ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ವಿಳಂಬ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಘುಪತಿ ಭಟ್ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪ್ರಾಧಿಕಾರದ ಕಚೇರಿ ಮುಂದೆ ಆರಂಭಿಸಿದ್ದಾರೆ.ಬಡಾನಿಡಿಯೂರು ಗ್ರಾಮದ 90 ಸೆಂಟ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಿಸುವ ಉದ್ದೇಶದಿಂದ ಜಾಗಕ್ಕೆ ಏಕ ವಿನ್ಯಾಸ ನಕ್ಷೆ ನೀಡುವಂತೆ ರಘುಪತಿ ಭಟ್ 2024ರ ಮಾ.20ರಂದು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಅದಕ್ಕೆ ಈವರೆಗೆ ಅನುಮೋದನೆ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ಬೆಳಿಗ್ಗೆ […]
ಅಮೆರಿಕ ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಿದರೆ, ಹೊರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಚ್ಚುತ್ತೇವೆ: ಇರಾನ್ ಎಚ್ಚರಿಕೆ.!

ದುಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆಯಂತೆ ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ನಡೆದರೆ, ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಭಾನುವಾರ ಎಚ್ಚರಿಕೆ ನೀಡಿದೆ. ಹೊರ್ಮುಜ್ ಜಲಸಂಧಿಯನ್ನು 48 ಗಂಟೆಗಳ ಒಳಗಾಗಿ ಸಂಚಾರಕ್ಕೆ ಮುಕ್ತಗೊಳಿಸಬೇಕು. ಇಲ್ಲದಿದ್ದರೆ, ಇರಾನ್ನ ಅತಿದೊಡ್ಡ ವಿದ್ಯುತ್ ಸ್ಥಾವರದಿಂದ ಆರಂಭಿಸಿ ಎಲ್ಲ ಸ್ಥಾವರಗಳನ್ನು ನಾಶ ಮಾಡಲಾಗುವುದು’ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದರು. ಪಶ್ಚಿಮ ಏಷ್ಯಾದಲ್ಲಿನ ಯುದ್ಧವನ್ನು ಶೀಘ್ರವೇ ಮುಕ್ತಾಯಗೊಳಿಸುವುದಾಗಿ ಒಂದು ದಿನದ ಹಿಂದಷ್ಟೇ ಹೇಳಿದ್ದ ಟ್ರಂಪ್, ಇದೀಗ ಈ […]
ಉಡುಪಿಯಲ್ಲಿ ವಿಜೃಂಭಿಸಿದ ‘ರತ್ನಾಕರ ಉತ್ಸವ -2026’.

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಅವರೇ ಅಧ್ಯಕ್ಷರಾಗಿರುವ ರಂಗಭೂಮಿ ಉಡುಪಿ ಹಾಗೂ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಜಂಟಿ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ ಉಡುಪಿ ಮತ್ತು ಮಹಾರಾಷ್ಟ್ರದ ನಾಗಪುರದ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರದ ಸಹಭಾಗಿತ್ವದಲ್ಲಿ ಮಾ.1ರಿಂದ 8ರವರೆಗೆ ಮೂರು ದಿನಗಳ ಕಾಲ ಉಡುಪಿಯ ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವ, ‘ರತ್ನಾಕರ ಉತ್ಸವ -2026 […]
ಉಡುಪಿ: ಯುವಕರಿಗೆ ಉದ್ಯೋಗಾವಕಾಶ.

ಉಡುಪಿ: ಉಡುಪಿ ಉಪ್ಪೂರಿನಲ್ಲಿರುವ ಪ್ರತಿಷ್ಠಿತ ಓಂಕಾರ್ ಫರ್ನಿಚರ್ಸ್ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯುವಕರು ಬೇಕಾಗಿದ್ದಾರೆ. ಆಕರ್ಷಕ ವೇತನ ಹಾಗೂ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತಮ್ಮ ರೆಸ್ಯೂಮ್ ಅನ್ನು ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳಿಸಬಹುದು.ಮೊ: +91 98800 80253
ಮಣಿಪಾಲ: ಡಿಜಿಟಲ್ ಮಾರ್ಕೆಟಿಂಗ್ನಲ್ಲಿ ನಿಮಗಾಗಿ ಲಭ್ಯವಿದೆ ಡಿ.ಐ.ವೈ ತರಬೇತಿ, ಕೌಶಲ್ಯ ಹೆಚ್ಚಿಸಿಕೊಳ್ಳಲು ಅದ್ಬುತ ಅವಕಾಶ

ಮಣಿಪಾಲ: ವ್ಯಾಪಾರ ಸಂಸ್ಥೆಯ ಮಾಲೀಕರು ಹಾಗೂ ಉದ್ಯಮಿಗಳಿಗಾಗಿ ಡಿಜಿಟಲ್ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಸ್ವತಃ ಕಾರ್ಯನಿರ್ವಹಿಸಲು ನೆರವಾಗುವ ಡಿ.ಐ.ವೈ (Do It Yourself) ತರಬೇತಿ ಕಾರ್ಯಕ್ರಮವನ್ನು MSDC ಮತ್ತು ಡಾವಿನ್ಚಿ ವತಿಯಿಂದ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಏನಿದೆ? ಈ ತರಬೇತಿ ಮೂಲಕ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಮಾರ್ಕೆಟಿಂಗ್ನ ಅಗತ್ಯ ಕೌಶಲ್ಯಗಳನ್ನು ಪ್ರಾಯೋಗಿಕವಾಗಿ ಕಲಿಸಲಾಗುತ್ತದೆ. ಒಟ್ಟು 10 ಸೆಷನ್ಗಳಲ್ಲಿ (20 ಗಂಟೆಗಳು) ನಡೆಯುವ ಈ ತರಬೇತಿಯಲ್ಲಿ ವಾಟ್ಸಪ್ ಬಿಸಿನೆಸ್ ಖಾತೆ ನಿರ್ಮಾಣ, ಇನ್ಸ್ಟಾಗ್ರಾಂ ಜಾಹೀರಾತು ನಿರ್ವಹಣೆ, ಫೇಸ್ಬುಕ್ ಹಾಗೂ ಮೆಟಾ […]