ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಮರ್ಣೆ ಗ್ರಾಮದ ಕಾಡುಹೊಳೆ ರೈಸ್‌ಮಿಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮೂಲತಃ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಸಮನಹಳ್ಳಿ ಗ್ರಾಮದವರಾದ ಹನುಮಂತಪ್ಪ (50) ಎಂಬ ವ್ಯಕ್ತಿಯು ಮಾರ್ಚ್ 25 ರಂದು ಸಂಜೆ 7 ಗಂಟೆಯ ಸುಮಾರಿಗೆ ಉಡುಪಿಗೆ ತೆರಳುವುದಾಗಿ ಹೇಳಿ ಹೋದವರು ಇದುವರೆಗೆ ಮನೆಗೆ ವಾಪಾಸು ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ […]
ಬುದ್ಧಿಮಾಂದ್ಯ ಯುವಕ ನಾಪತ್ತೆ

ಉಡುಪಿ: ಕಾಪು ತಾಲೂಕು ಇನ್ನಂಜೆ ಗ್ರಾಮದ ಶಂಕರಪುರದಲ್ಲಿರುವ ವಿಶ್ವಾಸದ ಮನೆ ಎಂಬ ಅನಾಥ ಆಶ್ರಮದಲ್ಲಿ ಆಶ್ರಯ ಪಡೆದಿದ್ದ ಸುಮಾರು 20 ರಿಂದ 25 ವರ್ಷ ಪ್ರಾಯದ ಬುದ್ಧಿಮಾಂದ್ಯ ಯುವಕನು ಮಾರ್ಚ್ 30 ರಂದು ರಾತ್ರಿ 10.30 ರ ನಂತರ ಆಶ್ರಮದಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಕೋಲುಮುಖ, ಗೋದಿ ಮೈಬಣ್ಣ, ಕುತ್ತಿಗೆಯ ಬಲಭಾಗದಲ್ಲಿ ಕಪ್ಪು ಮಚ್ಚೆ ಹೊಂದಿರುವ ಈತನಿಗೆ ಮಾತನಾಡಲು ಬರುವುದಿಲ್ಲ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: […]
ಉಡುಪಿ ಜಿಲ್ಲೆಯ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ; ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಅಗ್ರಸ್ಥಾನ.!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕರಾವಳಿ ಜಿಲ್ಲೆ ಉಡುಪಿ ಶೈಕ್ಷಣಿಕವಾಗಿ ಮುಂದಿರುವ ಜಿಲ್ಲೆ, ಜಿಲ್ಲೆಯ ಹೊರಭಾಗಗಳಿಂದಲೂ ಬಂದು ಇಲ್ಲಿ ವ್ಯಾಸಾಂಗ ಮಾಡುತ್ತಾರೆ. ಹಲವು ವರ್ಷಗಳಿಂದ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಎರಡು ಸ್ಥಾನ ಕಾಯ್ದುಕೊಂಡಿರುವ ಉಡುಪಿ ಜಿಲ್ಲೆಯ […]
ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಶಿಬಿರ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (ಮಂಗಳೂರು) ಉಡುಪಿ, ಆದರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಪ್ರಸಾದ್ ನೇತ್ರಾಲಯ ಉಡುಪಿ, ದಂತ ವೈದ್ಯಕೀಯ ವಿಭಾಗ ಕೆ.ಎಂ.ಸಿ ಮಣಿಪಾಲ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳಲಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೋಗ್ಯ […]
ಕಾರ್ಕಳದ ಕ್ರೈಸ್ಟ್ ಕಿಂಗ್ ಕಾಲೇಜು: ದ್ವಿತೀಯ ಪಿಯುಸಿಯಲ್ಲಿ, ಶೇ. ನೂರು ಫಲಿತಾಂಶ; 12 ವಿದ್ಯಾರ್ಥಿಗಳು ರಾಜ್ಯದ ಟಾಪ್ 10ನಲ್ಲಿ

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿ ಮತ್ತೆ ದಾಖಲೆ ಸೃಷ್ಠಿಸಿದೆ. ನೂರು ಶೇಕಡಾ ಫಲಿತಾಂಶ ಪಡೆದುಕೊಂಡ ಈ ಸಂಸ್ಥೆಯಿಂದ 12 ವಿದ್ಯಾರ್ಥಿಗಳು ರಾಜ್ಯದ ಟಾಪ್ 10ರಲ್ಲಿ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದ ಪ್ರಮುಖ ಸಾಧನೆಗಳು ವಿಜ್ಞಾನ ವಿಭಾಗದ ಪ್ರಮುಖ ಸಾಧನೆಗಳು ಒಟ್ಟು ಸಾಧನೆ