ಉಡುಪಿ ಶ್ರೀಕೃಷ್ಣಮಠದಲ್ಲಿ ಅನ್ನದಾನಕ್ಕೆ ಯಾವುದೇ ಸಮಸ್ಯೆ ಇಲ್ಲ- ದಿವಾನ ಡಾ. ಉದಯಕುಮಾರ್ ಸರಳತ್ತಾಯ

ಉಡುಪಿ: ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುವ ಅನ್ನದಾನ ಹಾಗೂ ಊಟೋಪಚಾರ ವ್ಯವಸ್ಥೆಗೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಶಿರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ತಿಳಿಸಿದ್ದಾರೆ. ಪ್ರತಿ ದಿನ ಸಾವಿರಾರು ಭಕ್ತರು ಭೋಜನ ಸ್ವೀಕರಿಸುವ ಉಡುಪಿ ಶ್ರೀ ಕೃಷ್ಣಮಠವನ್ನು ‘ಅನ್ನ ಬ್ರಹ್ಮನ ದೇಗುಲ’ ಎಂದೇ ಕರೆಯಲಾಗುತ್ತದೆ. ಇಲ್ಲಿ ಪರಂಪರೆಯಿಂದ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುವ ಪದ್ಧತಿ ಇದ್ದರೂ, ಇತ್ತೀಚಿನ ವರ್ಷಗಳಲ್ಲಿ ಅಡುಗೆ ಕಾರ್ಯಕ್ಕೆ ಅನಿಲದ ಅವಲಂಬನೆಯೂ ಹೆಚ್ಚಾಗಿದೆ. ಸದ್ಯ ಅಡುಗೆ ಅನಿಲ ಲಭ್ಯವಿದ್ದು, ಯಾವುದೇ […]
ಶಿರ್ವ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು

ಉಡುಪಿ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಸೆಡ್ ಬಳಿ ನಡೆದಿದೆ. ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾಲ್ಮರದ ಕ್ಯಾಟರಿಂಗ್ ಸೆಡ್ ಬಳಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈತ ಅವಿವಾಹಿತನಾಗಿದ್ದು, ಕ್ಯಾಟರಿಂಗ್ ನಲ್ಲಿ ಮುಖ್ಯ ಅಡುಗೆ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಎಲ್ಲರೊಂದಿಗೆ ಬೆರೆಯುತ್ತಿದ್ದ ಗೌತಮ್ […]
ಉಡುಪಿ:ವಿಶ್ವ ಗ್ರಾಹಕರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಬಳಕೆದಾರರ ವೇದಿಕೆ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಪ್ರಾಂಶುಪಾಲೆ ಸುರೇಖಾ ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬಲಪಾಡಿ ಶ್ರೀ […]
ಉಡುಪಿ:ಹೀರೋ ಶಕ್ತಿ ಮೋಟರ್ಸ್‌ನಲ್ಲಿ ಉದ್ಯೋಗಾವಕಾಶ

ಉಡುಪಿ:ಉಡುಪಿ ಜಿಲ್ಲೆಯ ಹೀರೋ ಶಕ್ತಿ ಮೋಟರ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು : 🔹ಬ್ರಾಂಚ್ ಮ್ಯಾನೇಜರ್ – 2 ಹುದ್ದೆಗಳು 🔹ಸೇಲ್ಸ್ ಎಕ್ಸಿಕ್ಯೂಟಿವ್ – 3 ಹುದ್ದೆಗಳು 🔹ಅಡ್ವೈಸರ್ಸ್ – 2 ಹುದ್ದೆಗಳು 🔹 CRE – 2 ಹುದ್ದೆಗಳು ಫ್ರೆಶರ್ಸ್‌ಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.ಆಸಕ್ತರು ಸಂಪರ್ಕಿಸಿ :📞7996210666 📩[email protected]
ಉಡುಪಿ:ವಚನ ಕಲ್ಯಾಣ 9 ಗಂಟೆಗಳ ನಾಟಕ ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ‘ ವಚನ ಕಲ್ಯಾಣ ‘ಎಂಬಅಹೋರಾತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿದೆ. ಆ ಸಂಬಂಧ ನುರಿತ ಹಾಗೂ ಆಸಕ್ತ ಯುವಕ ಯುವತಿಯರು ಹಾಗೂ ಅನುಭವಿ ರಂಗಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನುಅಹ್ವಾನಿಸಿದೆ. ವಯೋಮಿತಿ 18 ರಿಂದ 40 ವರ್ಷಗಳು ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಅದ್ಯತೆಯನ್ನು ನೀಡಲಾಗುವುದು. ತುಂಬಿದ ಅರ್ಜಿಗಳನ್ನು ಮಾರ್ಚ್ 20 ರ ಒಳಗೆ ಸದಸ್ಯ ಕಾರ್ಯದರ್ಶಿ, ಸಂತ […]