ಉಡುಪಿ: ಬಿಜೆಪಿ ಮಹಿಳಾ ಮೋರ್ಚಾದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು, ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಯಾದರೆ 70ರಿಂದ 80ರಷ್ಟು ಮಹಿಳೆಯರು ವಿಧಾನಸಭೆಗೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಹಿಳಾ ಮೋರ್ಚಾ ಇನ್ನಷ್ಟು ಸಂಘಟಿತವಾಗಬೇಕು. ಪಕ್ಷದಲ್ಲಿ ಪೈಪೋಟಿ ಇರುವುದು ಸಹಜ. ಆದರೆ ಬದ್ಧತೆಯಿಂದ ಪಕ್ಷದ ಹಿತಕ್ಕಾಗಿ ಕೆಲಸ ಮಾಡಿದರೆ ಮುಂದೊಂದು […]
ಆಕಾಶಕ್ಕೇರಿದ ಗ್ಯಾಸ್ ಸಿಲಿಂಡರ್ ಬೆಲೆ: ನಿಮ್ಮ ಜಿಲ್ಲೆಗಳಲ್ಲಿ ಗ್ಯಾಸ್ ಬೆಲೆ ಎಷ್ಟಿದೆ?ಇಲ್ಲಿದೆ ನೋಡಿ ಲಿಸ್ಟ್

ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡುವೆ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ದರಗಳು ಏರಿಕೆಯಾಗಿವೆ. ಇದರ ಪ್ರಭಾವ ಭಾರತದಲ್ಲಿಯೂ ಸ್ಪಷ್ಟವಾಗಿ ಕಂಡುಬಂದಿದ್ದು, ತೈಲ ಕಂಪನಿಗಳು LPG ದರದಲ್ಲಿ ಹೆಚ್ಚಳ ಘೋಷಿಸಿವೆ.ದೇಶೀಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಸುಮಾರು ₹60 ಹೆಚ್ಚಳವಾಗಿದ್ದರೆ, ವಾಣಿಜ್ಯ LPG ಸಿಲಿಂಡರ್ ದರದಲ್ಲಿ ₹114.5 ರಷ್ಟು ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ಹೊಟೇಲ್ ಮತ್ತು ಉಪಹಾರ ಗೃಹಗಳ ನಿರ್ವಹಣಾ ವೆಚ್ಚ ಹೆಚ್ಚಾಗಿದೆ. […]
ಉಡುಪಿ: ಆಯುಧದಿಂದ ಇರಿದು ಮಹಿಳೆಯ ಕೊಲೆ

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60) ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿ ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿಗಳಾದ ವೆಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್ ಮೆಂಡೊನ್ಸಾ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಬ್ಬರು ಅಣ್ಣತಮ್ಮಂದಿರ ಮಕ್ಕಳಾಗಿದ್ದು, ಇವರು ವನಜಾ ಪೂಜಾರಿ ಅವರೊಂದಿಗೆ ಆಗಾಗ ಮದ್ಯ ಸೇವನೆ ಮಾಡುತ್ತಿದ್ದರು. ಮಾ.9ರಂದು ಸಂಜೆ […]
ಹಿರಿಯಡಕ: ಗೂಡ್ಸ್ ರಿಕ್ಷಾ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

ಹಿರಿಯಡ್ಕ: ಗೂಡ್ಸ್ ಅಟೋ ರಿಕ್ಷಾವೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಿರಿಯಡಕ ಕಾಮತ್ ನರ್ಸಿಂಗ್ ಹೋಂ ಬಳಿ ಮಾ.9ರಂದು ಬೆಳಗ್ಗೆ ನಡೆದಿದೆ. ಹಿರಿಯಡಕ ಕಡೆಯಿಂದ ಕೋಟ್ನಕಟ್ಟೆ ಕಡೆಗೆ ಹೋಗುತ್ತಿದ್ದ ಗೂಡ್ಸ್ ಅಟೋ ರಿಕ್ಷಾ, ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಮೇಶ್ ಕಲ್ಕೂರ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ […]
ಉಡುಪಿ:ಕರ್ನಾಟಕ ರಾಜ್ಯ ಮಕ್ಕಳ ಹಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಪ್ರವಾಸ ಕಾರ್ಯಕ್ರಮ

ಉಡುಪಿ:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ಮಾರ್ಚ್ 12 ರಿಂದ 14 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ. 12 ರಂದು ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ಮಾ. 13 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 1.30 ರ ವರೆಗೆಉಡುಪಿ ನಗರದಲ್ಲಿರುವ ಮಕ್ಕಳ ಪಾಲನಾ ಸಂಸ್ಥೆ, ವಸತಿ ಶಾಲೆ/ ನಿಲಯ, ಪೊಲೀಸ್ ಠಾಣೆ, ಅಂಗನವಾಡಿ ಹಾಗೂ ಜಿಲ್ಲಾಸ್ಪತ್ರೆಗೆಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ […]