ದಕ್ಷಿಣ ಕನ್ನಡ: 60 ಕಿ.ಮೀಗೆ 3 ಟೋಲ್‌, ಸದ್ಯದಲ್ಲೇ ಬರುವುದಂತೆ ಇನ್ನೂ 3 ಟೋಲ್

Dakshina Kannada ಜಿಲ್ಲೆಯಲ್ಲಿ ಟೋಲ್‌ಗೇಟ್‌ಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು, ಈಗಾಗಲೇ ಕೇವಲ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ 3 ಟೋಲ್‌ಗೇಟ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಮತ್ತೂ 3 ಟೋಲ್‌ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ನಿಯಮ‌ ಗಾಳಿಗೆ ತೂರಿದ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮ ಪ್ರಕಾರ, ಒಂದು ಟೋಲ್‌ಗೇಟ್‌ನಿಂದ ಮತ್ತೊಂದಕ್ಕೆ ಕನಿಷ್ಠ 60 ಕಿ.ಮೀ ಅಂತರ ಇರಬೇಕು. ಆದರೆ ಇಲ್ಲಿ ಆ ನಿಯಮವೇ ಗಾಳಿಗೆ ತೂರಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಿಂದ ಕೇವಲ 30 ಕಿ.ಮೀ […]

ಸುರತ್ಕಲ್ ಯಕ್ಷ ಪೂರ್ಣಿಮಾ ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

ಉಡುಪಿ: ಇಂದು ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಯಾವುದೇ ವಯೋಮಿತಿ, ಕಟ್ಟುಪಾಡುಗಳಿಲ್ಲದೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ತರಬೇತಿ ಪಡೆಯುತ್ತಿರುವುದು ಕರಾವಳಿಯಲ್ಲಿ ಸಾಂಸ್ಕೃತಿಕ ಕ್ರಾಂತಿಯನ್ನೇ ಹುಟ್ಟುಹಾಕಿದೆ. ನಿಜಾರ್ಥದಲ್ಲಿ ಯಕ್ಷಗಾನ ಇಂದು ವಿಶ್ವಗಾನವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾಕ್ಟರ್ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಸುರತ್ಕಲಿನ ಯಕ್ಷಗಾನ ತರಬೇತಿ ಕೇಂದ್ರ ಯಕ್ಷಪೂರ್ಣಿಮಾ ಇದರ ಎರಡನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾಟಿಪಳ್ಳ ಗಣೇಶಪುರದ ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ನಡೆದ […]

ಉಡುಪಿ: ಜೀರ್ಣೋದ್ಧಾರದ ಫಲ ಇಡೀ ಸಮಾಜಕ್ಕೆ ಸಿಗಲಿ- ಪೇಜಾವರ ಶ್ರೀ

ಅಷ್ಟಬಂಧ ಸಹಿತ ಮುಖ್ಯಪ್ರಾಣ ದೇವರ ಪುನಃಪ್ರತಿಷ್ಠೆ ಸಂಪನ್ನ ಉಡುಪಿ: ಇಂದ್ರಾಳಿಯಲ್ಲಿ ಸಂಪೂರ್ಣ ಜೀರ್ಣೋದ್ಧಾರಗೊಂಡ ಇಂದ್ರಾಣಿ ಮುಖ್ಯ ಪ್ರಾಣ ದೇವರ ಗುಡಿಯಲ್ಲಿ ಅಷ್ಟಬಂಧ ಸಹಿತ ಶ್ರೀಮುಖ್ಯಪ್ರಾಣ ದೇವರ ಪ್ರತಿಷ್ಠೆ ಸಂಪನ್ನಗೊಂಡಿತು.ವೇದಮೂರ್ತಿ ಪುತ್ತೂರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯ ಕ್ರಮಗಳು ನಡೆದವು.ಆದ್ಯ ಗಣಪತಿ ಯಾಗ, ಪ್ರತಿಷ್ಠಾ ಹೋಮದ ಅನಂತರ ಅಷ್ಟಬಂಧ ಸಹಿತ ಶ್ರೀ ಮುಖ್ಯಪ್ರಾಣ ದೇವರ ಪ್ರತಿಷ್ಠೆ ಜರಗಿತು. ಬಳಿಕ ಕಲಶಾಭಿಷೇಕ, ಪ್ರಾಯಶ್ಚಿತ ಹೋಮಾದಿಗಳು, ವಾಯುಸ್ತುತಿ ಹೋಮ, ನವಗ್ರಹ ಹೋಮ, ಪವಮಾನ […]