ಮಣಿಪಾಲದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಮಣಿಪಾಲ: ಮಣಿಪಾಲ MSDC ವತಿಯಿಂದ ಮಾರ್ಚ್ 9, ರಂದು ಬೆಳಿಗ್ಗೆ 11 ಗಂಟೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ತನೂಜಾ ಮಾಬೆನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ “Emotional Independence” (ಭಾವನಾತ್ಮಕ ಸ್ವಾತಂತ್ರ್ಯ) ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಹಿಳೆಯರು ತಮ್ಮ ಸಂತೋಷವನ್ನು ತಮ್ಮೊಳಗಿನಿಂದಲೇ ಕಂಡುಕೊಳ್ಳಬೇಕು ಎಂಬ ಸಂದೇಶದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಸಕ್ತರು ಉಚಿತ ನೋಂದಣಿ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: […]
ನಾಳೆ ಸುರತ್ಕಲ್‌ನಲ್ಲಿ ಮಂಜುನಾಥ ಐ ಕೇರ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ

ಉಡುಪಿ:ಸುರತ್ಕಲ್ ಸಮೀಪದ ಇಡ್ಡ್ಯದಲ್ಲಿರುವ ಗೋವಿಂದ ದಾಸ ಕಾಲೇಜಿನ ಎದುರು ಭಾಗದಲ್ಲಿ “ಮಂಜುನಾಥ ಐ ಕೇರ್ ಸೂಪರ್ ಸ್ಪೆಷಾಲಿಟಿ ಐ ಸೆಂಟರ್” ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಮಾರ್ಚ್ 8, ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಮಂಗಳೂರು ನಾರ್ತ್ ನ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದು, ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹರೀಶ್ ಆಚಾರ್ಯ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಇಂಡಿಯಾನಾ ಆಸ್ಪತ್ರೆಯ MD, ಹಾಗೂ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ […]
ಉಡುಪಿ:ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ, ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಢಾವೋ ಅಭಿಯಾನದಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 9 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠದ ಆವರಣದ […]
ಮಲ್ಪೆ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆ

ಉಡುಪಿ: ಮಲ್ಪೆ ಬಂದರಿನ ದಕ್ಕೆಯ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ. ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಮಲ್ಪೆ ಪೋಲಿಸ್ ಠಾಣೆಯ ನಾಗರಾಜ್, ಮಲ್ಲಿಕಾ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಮೃತದೇಹ ಮೇಲೆತ್ತುವ ಕಾರ್ಯಾಚರಣೆ ನಡೆಯಿತು. ಹರೀಶ್ ಪೂಜಾರಿ, ಭುವನೇಶ್ ಶಿರಿಯಾನ್ ಸಹಕರಿಸಿದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ಮಲ್ಪೆ ಪೋಲಿಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಏರಿಕೆ

ನವದೆಹಲಿ: ನಿರೀಕ್ಷೆಯಂತೆ ಕೊಲ್ಲಿ ಯುದ್ಧದ ಬಿಸಿ ನಮ್ಮ ಮನೆ ಬಾಗಿಲಿಗೆ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 115 ರೂ. ಏರಿಕೆಯಾಗಿದೆ. ಪರಿಷ್ಕೃತ ದರ ಶನಿವಾರದಿಂದಲೇ ಜಾರಿಗೆ ಬಂದಿದೆ. ದರ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ. ದರ ಏರಿಕೆಗೂ ಮೊದಲು ಬೆಂಗಳೂರಿನಲ್ಲಿ ಗೃಹ ಬಳಕೆಯ ಸಿಲಿಂಡರ್ ದರ 855.50 ರೂ. ಇತ್ತು. […]