ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಲಾಂಛನ ಅನಾವರಣ

ಉಡುಪಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ 2026ರ ಲಾಂಛನವನ್ನು ಶಾಸಕ ಯಶ್ಪಾಲ್ ಸುವರ್ಣ ದೇವಸ್ಥಾನದಲ್ಲಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಮುಂದಿನ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದಲ್ಲಿ ಒಮ್ಮತದಿಂದ ಕೆಲಸ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಲ್ಲಿ ಸಹಕರಿಸಬೇಕು. ಶಾಸಕನ ನೆಲೆಯಲ್ಲಿ ತಾನು ಪೂರ್ಣ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಮುಖ್ಯ ಅತಿಥಿಯಾಗಿದ್ದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಜನಸಾಮಾನ್ಯರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವಲ್ಲಿ ದೇವಸ್ಥಾನಗಳ ಪಾತ್ರ ಮಹತ್ವದಾಗಿದೆ. ಗ್ರಾಮದ ಎಲ್ಲ ವರ್ಗದ ಜನರು ದೇಗುಲದ […]
ಉಡುಪಿ:16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ನಿರ್ಧಾರ ಸ್ವಾಗತಾರ್ಹ- ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ

ಉಡುಪಿ: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಡಿಜಿಟಲ್ ಪಾಲಿಸಿ ರೂಪಿಸಲು ಮುಂದಾಗಿರುವುದು ಸ್ವಾಗತಾರ್ಹ ಕ್ರಮ ಎಂದು ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಮನೋವೈದ್ಯನಾಗಿ ಸರ್ಕಾರದ ಈ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆಸ್ಪತ್ರೆಯ ವಾರ್ಡ್‌ನಲ್ಲಿ ಪ್ರತಿದಿನ ಇಬ್ಬರು 18 ವರ್ಷದೊಳಗಿನ ಮಕ್ಕಳು ಮಾನಸಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ದಾಖಲಾಗುತ್ತಿರುವುದು […]
ರಂಗಭೂಮಿ ರಂಗೋತ್ಸವ ಉದ್ಘಾಟನೆ: ರಂಗಕರ್ಮಿ ಪ್ರಸನ್ನ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರಧಾನ

ಉಡುಪಿ: ನಮ್ಮ ಪ್ರಾಚೀನ ಸಂಸ್ಕೃತಿ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಏಚ್. ಎಸ್.ಬಲ್ಲಾಳ್ ಹೇಳಿದರು. ಅವರು ಬುಧವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಉಡುಪಿಯ ಪ್ರತಿಷ್ಠಿತ ರಂಗಭೂಮಿ ಸಂಸ್ಥೆ ರಂಗಭೂಮಿ ಉಡುಪಿ ಹಮ್ಮಿಕೊಂಡಿರುವ ರಂಗಭೂಮಿ ರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಂಗಕಲೆ, ಯಕ್ಷಗಾನ, ಹಾಗೂ ಪ್ರಾಚೀನ ಸಂಸ್ಕೃತಿ, ಸಂಪ್ರದಾಯ, ಕಲಾ ಪ್ರಕಾರಗಳನ್ನು ಬೆಳೆಸಲು ಮಾಹೆ ತನ್ನದೆ ಕೊಡುಗೆ ನೀಡುತ್ತಾ ಬಂದಿದೆ. ರಂಗಭೂಮಿ ಉಡುಪಿ ಸಂಸ್ಥೆ ಕಳೆದ […]
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ […]
ಉಡುಪಿ:ಸಾಲಿಗ್ರಾಮ ಪ.ಪಂ. ಉದ್ಯಮ ಪರವಾನಿಗೆ ನವೀಕರಣ: ಅರ್ಜಿ ಆಹ್ವಾನ

ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಎಲ್ಲಾ ಉದ್ಯಮದಾರರ 2026-27 ನೇ ಸಾಲಿನ ಉದ್ಯಮ ಪರವಾನಿಗೆ ನವೀಕರಣ ಅವಧಿಯು ಏಪ್ರಿಲ್ 2026 ರಿಂದ ಪ್ರಾರಂಭವಾಗಲಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯಮ ನಡೆಸುತ್ತಿರುವ ಉದ್ಯಮದಾರರು ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸಂಬಂಧಿಸಿದಂತೆ ನಿಗದಿತ ದಾಖಲೆ ಸಹಿತ ಆನ್‌ಲೈನ್ ಮೂಲಕ ಅಥವಾ ಪಟ್ಟಣ ಪಂಚಾಯತ್‌ಗೆ ಅರ್ಜಿ ನಮೂನೆ ಹಾಗೂ ದಾಖಲೆ ಸಹಿತ ಶುಲ್ಕ ಪಾವತಿಸಿ ಉದ್ಯಮ ಪರವಾನಿಗೆ ನವೀಕರಿಸಿಕೊಳ್ಳಬಹುದಾಗಿದೆ. ನಿಗದಿತ ಅವಧಿಯಲ್ಲಿ ಉದ್ಯಮ ಪರವಾನಿಗೆ ನವೀಕರಿಸದಿದ್ದಲ್ಲಿ ಅಧಿಸೂಚನೆಯಂತೆ ದಂಡ ಸಹಿತ ಬಾಕಿ […]