ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ದ ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು: ಪ್ರಶಾಂತ್ ಜತ್ತನ್ನ

ಉಡುಪಿ: ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ಕ್ರೈಸ್ತ ಸಮುದಾಯದವರಿಗೆ ಮಾಡಿರುವ ಭಕ್ತಿ ಸಂಜೀವನ ಕೂಟವಾಗಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಸ್ಪಷ್ಟಪಡಿಸಿದ್ದಾರೆ.ಸಮಾಧಾನದ ಹೆಸರಿನಲ್ಲಿ ನಡೆಯುತ್ತಿರುವ ಮತಾಂತರದ ಷಡ್ಯಂತ್ರವಾಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದಕ್ಕೆ ಕೂಡಲೇ ತಡೆ ನೀಡಬೇಕೆಂದು ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ ಶ್ರೀಕಾಂತ್ ಶೆಟ್ಟಿ ಎಂಬವರು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು ಹಾಸ್ಯಾಸ್ಪದವಾಗಿದೆ. ಈ ದೇಶದಲ್ಲಿ […]

ಉಡುಪಿ: ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ- ಕಾರಣ ನಿಗೂಢ.!

ಉಡುಪಿ: ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಪುತ್ತೂರು ನೆಲ್ಯಾಡಿ ನಿವಾಸಿ ಜಿನ್ಸನ್ ಪಿ. ಎಮ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯ‌ ಠಾಣಾಧಿಕಾರಿ ಭರತೇಶ್, ಪಿ ಎಸ್ ಐ ನಾರಾಯಣ, ಎ.ಎಸ್.ಐ ವಿಜಯ್ ಘಟನಾ ಸ್ಥಳದಲ್ಲಿದ್ದು, ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ: 25 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಮುನ್ಸೂಚನೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ಸುಮಾರು 25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆಯ ತೀವ್ರತೆ ಮುಂದುವರಿಯಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ನಿರ್ಮಾಣವಾದ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವೆಡೆ ಈಗಾಗಲೇ ಅಕಸ್ಮಾತ್ ಮಳೆ ದಾಖಲಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲವೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ […]

ಮಂಗಳೂರು ಬಂದರು ತಲುಪಿದ LPG ತುಂಬಿದ ಶಿವಾಲಿಕ್ ಹಡಗು:  ಗ್ಯಾಸ್ ಟ್ರಬಲ್ ಮಧ್ಯೆ ಈಗ ಸ್ವಲ್ಪ ನಿರಾಳ

ಕಚ್ಚ್: ಒಟ್ಟು 46,000 ಮೆಟ್ರಿಕ್ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಹೊತ್ತ ಭಾರತೀಯ ತೈಲ ಸಾಗಣೆ ಹಡಗು ಶಿವಾಲಿಕ್ ಸೋಮವಾರ ಸಂಜೆ ಮುಂದ್ರಾ ಬಂದರು ತಲುಪಿದೆ. ಇದರಲ್ಲಿ 20,000 ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಮುಂದ್ರಾದಲ್ಲೇ ಇಳಿಸಲಾಗುತ್ತಿದ್ದು, ಉಳಿದ 26,000 ಮೆಟ್ರಿಕ್ ಟನ್ ಇಂದು ಮಂಗಳೂರು ಬಂದರುಗೆ ಸಾಗಲಿದೆ. ಈ ಸರಕು Indian Oil Corporation Limited (IOCL) ಆರ್ಡರ್ ಮಾಡಿದದ್ದಾಗಿದೆ. ನಿನ್ನೆ ದೆಹಲಿನಲ್ಲಿ ನಡೆದ ಮಧ್ಯಪ್ರಾಚ್ಯದ ಬೆಳವಣಿಗೆಗಳ ಕುರಿತ ಅಂತರ ಸಚಿವಾಲಯ ಸಭೆಯಲ್ಲಿ ಮಾತನಾಡಿದ ಬಂದರು, […]