ಕುಂದಾಪುರದ ಶ್ರೀ ವೆಂಕಟರಮಣ ಪಿ.ಯು.ಕಾಲೇಜಿನಲ್ಲಿದೆ ಉದ್ಯೋಗಾವಕಾಶ, ಈ ಅರ್ಹತೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಕುಂದಾಪುರ: ಕುಂದಾಪುರದ ವೆಂಕಟರಮಣ ಪಿಯು ಕಾಲೇಜು Sri Venkatramana P.U. College ವತಿಯಿಂದ ವಿವಿಧ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಾಲೇಜಿನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರ (Chemistry Lecturer) ಮತ್ತು ರಸಾಯನಶಾಸ್ತ್ರ ಪ್ರಯೋಗಾಲಯ ಸಹಾಯಕ (Chemistry Lab Assistant) ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹತೆ ವಿವರಗಳು: ರಸಾಯನಶಾಸ್ತ್ರ ಉಪನ್ಯಾಸಕ ಹುದ್ದೆಗೆ: M.Sc (Chemistry)ಪ್ರಯೋಗಾಲಯ ಸಹಾಯಕ ಹುದ್ದೆಗೆ: B.Sc / M.Sc (Chemistry)ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ವೇತನ: ಆಕರ್ಷಕ ಹಾಗೂ ಮಾತುಕತೆಯ […]
ನರ್ಸರಿ / ಮಾಂಟೆಸ್ಸರಿ ಟೀಚರ್ಸ್ ಟ್ರೈನಿಂಗ್: ಕೋರ್ಸ್’ಗೆ ಅರ್ಜಿ ಆಹ್ವಾನ

ಉಡುಪಿ/ಮಣಿಪಾಲ: ‘ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸಿಗೆ ದಾಖಲಾತಿ ಆರಂಭವಾಗಿದೆ. 2026-27 ಸಾಲಿನ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆಪಡೆದುಕೊಳ್ಳಬಹುದು. ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್, ಡಿ.ಸಿ.ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆಯಲ್ಲಿ (9901722527, [email protected]) ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿರುತ್ತದೆ.
ಜೀವರಕ್ಷಕ ಸಿಬ್ಬಂದಿಗಳ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಲ್ಪೆ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್‌ಗಳಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿಯೋಜಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ಜೀವರಕ್ಷಕ ತರಬೇತಿ ಹೊಂದಿರುವ ಸಿಬ್ಬಂದಿಗಳಿoದ ಸದರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,958 ವೇತನದೊಂದಿಗೆ ಪಿ.ಎಫ್ ಹಾಗೂ ಇ.ಎಸ್.ಐ ಸೌಕರ್ಯ ಕಲ್ಪಿಸಲಾಗುವುದು. ಬೀಚ್ ಜೀವರಕ್ಷಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ ಕನಿಷ್ಟ 18 ರಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ. […]
ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲು, ಕಳೆದ ಸಾಲಿನ 5 ನೇ ತರಗತಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 5 ನೇ ತರಗತಿಯಲ್ಲಿ ಶೇ. 60 ರಷ್ಟು ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಪೋಷಕರ ವರಮಾನ ವಾರ್ಷಿಕ 2 ಲಕ್ಷ ರೂ. ಮೀರಿರದ ಅರ್ಹ ವಿದ್ಯಾರ್ಥಿಗಳು […]
ಮಣಿಪಾಲದ MSDC ಯಲ್ಲಿದೆ ಕಂಟೆಂಟ್ ಮಾರ್ಕೆಟಿಂಗ್ ಇಂಟರ್ನ್ ಹುದ್ದೆ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಕಂಟೆಂಟ್ ಮಾರ್ಕೆಟಿಂಗ್ ಇಂಟರ್ನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೋಶಿಯಲ್ ಮೀಡಿಯಾ ವಿಷಯ ಸೃಷ್ಟಿಯಲ್ಲಿ ಆಸಕ್ತಿ ಹೊಂದಿರುವ, ಆತ್ಮವಿಶ್ವಾಸಿ ಮತ್ತು ಕ್ಯಾಮೆರಾ ಮುಂದೆ ಸಹಜವಾಗಿ ಕಾಣುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳ ವಯೋಮಿತಿ 18ರಿಂದ 25 ವರ್ಷಗಳೊಳಗಿರಬೇಕು. ಇಂಗ್ಲಿಷ್ ಸಂವಹನ ಬೇಕೇ ಬೇಕು. ಉದ್ಯೋಗ ಸ್ಥಳ ಮಣಿಪಾಲವಾಗಿದ್ದು ಆಸಕ್ತ ಅಭ್ಯರ್ಥಿಗಳು ತಮ್ಮ ಸಿವಿಯನ್ನು [email protected] ಗೆ ಕಳುಹಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ +91 81231 65069 ಸಂಪರ್ಕಿಸಬಹುದು.