ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಕುಸಿದುಬಿದ್ದು ಮೃತ್ಯು

ಉಡುಪಿ: ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ (58) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.ಅವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದರು. ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.ನಾಸಿರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, […]
ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲ: ವಾರ್ಷಿಕೋತ್ಸವ ಹಾಗೂ ವಿವಿಧ ಪ್ರಶಸ್ತಿ ವಿತರಣೆ

ಮಣಿಪಾಲ: ಶ್ರೀ ಶಾರದಾ ಶಿಕ್ಷಕಿಯರ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವವು ಫೆ.28 ರಂದು ಸಂಸ್ಥೆಯ ಆವರಣದಲ್ಲಿ ನಡೆಯಿತು. ಸೈಂಟ್ ಸಿಸಿಲಿ ಕಾನ್ವೆಂಟ್‌ನ ಪೂರ್ವ ಪ್ರಾಥಮಿಕ ವಿಭಾಗದ, ಕೋ-ಅರ್ಡಿನೇಟರ್-ಸುಪೀರಿಯರ್ ಸಿಸ್ಟರ್ ಪ್ರೀಯಾ ಮರಿಯರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಶ್ರೀಮತಿ ಚಂದ್ರಕಲಾರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ಸಮಾರಂಭದಲ್ಲಿ ಪುತ್ತೂರಿನ ಈಶ ವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಯಂ. ಅವರನ್ನು ವಿಶೇಷ ಸಾಮಾಜಿಕ ಕಾರ್ಯಗಳಿಗಾಗಿ ಸಂಸ್ಥೆಯ ವತಿಯಿಂದ ಸನ್ಮಾಸಿಲಾಯಿತು. ಮುಖ್ಯ ಅತಿಥಿಗಳಾದ ಸಿಸ್ಟರ್ ಪ್ರೀಯಾ ಮರಿಯರವರು ತಮ್ಮ ಭಾಷಣದಲ್ಲಿ ‘ಮಕ್ಕಳ ಬಗ್ಗೆ ತಾಳ್ಮೆ […]