ಉಡುಪಿ:ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕಾ ಅಭಿಯಾನ ಪ್ರಮುಖ ಮೈಲಿಗಲ್ಲು – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಆರೋಗ್ಯವಂತ ರಾಷ್ಟ್ರದ ಉದಯ ಆರೋಗ್ಯವಂತ ಮಹಿಳೆಯರಿಂದ ಆರಂಭವಾಗುತ್ತದೆ.ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕೆ ಸಹಕಾರಿಯಾಗಿದ್ದು, ಹೆಣ್ಣು ಮಕ್ಕಳಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಲಸಿಕಾ ಅಭಿಯಾನ ಕಾರ್ಯಕ್ರಮವು ಒಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಬ್ರಹ್ಮಗಿರಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಉಡುಪಿ […]

ಉಡುಪಿ:ಮಕ್ಕಳ ರಕ್ಷಣಾ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ: ಶಶಿಧರ್ ಕೋಸಂಬೆ ಕರೆ

ಉಡುಪಿ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ರಕ್ಷಣೆಗೆ ಸರಕಾರ ಜಾರಿಗೆ ತಂದಿರುವ ಹಕ್ಕುಗಳು,ನಿಯಮಗಳು ಹಾಗೂ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಮಕ್ಕಳ ಅಭಿವೃದ್ಧಿಗೆಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಆರ್. ಟಿ. ಇ ಕಾಯ್ದೆ 2009, ಪೋಕ್ಸೋ ಕಾಯ್ದೆ 2012, ಬಾಲ್ಯವಿವಾಹ […]

ಉಡುಪಿ:ಅಂಗನವಾಡಿ ಕಟ್ಟಡ ಸಾಮಾಗ್ರಿ ಬಹಿರಂಗ ಹರಾಜು

ಉಡುಪಿ: ಕಾರ್ಕಳ ಶಿಶು ಅಭಿವೃದ್ಧಿ ಯೋಜನೆಯ ಇನ್ನಾ ಪಂಚಾಯತ್ ವ್ಯಾಪ್ತಿಯ ಪಡುಇನ್ನಾಅಂಗನವಾಡಿ ಕೇಂದ್ರದ ಕಟ್ಟಡ ಸಾಮಾಗ್ರಿಗಳನ್ನು ಮಾರ್ಚ್ 17 ರಂದು ಪಡುಇನ್ನಾ ಅಂಗನವಾಡಿ ಕೇಂದ್ರದಲ್ಲಿ ಹರಾಜುಮಾಡಲಾಗುತ್ತಿದ್ದು ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಕಚೇರಿ ಪ್ರಕಟಣೆ ತಿಳಿಸಿದೆ.

ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೆ: ಬದಲಿ ಮಾರ್ಗ

ಉಡುಪಿ: ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ರಾ.ಹೆ169(ಎ) ರ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಮಾರ್ಚ್ 16 ರಂದು ಸಂಜೆ 4.00 ಗಂಟೆಯಿಂದ ರಾತ್ರಿ 10.00 ಗಂಟೆವರೆಗೆ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ. ಬದಲಿ ಮಾರ್ಗದ ವಿವರಗಳು:ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಉಡುಪಿಯಿಂದ ಹೆಬ್ರಿ-ಆಗುಂಬೆ ಕಡೆಗೆ ಹೋಗುವ ವಾಹನಗಳು ಹಿರಿಯಡ್ಕ ಜಂಕ್ಷನ್ನಲ್ಲಿ ಮಾರ್ಗ ಬದಲಾಯಿಸಿ-ಕೋಟ್ನಾಕಟ್ಟೆ-ಹರಿಖಂಡಿಗೆ-ಬೈರಂಪಳ್ಳಿ-ಪೆರ್ಡೂರು ಮೇಲ್ಪೆಟೆ ಮಾರ್ಗವಾಗಿ ಅಥವಾ […]

ಉಡುಪಿ:ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೆ: ಮದ್ಯ ಮಾರಾಟ ನಿಷೇಧ

ಉಡುಪಿ: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ(ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಫೆಬ್ರವರಿ 16 ರಂದು ಬೆಳಗ್ಗೆ 6 ಗಂಟೆಯಿಂದ ಫೆ. […]