ಕುಂದಾಪುರ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ- ಮಹಿಳೆ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಲಾರಿಯೊಂದು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ. ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಅವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ. ಶಾರದಾ ಅವರು ಕೋಟೇಶ್ವರ ಅಂಕದ ಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ […]

ಪ್ರವಾಸೋದ್ಯಮ ಪ್ರಚಾರಕ್ಕೆ ಡಿಜಿಟಲ್ ಸ್ಪರ್ಶದ ಗುರಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಒನ್ ಟ್ಯಾಕ್, ಮಣಿಪಾಲ್ ಸ್ಕೂಲ್ ಆಫ್ ಕಮ್ಯುನಿಕೇಷನ್ ಮತ್ತು ಉಡುಪಿ ಟೂರಿಸಂ ಸಹಭಾಗಿತ್ವದಲ್ಲಿ ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತವು ಹಮ್ಮಿಕೊಂಡಿದೆ. ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲ ಸಕ್ರಿಯ ಪಾಲುದಾರರ ಜೊತೆಯಲ್ಲಿ ವಿಶೇಷ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ, ಉಡುಪಿಯ ಸಂಸ್ಕೃತಿ, ಪರಂಪರೆ, ಆಹಾರ ಶೈಲಿ ಮತ್ತು ಧಾರ್ಮಿಕತೆ ಬಗ್ಗೆ […]

ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ಕಲ್ಯಾಣಪುರ ತ್ರಿಶಾ ಕಾಲೇಜಿಗೆ ಸತತ ಮೂರನೇ ವರ್ಷವೂ 100% ಫಲಿತಾಂಶ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಕಲ್ಯಾಣಪುರದಲ್ಲಿ ಕಾರ್ಯಾಚರಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದ ತ್ರಿಶಾ ಪ. ಪೂ ಕಾಲೇಜು 100% ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ವೀಕ್ಷಿತ್ ಎಸ್ ಶೆಟ್ಟಿ 592 ಅಂಕಗಳೊಂದಿಗೆ ರಾಜ್ಯಕ್ಕೆ 8 ನೇ ಸ್ಥಾನ, ನವನೀತ್ ಪೈ 590 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ಸ್ಥಾನ ಪಡೆದು ಸಂಸ್ಥೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾರೆ. ಹಾಗೂ ನಿನಾದ್. ಆರ್. ನಾಯ್ಕ್ 588‌, ಪೂಜಿತ ಶೆಣೈ 587, ಪಾವನಿ 580, ಮೇಘನಾ ಎಸ್ […]

ಉಡುಪಿಯ ಆಶಾ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗಾವಕಾಶ

ಉಡುಪಿಯ ಆಶಾ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗಾವಕಾಶ ಸೇಲ್ಸ್ ಅಸೋಸಿಯೇಟ್ ಅರ್ಹತೆಗಳು : ಸ್ಟೋರ್ ಅಸಿಸ್ಟೆಂಟ್ ಅರ್ಹತೆಗಳು: ಗಮನಿಸಿ: ದಯವಿಟ್ಟು ನಿಮ್ಮ ಸಿವಿ ಜೊತೆಗೆ ನಿಮ್ಮ ಆಧಾರ್ ಕಾರ್ಡ್‌ನ ಪ್ರತಿಯನ್ನು ತನ್ನಿ. ಕನಕದಾಸ ರಸ್ತೆ, ಸಂಸ್ಕೃತ ಕಾಲೇಜು ಬಳಿ, ಉಡುಪಿ 01-(KA); M: +91 6363-914186

ಎ.12ರಂದು ಕಟಪಾಡಿ ಲೊಂಬಾರ್ಡ್ ಮಿಷನ್ ಹೆಲ್ತ್ ಸೆಂಟರ್ ನಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಮಿಷನ್ ಆಸ್ಪತ್ರೆಯ ವತಿಯಿಂದ ಕಟಪಾಡಿಯಲ್ಲಿ ಪ್ರಾರಂಭವಾದ ಲೊಂಬಾರ್ಡ್ ಮಿಷನ್ ಹೆಲ್ತ್ ಸೆಂಟರ್ ನಲ್ಲಿ ಎ. 12ರ ಭಾನುವಾರದಂದು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯವರೆಗೆ ಸಾಮಾನ್ಯ ಆರೋಗ್ಯ, ನೇತ್ರ, ಸ್ತ್ರೀರೋಗ, ಕಿವಿ ಮೂಗು ಗಂಟಲು, ಮಧುಮೇಹ, ಇ.ಸಿ.ಜಿ ತಪಾಸಣೆ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.