ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಗ್ರಾಮೀಣ ಅಧ್ಯಕ್ಷರ ನೇಮಕಾತಿ

ಕಾಪು: ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ನಿರ್ದೇಶನದಂತೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ವೈ. ಸುಕುಮಾರ್ ಅವರು ಹೆಜಮಾಡಿ, ಪಡುಬಿದ್ರಿ, ಉಚ್ಚಿಲ ಮತ್ತು ಮಲ್ಲಾರು ಗ್ರಾಮೀಣ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಬೋದ್ ಚಂದ್ರ ಹೆಜಮಾಡಿ ಅವರನ್ನು ನೇಮಕ ಮಾಡಲಾಗಿದೆ. ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ. ಉಚ್ಚಿಲಾ ಬಡಾ ಗ್ರಾಮೀಣ ಕಾಂಗ್ರೆಸ್ […]

ಉಡುಪಿ:ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಮಿಕ ರೋಗಗಳ ಘಟಕ ಎನ್.ಸಿ.ಡಿ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ಹಾಗೂ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ.ಆಮ್ನಾ ಹೆಗ್ಡೆ ಮಾತನಾಡಿ, ಈ ಹಿಂದೆ ಅಬಲೆಯೆಂದು ಕರೆಸಿಕೊಳ್ಳುತ್ತಿದ್ದ ಮಹಿಳೆಯರು ಇಂದು ಸಬಲೆಯಾಗಿ, ಉತ್ತಮ ಶಿಕ್ಷಣವನ್ನು […]

ಉಡುಪಿ:ಸಾಲಿಗ್ರಾಮ ಪ.ಪಂ. ಉದ್ಯಮ ಪರವಾನಿಗೆ ನವೀಕರಣ: ಅರ್ಜಿ ಆಹ್ವಾನ

ಉಡುಪಿ:ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಎಲ್ಲಾ ಉದ್ಯಮದಾರರ 2026-27 ನೇ ಸಾಲಿನ ಉದ್ಯಮಪರವಾನಿಗೆ ನವೀಕರಣ ಅವಧಿಯು ಏಪ್ರಿಲ್ 2026 ರಿಂದ ಪ್ರಾರಂಭವಾಗಲಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯಮ ನಡೆಸುತ್ತಿರುವ ಉದ್ಯಮದಾರರು ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸಂಬಂಧಿಸಿದಂತೆ ನಿಗದಿತ ದಾಖಲೆ ಸಹಿತಆನ್‌ಲೈನ್ ಮೂಲಕ ಅಥವಾ ಪಟ್ಟಣ ಪಂಚಾಯತ್‌ಗೆ ಅರ್ಜಿ ನಮೂನೆ ಹಾಗೂ ದಾಖಲೆ ಸಹಿತ ಶುಲ್ಕ ಪಾವತಿಸಿ ಉದ್ಯಮಪರವಾನಿಗೆ ನವೀಕರಿಸಿಕೊಳ್ಳಬಹುದಾಗಿದೆ. ನಿಗದಿತ ಅವಧಿಯಲ್ಲಿ ಉದ್ಯಮ ಪರವಾನಿಗೆ ನವೀಕರಿಸದಿದ್ದಲ್ಲಿ ಅಧಿಸೂಚನೆಯಂತೆ ದಂಡ ಸಹಿತ ಬಾಕಿ ಶುಲ್ಕವನ್ನುಪಾವತಿಸಬೇಕು. ಈಗಾಗಲೇ ಉದ್ಯಮ ಸ್ಥಗಿತಗೊಳಿಸಿದ್ದಲ್ಲಿ […]

ಉಡುಪಿ:ವಸತಿ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ 198 ರಂತೆ ಅರಣ್ಯ ದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಮಲೈಕುಡಿಯ ಸಮುದಾಯದವರಿಗೆ “ಮುಖ್ಯಮಂತ್ರಿಗಳ ಆದಿವಾಸಿ ಗೃಹ ಭಾಗ್ಯ ಯೋಜನೆ”ಯಡಿ ಮನೆಗಳನ್ನು ನಿರ್ಮಾಣ ಮಾಡಲು ಜಿಲ್ಲೆಯ ವಸತಿ ರಹಿತ ಮಲೈಕುಡಿ ಸಮುದಾಯದವರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ್ ಅಥವಾ ಐ.ಟಿ.ಡಿ.ಪಿ ಕಚೇರಿ ರಜತಾದ್ರಿ, ಮಣಿಪಾಲದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಕುಂದಾಪುರದ ವಡೇರಹೋಬಳಿ ಗ್ರಾಮದ ರಾಯಪ್ಪನ ಮಠ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶರತ್ ಕುಮಾರ್ ಶೆಟ್ಟಿ (51) ಎಂಬ ವ್ಯಕ್ತಿಯು ಮಾರ್ಚ್ 4 ರಂದು ಬೆಳಗ್ಗೆ 9.30 ರ ಸುಮಾರಿಗೆ ಬ್ಯಾಂಕ್ ಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: […]