ಉಡುಪಿ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗೊಂದಲಗಳಿಗೆ ಆಸ್ಪದ ನೀಡದಂತೆ ಮುಕ್ತವಾಗಿ ಪರೀಕ್ಷೆ ಬರೆಯಲು ಪೂರಕ ವಾತಾವರಣ ಕಲ್ಪಿಸಿ- ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 18 ರಿಂದ ಏಪ್ರಿಲ್ 22 ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ವಿದ್ಯಾರ್ಥಿಗಳು ಸುಗಮವಾಗಿ ಭಯ ಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳ ಭವಿಷ್ಯ […]