ಕಾರ್ಕಳ: ಬೈಕ್‌ಗೆ ಹಿಂದಿನಿಂದ ಲಾರಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

ಕಾರ್ಕಳ: ಅತಿವೇಗದಿಂದ ಧಾವಿಸಿ ಬಂದ ಟಿಪ್ಪರ್ ಲಾರಿಯೊಂದು ಮುಂದೆ ಹೋಗುತ್ತಿದ್ದ ಮೋಟಾರು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಗುರುವಾರ ಬೆಳಗ್ಗೆ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ. ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತನ್ನ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಹೋಗುತ್ತಿರುವಾಗ ಆರೋಪಿ ತನ್ನ ಟಿಪ್ಪರ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು […]
ನಾಳೆ (ಮಾ.20) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿಸಿ ಸ್ವರೂಪ ಟಿ ಕೆ

ಉಡುಪಿ: ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಆಚರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.
ನಾಳೆ (ಮಾ. 20) ಉಡುಪಿ, ದ.ಕ. ಜಿಲ್ಲೆಯಾದ್ಯಂತ ಈದುಲ್ ಫಿತರ್ ಆಚರಣೆ

ಉಡುಪಿ: ಕರಾವಳಿಯಲ್ಲಿ ಇಂದು ಚಂದ್ರ ದರ್ಶನ ಆದ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ಶುಕ್ರವಾರ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್(ರಮಾಝಾನ್ ಹಬ್ಬ) ಹಬ್ಬವನ್ನು ಆಚರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
ಪ್ರಕೃತಿಯ ಹಸುರು, ಯುಗಾದಿಗೆ ಹೊಸ ಉಸಿರು: ಯುಗಾದಿ ಹಬ್ಬದ ವಿಶೇಷ ಬರಹ

ನಮ್ಮ ಮನೆಯ ಅಶೋಕ ಮರದಲ್ಲಿ ಮಾರ್ಚ್ ತಿಂಗಳು ಆರಂಭವಾಗುತ್ತಿದ್ದಂತೆಯೇ ಹತ್ತಾರು ಬಗೆಯ ಹಕ್ಕಿಗಳು ಅಶೋಕಮರಕ್ಕೆ ಮುತ್ತಿಗೆ ಹಾಕಲು ಶುರುಮಾಡುತ್ತವೆ. ಆದರೆ ಯಾವಾಗ ಮಾರ್ಚ್ ತಿಂಗಳು ಮುಗಿದು ಎಪ್ರಿಲ್ ತಿಂಗಳು ಆರಂಭವಾಗುತ್ತದೋ, ಆಗ ಮರದ ತುಂಬಾ ಚಿಪಿಪಿಲಿ ಹಾಡುಗಳನ್ನು ಹಾಡುತ್ತಲೇ ರೆಂಬೆ ಕೊಂಬೆಗಳಿಗೂ ಹಾರುವ ಹಕ್ಕಿಗಳು ಒಂದೇ ಸಮನೆ ಜಾಸ್ತಿಯಾಗುತ್ತವೆ. ಅವುಗಳೆಲ್ಲಾ “ನೋಡು ನೋಡು ಗೆಳತಿ ಚೈತ್ರ ಕಾಲ ಬಂದಿದೆ, ಮೋಡಿ ಮಾಡಿ ನನ್ನ ಮನಕೆ ಹರುಷ ತಂದಿದೆ” ಎಂದು ಯಕ್ಷಗಾನದಲ್ಲಿ ಭಾಗವತರು ಸುಶ್ರಾವ್ಯವಾಗಿ ಹಾಡುವ ಪದ್ಯದಂತೆ, ವಸಂತರಾಜನನ್ನು […]
ಯುಗಾದಿ ಹಬ್ಬಕ್ಕೆ ಗಣ್ಯರಿಂದ ಶುಭಹಾರೈಕೆ..