ಉಡುಪಿ:ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ: ಜಿಲ್ಲಾ ಮಟ್ಟದ ಕಾರ್ಯಾಗಾರ

ಉಡುಪಿ: ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಜಿಲ್ಲಾ ಮಟ್ಟದಕಾರ್ಯಾಗಾರ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಕಾರ್ಯಕ್ರಮವು ಮಾರ್ಚ್ 17 ರಂದು ಬೆಳಿಗ್ಗೆ 10.00 ಗಂಟೆಗೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಕೃಷಿ ಸಚಿವ ಚೆಲುವರಾಯ ಸ್ವಾಮಿ ಉಪಸ್ಥಿತರಿರಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ […]

ಉಡುಪಿ:ಹೋಟೆಲ್ ಉದ್ಯಮಗಳಲ್ಲಿ ಅನಿಲಕ್ಕೆ ಪರ್ಯಾಯವಾಗಿ ಇತರೆ ಉರುವಲುಗಳ ಬಳಕೆ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಉಡುಪಿ: ಪಶ್ಚಿಮ ಎಷ್ಯಾ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದಾಗಿ ದೇಶದಲ್ಲಿ ವಾಣಿಜ್ಯ ಬಳಕೆ ಮಾಡುವ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಿದೆ. ಇದರಿಂದ ಹೋಟೆಲ್ ಉದ್ಯಮ ನಡೆಸುವವರಿಗೆ ತೊಂದರೆಯಾಗಿದ್ದು ಹೊಟಲ್ ಉದ್ಯಮ ಮುಂದುವರೆಸಲು ಪರ್ಯಾಯ ಉರುವಲುಗಳಾದ ಕಟ್ಟಿಗೆ ಹಾಗೂ ವಿದ್ಯುತ್ಉರುವಲುಗಳ ಬಳಕೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ಸರಬರಾಜು ಸಮಸ್ಯೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ […]

ಉಡುಪಿ:ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಉಪ್ಪೂರು ಉಡುಪಿ ಇಲ್ಲಿ ಡಿಪ್ಲೋಮಾಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲುಎಂ.ಟೆಕ್/ಬಿ.ಇ(ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಂ.ಎಸ್ಸಿ(ಎಲೆಕ್ಟ್ರಾನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿಪ್ರೌಢಶಾಲೆ ಹತ್ತಿರ, ಕೊಳಲಗಿರಿ ಉಪ್ಪೂರು ದೂ.ಸಂ: 9880510585, 8618760169 ಇ-ಮೇಲ್:[email protected] ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಉಡುಪಿ:ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ

ಉಡುಪಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಎಸ್. ಕೋಸಂಬೆ ಅವರು ಶುಕ್ರವಾರ ನಗರದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ಚಿಕಿತ್ಸಾ ಘಟಕ, ತಾಯಿ ಆರೈಕೆ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಿದರು. ವಿಶೇಷ ನವಜಾತ ಶಿಶು ಚಿಕಿತ್ಸಾ ಘಟಕದಲ್ಲಿ ನವಜಾತ ಶಿಶುಗಳಿಗೆ ಆರೈಕೆ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದು ಈಘಟಕದಲ್ಲಿ ನಿರ್ವಹಿಸುತ್ತಿರುವ ರಿಜಿಸ್ಟರ್‌ಗಳನ್ನು ಹಾಗೂ ಕಡತಗಳನ್ನು ಪರಿಶೀಲಿಸಿದ ಅವರು, ಸರಕಾರದ […]

ಉಡುಪಿ:ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕಾ ಅಭಿಯಾನ ಪ್ರಮುಖ ಮೈಲಿಗಲ್ಲು – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಆರೋಗ್ಯವಂತ ರಾಷ್ಟ್ರದ ಉದಯ ಆರೋಗ್ಯವಂತ ಮಹಿಳೆಯರಿಂದ ಆರಂಭವಾಗುತ್ತದೆ.ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕೆ ಸಹಕಾರಿಯಾಗಿದ್ದು, ಹೆಣ್ಣು ಮಕ್ಕಳಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಲಸಿಕಾ ಅಭಿಯಾನ ಕಾರ್ಯಕ್ರಮವು ಒಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಬ್ರಹ್ಮಗಿರಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಉಡುಪಿ […]