ಉಡುಪಿ:ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಖಾದಿ ಉಡುಪುಗಳ ತಾತ್ಕಾಲಿಕ ಮಾರಾಟ ಮಳಿಗೆ ಓಪನ್

ಉಡುಪಿ: ರಾಜ್ಯ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಸಂಸ್ಥೆಗಳು, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಗಳ ಅಧಿಕಾರಿ ಹಾಗೂ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಬಟ್ಟೆ ಧರಿಸುವಂತೆ ಹಾಗೂ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ತಮ್ಮ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲು ಸೂಚಿಸಿದ್ದು, ಅದರಂತೆ ಸರ್ಕಾರಿ ನೌಕರರಿಗೆ ತಕ್ಷಣದ ಖಾದಿ ಬಟ್ಟೆಗಳನ್ನು […]

ಉಡುಪಿ:“ಹೀಟ್ ವೇವ್” ನಿಂದ ಸಾರ್ವಜನಿಕರು ರಕ್ಷಿಸಿಕೊಳ್ಳಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಲಹೆ-ಸೂಚನೆಗಳು

ಉಡುಪಿ:ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಬೇಸಿಗೆ ಕಾಲದ (ಮಾರ್ಚ್ ನಿಂದ ಮೇ ವರೆಗೆ) ತಾಪಮಾನದ ಅವಧಿಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕದ ಬಹುತೇಕ ಭಾಗಗಳಲ್ಲಿಯೂ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದ್ದು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇದು ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇರುವ ಹಿನ್ನೆಲೆ, ತೀವ್ರ ತಾಪಮಾನದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. […]

ಉಡುಪಿ:ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸರ್ವೋಚ್ಛ ನ್ಯಾಯಾಲಯವು ಹೊರಡಿಸಿರುವ ಆದೇಶವನ್ನು ಮಾನವೀಯ ನೆಲೆಯಲ್ಲಿ ಅನುಷ್ಠಾನ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹೊರಡಿಸಿರುವ ಆದೇಶದಲ್ಲಿರುವ ಮಾರ್ಗಸೂಚಿಗಳನ್ನು ಮಾನವೀಯ ಹಾಗೂ ವೈಜ್ಞಾನಿಕ ದೃಷ್ಟಿಕೋನದಿಂದ ಅನುಷ್ಠಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತ ಜಿಲ್ಲ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನಸಾಮಾನ್ಯರಿಗೆ ಬೀದಿ ನಾಯಿಗಳಿಂದ ಉಂಟಾಗುವ ಉಪಟಳಗಳನ್ನು ತಪ್ಪಿಸುವ ಉದ್ದೇಶದಿಂದ ಮಾನ್ಯ ಸರ್ವೋಚ್ಚ […]

ಪತ್ರಕರ್ತ ಹೆಸರಿನಲ್ಲಿ ಬ್ಲಾಕ್‌ಮೇಲ್ ದಂಧೆಗೆ ಕಡಿವಾಣ ಅಗತ್ಯ: ಶಿವಾನಂದ ತಗಡೂರು

ಉಡುಪಿ: ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್‌ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿ ಮತ್ತು […]

ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್: ಮಾ.17ಕ್ಕೆ ಉಡುಪಿಯಲ್ಲಿ “ಅಪ್ರೆಂಟಿಶಿಪ್ ಮೇಳ, ಉದ್ಯೋಗ ಮೇಳ”

ಉಡುಪಿ: ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಅಂಗಸಂಸ್ಥೆ ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಸಹಯೋಗದಲ್ಲಿ ಮಾ. 17ರಂದು ನಗರದ ಅಮೃತ್ ಗಾರ್ಡನ್ ನಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಗೌರವಾಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದರು. ಬನ್ನಂಜೆ […]