ನೇತ್ರಜ್ಯೋತಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಉಡುಪಿ: ಉಡುಪಿಯ ನೇತ್ರಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಜಂಟಿ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸುಲತಾ ಭಂಡಾರಿ ಮಾತನಾಡಿ, ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಕೃಷ್ಣಪ್ರಸಾದ್ ಕೂಡ್ಲು, ಮಹಿಳೆಯರು ಈಗ ಅಬಲೆ ಅಲ್ಲ. […]