ಶಿರ್ವ: ಕೌಟುಂಬಿಕ ಕಲಹ- 11 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ

ಉಡುಪಿ: ಕುಟುಂಬ ಕಲಹದ ಹಿನ್ನೆಲೆಯಲ್ಲಿ 28 ವರ್ಷದ ಮಹಿಳೆ ತನ್ನ 11 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕಿನ ಬೆಳಪು ಗ್ರಾಮದ ಪುಂಚಲಕಾಡು ಪ್ರದೇಶದಲ್ಲಿ ನಡೆದಿದೆ.ರೇಣುಕಾ ಗಂಗಾಧರ ಪೂಜಾ‌ರ್ ಎಂಬವರು ಪುತ್ರಿ ಪ್ರತೀಕ್ಷಾ ಅವರೊಂದಿಗೆ ನಾಪತ್ತೆಯಾಗಿದ್ದಾರೆ. ಇವರು ಪುಂಚಲಕಾಡು ಮರಿಯಾ ಬೇಕರಿ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಮಾರ್ಚ್ 20ರಂದು ಮಧ್ಯಾಹ್ನ ಊಟದ ವಿಚಾರವಾಗಿ ದಂಪತಿ ನಡುವೆ ಕ್ಷುಲ್ಲಕ ಜಗಳ ನಡೆದಿದ್ದು, ಬಳಿಕ ಗಂಗಾಧರ್ ಕೆಲಸಕ್ಕೆ ತೆರಳಿದ್ದರು. ರಾತ್ರಿ ಮನೆಗೆ ವಾಪಸಾದಾಗ ಮನೆಗೆ ಬೀಗ ಹಾಕಿರುವುದು ಗಮನಕ್ಕೆ […]

ಉಡುಪಿ: ಕೈಗಾರಿಕೋದ್ಯಮಿಗಳು ನಿಗಧಿತ ಕಾಲಾವಧಿಯ ಒಳಗೆ ಯೋಜನೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು ರದ್ದುಪಡಿಸಿ, ನವ ಉದ್ಯಮಿಗಳಿಗೆ ಹಂಚಿಕೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಾ.25 ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ […]