ಉಡುಪಿ: ಗುಡುಗು, ಸಿಡಿಲು ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸಲಹೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು/ ಸನ್ನದ್ಧತೆಗಾಗಿ, ಸಾರ್ವಜನಿಕ ಮತ್ತು ಜಾನುವಾರು ಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ ಸೂಚನೆಗಳನ್ನು ನೀಡಿದೆ.ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳನ್ನು ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ ಮುಖಾಂತರ ಬರುವ ಮೆಸೇಜ್‌ಗಳನ್ನು ಗಮನಿಸಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ […]
ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಮುಂಬೈನಲ್ಲಿ ಸಂಬಂಧಿಕರೊಂದಿಗೆ ವಾಸವಿದ್ದ ಯತಿರಾಜ (53) ಅವರು ತಂದೆ-ತಾಯಿ ಮೃತಪಟ್ಟ ಬಳಿಕ ಬೆಂಗಳೂರಿನಲ್ಲಿ ವಾಸವಿರುವುದಾಗಿ ಕರೆ ಮಾಡಿ ಮನೆಯವರಿಗೆ ತಿಳಿಸಿದ್ದು, ಆಗಾಗ ಫೋನ್ ಕರೆ ಮಾಡುತ್ತಿದ್ದು ಇತ್ತೀಚೆಗೆ 4-5 ತಿಂಗಳಿನಿಂದ ದೂರವಾಣಿ ಸಂಪರ್ಕಕ್ಕೆ ಸಿಕ್ಕಿರುವುದಿಲ್ಲ. ಸಂಬಂಧಿಕರಲ್ಲಿ ಹಾಗೂ ಬೆಂಗಳೂರಿನಲ್ಲಿ ಗುರುತು ಪರಿಚಯದವರಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ದೊರೆತಿರುವುದಿಲ್ಲ.5 ಅಡಿ 4 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿರುವ ಸದ್ರಿ ವ್ತಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡಕ ಪೊಲೀಸ್ ಠಾಣೆ ಪಿ.ಎಸ್.ಐ […]
ಎಸ್.ಎಸ್.ಎಲ್.ಸಿ ತೃತೀಯ ಭಾಷೆ ವಿಷಯದ ಪರೀಕ್ಷೆ ಮಾ.31ಕ್ಕೆ ಮರುನಿಗಧಿ

ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಈಗಾಗಲೇ ಪ್ರಾರಂಭವಾಗಿದ್ದು, ಸದರಿ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 30 ರಂದು ನಿಗಧಿಪಡಿಸಲಾಗಿತ್ತು. ಆದರೆ ಸರ್ಕಾರದ ಅಧಿಸೂಚನೆಯಂತೆ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾರ್ಚ್ 31 ರ ಮಂಗಳವಾರ ಬದಲಾಗಿ ಮಾರ್ಚ್ 30 ರ ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿರುತ್ತದೆ.ಈ ಹಿನ್ನೆಲೆ ಮಾರ್ಚ್ 30 ರಂದು ನಿಗಧಿಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ- ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾರ್ಚ್ 31 ರ ಮಂಗಳವಾರ ಈಗಾಗಲೇ ನಿಗಧಿಪಡಿಸಿರುವ ಅವಧಿಯಲ್ಲಿ […]