅಲಿರೆಜಾ ಅರಾಫಿ ಅವರನ್ನು ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಮತ್ತು ಮುಖ್ಯ ನ್ಯಾಯಮೂರ್ತಿ […]
ಇಸ್ರೇಲ್-ಇರಾನ್ ಸಂಘರ್ಷ: ಒಮಾನ್’ನಲ್ಲಿ 15 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ; ನಾಲ್ವರಿಗೆ ಗಾಯ

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ ಇರಾನ್ ಕೆರಳಿದೆ. ತನ್ನ ಸಂಪೂರ್ಣ ಶಕ್ತಿಯೊಂದಿಗೆ ಪ್ರತಿಕಾರಕ್ಕೆ ಇಳಿದಿರುವ ಇರಾನ್ ಸೇನೆಯು, ಒಮಾನ್‌ನ ಮುಸಂದಮ್ ಪೆನಿನ್ಸುಲಾ ಬಳಿ ಸಂಚರಿಸುತ್ತಿದ್ದ ಪಲಾವ್ ಧ್ವಜದ ‘ಸ್ಕೈಲೈಟ್’ ಎಂಬ ತೈಲ ಟ್ಯಾಂಕರ್ ಅನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ದಾಳಿಯಲ್ಲಿ ಕನಿಷ್ಠ ನಾಲ್ವರು ನಾವಿಕರು ಗಾಯಗೊಂಡಿದ್ದಾರೆ ಎಂದು ಒಮಾನ್‌ನ ಕಡಲ ಭದ್ರತಾ ಕೇಂದ್ರ (MSC) ದೃಢಪಡಿಸಿದೆ. ತೈಲ ಹಡಗಿನಲ್ಲಿ 15 ಭಾರತೀಯರು:ಈ ತೈಲ […]
ಕುಂದಾಪುರ: ನದಿಯಲ್ಲಿ ಮುಳುಗಿ ಮಹಿಳೆ ಮೃತ್ಯು.

ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರಂದು (ರವಿವಾರ) ನಡೆದಿದೆ. ಮೃತಪಟ್ಟ ಮಹಿಳೆ ಕುಂದಾಪುರದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ ಶುಭಶ್ರೀ ಕಾರಂತ್ (53). ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದುಬಂದಿದೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಟೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ; ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಖಮೇನಿ ಹತ್ಯೆ.

ಟೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಹಲವಾರು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ರಾಷ್ಟ್ರದ ಮೇಲೆ ಅಮೆರಿಕ-ಇಸ್ರೇಲಿ ಜಂಟಿ ದಾಳಿಯ ನಂತರ ಖಮೇನಿ ಕೊಲ್ಲಲ್ಪಟ್ಟರು ಎಂದು ಅಮೆರಿಕದ ಹೇಳಿಕೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಇರಾನ್ ಘೋಷಣೆ ಮಾಡುವುದಕ್ಕೂ ಮೊದಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಮೇನಿಯನ್ನು ಹೊಡೆದುರುಳಿಸಿದ್ದೇವೆ ಎಂದು ತಿಳಿಸಿದ್ದರು. ಶನಿವಾರ ಬೆಳಿಗ್ಗೆ ಪ್ರಾರಂಭವಾದ ದಾಳಿಯಲ್ಲಿ ಖಮೇನಿ ಅವರ ಮಗಳು, ಮೊಮ್ಮಗಳು, ಸೊಸೆ […]