ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “Incridea’26” ರಲ್ಲಿ ಚಾಂಪಿಯನ್ ಶಿಪ್

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಎನ್. ಎಮ್. ಎ. ಎಮ್. ಐ. ಟಿ, ನಿಟ್ಟೆ ಇಲ್ಲಿ ದಿನಾಂಕ ೫ ರಿಂದ ೮ ಮಾರ್ಚ್ ೨೦೨೬ ರಂದು ನಡೆದ “Incridea’26” ನಲ್ಲಿ ಚಾಂಪಿಯನ್ ಶಿಪ್ ಅನ್ನು ಪಡೆದಿರುತ್ತಾರೆ.ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ರಿಸ್ಟನ್, ಧೃತಿ, ತನುಷಾ ಮತ್ತು ಸೃಜನ್ ಇವರು ಲೈನ್ ಫಾಲೋವರ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿರುತ್ತಾರೆ.ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಧೃತಿ […]
ಎಕ್ಸ್ಪರ್ಟ್ ಕಾಲೇಜಿನಲ್ಲಿ ‘ಪದವಿ ಪ್ರದಾನ’ ಸಮಾರಂಭ: ಸಮಯದ ಸದ್ವಿನಿಯೋಗವೇ ಯಶಸ್ಸಿನ ಗುಟ್ಟು: ಪ್ರೊ.ನರೇಂದ್ರ ಎಲ್ ನಾಯಕ್

ಮಂಗಳೂರು: ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಕಠಿಣ ಶ್ರಮ, ಆತ್ಮವಿಶ್ವಾಸ ಮತ್ತು ಗುರಿಯೊಂದಿಗೆ ಸಾಗಿದರೆ ನಾವು ಉನ್ನತಮಟ್ಟಕ್ಕೆ ಏರಲು ಸಾಧ್ಯ. ಬದುಕಿನಲ್ಲಿ ಯಾವುದೇ ಸವಾಲುಗಳು ಬಂದರು ಧೈರ್ಯದಿಂದ ಎದುರಿಸಿ ಸದಾ ಹೊಸದನ್ನು ಕಲಿಯುವ ಮನೋಭಾವವನ್ನು ಹೊಂದಿರಬೇಕು. ಶಿಕ್ಷಣ ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ, ವ್ಯಕ್ತಿತ್ವ ನಿರ್ಮಾಣಕ್ಕೂ ಸಹಾಯಕವಾಗಬೇಕು ಎಂದು ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಪ್ರೊ.ನರೇಂದ್ರ ಎಲ್ ನಾಯಕ್ರ ವರು ಹೇಳಿದರು.ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿ.ಯು ವಿದ್ಯಾರ್ಥಿಗಳ‘ಪದವಿ ಪ್ರದಾನ’ ಸಮಾರಂಭದಲ್ಲಿ ಅಧ್ಯಕ್ಷೀಯ […]
ಉಡುಪಿ: ಯುವಕ ನಾಪತ್ತೆ

ಉಡುಪಿ: ಹೊಟೇಲ್ ಒಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕುಂದಾಪುರ ತಾಲೂಕಿನ ಯಡಮೊಗ್ಗೆ ಗ್ರಾಮದ ಬೀರನಬೈಲು ನಿವಾಸಿ ಪ್ರಶಾಂತ (23) ಎಂಬ ವ್ಯಕ್ತಿಯು 2024 ರ ಮಾರ್ಚ್ 1 ರಂದು ಕೆಲಸಕ್ಕೆಂದು ಹೋದವರು ಮನೆಗೆವಾವಾಸು ಬಾರದೆ ನಾಪತ್ತೆಯಾಗಿರುತ್ತಾರೆ.5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ. ಇವರಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ದೂ.ಸಂ: 08259-280299, ಕುಂದಾಪುರ ಠಾಣೆ ದೂ.ಸಂ:08254-230338, ಎಸ್.ಡಿ.ಪಿ.ಒ: 08254-232338, ಡಿ.ಪಿ.ಒ: 0820-2534777, ರೇಂಜ್: 8242220501 […]
ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೇತುವೆಗಳ ನಿರ್ಮಾಣಕ್ಕೆ ರೂ. 4.50 ಕೋಟಿ ರೂಪಾಯಿ ಅನುದಾನ ಮಂಜೂರು: ವಿ ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ತಾಲೂಕು ವ್ಯಾಫ್ತಿಯಲ್ಲಿ ಜಿಲ್ಲಾ ಮುಖ್ಯರಸ್ತೆಗಳಲ್ಲಿ ಹಾದು ಹೋಗುವ 03 ಸೇತುವೆಗಳ ಮರು ನಿರ್ಮಾಣ ಕಾಮಗಾರಿಗಳಿಗೆ ತಲಾ 1.50 ಕೋಟಿ ವೆಚ್ಚದಲ್ಲಿ ಅಭಿವೃದದಿ ಪಡಿಸಲು ಒಟ್ಟು 4.50 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಆಗಿರುತ್ತದೆ. ಕಾರ್ಕಳದ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಪ್ರಮುಖ ಸೇತುವೆಗಳ ಮರು ನಿರ್ಮಾಣದ ಪೈಕಿ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳ ನಕ್ರೆ ರಂಗನಪಲ್ಕೆ ಜಿಲ್ಲಾ ಮುಖ್ಯರಸ್ತೆಯ ಪರಪು ಎಂಬಲ್ಲಿ […]
ಉಡುಪಿ: ಆರೋಗ್ಯ ಇಲಾಖೆಯ ವಿವಿಧ ಹುದ್ದೆ- ಅರ್ಜಿ ಆಹ್ವಾನ

ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಅಹ್ವಾನಿಸಲಾಗಿದೆ.ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ Udupi.nic.in ನ್ನು ಸಂಪರ್ಕಿಸಬಹುದಾಗಿದೆಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.