ಉಡುಪಿ:ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪ್ರಕಟ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 2022 ನೇ ಸಾಲಿನಲ್ಲಿ ಪ್ರಥಮ ಮುದ್ರಣಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಧಿಕೃತ ವೆಬ್‌ಸೈಟ್ dpl.karnataka.gov.in ನಲ್ಲಿ ಮಾರ್ಚ್ 2 ರಂದು ಪ್ರಕಟಿಸಲಾಗಿರುತ್ತದೆ. ಸದರಿ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರ ಪುಸ್ತಕಗಳಲ್ಲಿ ಶೀರ್ಷಿಕೆ, ಲೇಖಕರ ಹೆಸರು, ಪ್ರಕಾಶಕರ ಹೆಸರು, ಮುಖಬೆಲೆ ಮತ್ತು ನಿಗದಿತ ಬೆಲೆಯಲ್ಲಿ ಹೆಚ್ಚು ಅಥವಾ ಕಡಿಮೆಯಾಗಿದ್ದಲ್ಲಿ ಪುಸ್ತಕದ ಅಳತೆ, […]
ಉಡುಪಿ:ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾತಿ : ಅರ್ಜಿ ಆಹ್ವಾನ
ಉಡುಪಿ:ಮುಂದಿನ ಬೇಸಿಗೆ ದಿನಗಳಲ್ಲಿ ಜಿಲ್ಲೆಯ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಂದಿನಿಂದ ಜೂನ್‌ನ ಮುಂಗಾರು ಮಳೆ ಆರಂಭ ಆಗುವವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಪ್ರಸ್ತುತ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರದೇಶಗಲ್ಲಿ ಯಾವುದೇ ರೀತಿಯ ಕುಡಿಯುವ […]
ಉಡುಪಿ:ಮಹಿಳೆ ನಾಪತ್ತೆ

ಉಡುಪಿ: ಕಲ್ಸಂಕದ ಮಾಲ್ ಒಂದರಲ್ಲಿ ಸ್ವಚ್ಛತಾ ಕೆಲಸ ಮಾಡುತಿದ್ದ ನಿಟ್ಟೂರಿನ ದೀಪಾ (34) ಎಂಬವರು ಮಾ.3ರಂದು ಕೆಲಸಕ್ಕೆಂದು ಹೋದವರು ಸಂಜೆ ಮನೆಗೆ ಬರದೇ ನಾಪತ್ತೆಯಾಗಿದ್ದಾರೆ. ಬಾಗಲಕೋಟೆ ಮೂಲದ ದೀಪಾ ಮೊಬೈಲ್‌ನ್ನು ಮನೆಯಲ್ಲೇ ಬಿಟ್ಟು ಹೋಗಿದ್ದು, ಕೆಲಸಕ್ಕೂ ಹೋಗದೆ ಊರಿಗೂ ಹೋಗದೇ ನಾಪತ್ತೆಯಾಗಿರುವುದಾಗಿ ಪತಿ ನಾಗಯ್ಯ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.