ಎ.4ರಂದು ಕಟಪಾಡಿಯಲ್ಲಿ ಮಿಷನ್ ಆಸ್ಪತ್ರೆಯ ನೂತನ ಆರೋಗ್ಯ ಕೇಂದ್ರ ಉದ್ಘಾಟನೆ

ಉಡುಪಿ: ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯು ಕಟಪಾಡಿಯಲ್ಲಿ ಆರಂಭಿಸಿರುವ ನೂತನ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭವು ಎ.4ರ ಶನಿವಾರದಂದು ಬೆಳಿಗ್ಗೆ 10.30ಕ್ಕೆ ಕಟಪಾಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶಿಲ್ ಜತನ್ನ ಹೇಳಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೊಸ ಆರೋಗ್ಯ ಕೇಂದ್ರವು ಕಟಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಸುಲಭವಾಗಿ ಲಭ್ಯವಾಗುವ, ಕೈಗೆಟುಕುವ ಮತ್ತು ಮಾನವೀಯ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿದೆ. ಈ ಸೇವೆಯನ್ನು ಸಿ.ಎಸ್.ಐ-ಕರ್ನಾಟಕ […]

ಉಡುಪಿ: ವೃದ್ಧ ನಾಪತ್ತೆ.

ಉಡುಪಿ ಏಪ್ರಿಲ್ 02: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ನಿವಾಸಿ ದೇವದಾಸ್ ಪೂಜಾರಿ (75) ಎಂಬ ವೃದ್ಧರು 2024 ರ ಡಿಸೆಂಬರ್ 1 ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಪೇಟೆಗೆ ಹೋಗಿ ಬರುವುದಾಗಿ ಹೇಳಿಹೋದವರು ಇದುವರೆಗೂ ವಾಪಾಸು ಬಾರದೇ, ಸಂಬAಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ […]

ಮಣಿಪಾಲ MSDC ವತಿಯಿಂದ ಏಪ್ರಿಲ್ 4 ರಂದು ಎಐ ಆಧಾರಿತ ಫಾರ್ಮ ಕಾರ್ಯಾಗಾರ: ಉಚಿತ ನೋಂದಣಿ.!

ಮಣಿಪಾಲ: Manipal Skill Development Centre ವತಿಯಿಂದ Manipal College of Pharmaceutical Sciences ಸಹಯೋಗದಲ್ಲಿ “NextGen AI for Pharmaceutical Science” ವಿಷಯದ ವಿಶೇಷ ಕಾರ್ಯಕ್ರಮವನ್ನು ಏಪ್ರಿಲ್ 4 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಏರ್ಪಡಿಸಲಾಗಿದೆ. ಮಣಿಪಾಲದ ಎಂಸಿಒಪಿಎಸ್ನ ಪ್ರೊ. ಪಿ. ಗುಂಡು ರಾವ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿಶೇಷವೆಂದರೆ, ಕಾರ್ಯಕ್ರಮಕ್ಕೆ ಉಚಿತ ನೋಂದಣಿ ವ್ಯವಸ್ಥೆ ಕಲ್ಪಿಸಲಾಗಿದೆ.ಈ ಕಾರ್ಯಾಗಾರದಲ್ಲಿ ಔಷಧ ಸಂಶೋಧನೆ (Drug Discovery), ಕ್ಲಿನಿಕಲ್ ಡೇಟಾ ವಿಶ್ಲೇಷಣೆ, ಎಐ ಮಾದರಿಗಳು, […]

ಕಾರ್ಕಳ ಜ್ಞಾನಸುಧಾ: ಪ್ರೌಢಶಾಲೆ ಮತ್ತು ವಾಣಿಜ್ಯ ವಿಭಾಗದ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿನ ಸಮಾಜಮುಖಿಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ ಕಾರ್ಕಳ ತಾಲೂಕಿನ ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಈ ಬಾರಿಯೂ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 6 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ […]

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಿಂದ ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ.

ಮಣಿಪಾಲ: ಮಾಹೆಯ ಸಹ ಘಟಕವಾದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪರಿಣಿತ ವೈದ್ಯರು ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಮೃತ ದಾನಿಯೊಬ್ಬರ ಯಕೃತ್‌ನ(ಲೀವರ್) ಕಸಿ ಶಸ್ತ್ರಚಿಕಿತ್ಸೆಯನ್ನು ರೋಗಿ ಯೊಬ್ಬರ ಮೇಲೆ ಯಶಸ್ವಿಯಾಗಿ ನಡೆಸಿದ್ದಾರೆ. ಯಕೃತ್ ಕಸಿ ಮಾಡಿಸಿಕೊಂಡ 56ರ ಹರೆಯದ ರೋಗಿ ಈಗ ಆರೋಗ್ಯವಂತರಾಗಿದ್ದಾರೆ ಎಂದು ಕೆಎಂಸಿ ಆಸ್ಪತ್ರೆಯ ಡಾ.ರಾಮದಾಸ ಎಂ.ಪೈ ಬ್ಲಾಕ್‌ನಲ್ಲಿ ಕರೆದ ಸುದ್ದಿ ಗೋಷ್ಠಿಯಲ್ಲಿ ಮಾಹೆಯ ಬೋಧನಾ ಆಸ್ಪತ್ರೆಯ ಸಿಒಒ ಡಾ.ಸುಧಾಕರ ಕಾಂತಿಪುಡಿ ತಿಳಿಸಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕೃಿಯಗೊಂಡ 42ಹರೆಯದವರ ಲೀವರ್‌ನ್ನು […]