ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಡಗರ- ದೀಪಾಲಂಕಾರ ಉದ್ಘಾಟಿಸಿದ ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಅವರು ದೀಪಾಲಂಕಾರ ಉದ್ಘಾಟನೆಯನ್ನು ನೆರವೇರಿಸಿದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ ಉಪಾಧ್ಯಾಯ, ಹಿರಿಯರಾದ ಭುಜಂಗ ಶೆಟ್ಟಿ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರುದಯಾನಂದ್ […]
ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ

ಉಡುಪಿ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಮಾ.17ರಂದು ಸುದೀಪ್ ರೈ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುದೀಪ್ ರೈ ಮಾ.30ರಂದು […]
ದೆಂದೂರುಕಟ್ಟೆ ಮನೋಜ್ ಬಾರ್ ಮಾಲೀಕ, ಗ್ರಾಮೀಣ ಬಂಟರ ಸಂಘದ ಮಾಜಿ ಅಧ್ಯಕ್ಷ ಸಕಾರಾಮ್ ಶೆಟ್ಟಿ ನಿಧನ

ಉಡುಪಿ: ಉದ್ಯಮಿ, ದೆಂದೂರುಕಟ್ಟೆ ಮನೋಜ್ ಬಾರ್ ಮಾಲೀಕ, ಗ್ರಾಮೀಣ ಬಂಟರ ಸಂಘದ ಮಾಜಿ ಅಧ್ಯಕ್ಷ ಸಕಾರಾಮ್ ಶೆಟ್ಟಿ(65) ಅಲ್ಪಕಾಲದ ಅಸೌಖ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ದೊಂದೂರುಕಟ್ಟೆ, ಮಣಿಪುರ ಭಾಗದಲ್ಲಿ ಸಾಮಾಜಿಕ, ಧಾರ್ಮಿಕ, ಕ್ರೀಡಾ ಪ್ರೋತ್ಸಾಹಕರಾಗಿ ತನ್ನನ್ನು ತಾನು ತೊಡಗಿಸಿಕೊಂಡ ಸಕಾರಾಮ್ ಶೆಟ್ಟಿ ಅವರು ಕೊಡುಗೈ ದಾನಿಯಾಗಿದ್ದರು. ದೆಂದೂರುಕಟ್ಟೆಯ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಖಾಸಗಿ ಬಸ್ ಮತ್ತು ಪೆಟ್ರೋಲ್ ಪಂಪ್ ಮಾಲಕರಾಗಿ, ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಆಡಳಿತ ಮಂಡಳಿ ಸದಸ್ಯರಾಗಿ ದುಡಿದಿದ್ದರು. ಮೃತರು ಪತ್ನಿ ಓರ್ವ ಪುತ್ರ, […]
ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭವ್ಯ ಹೊರೆಕಾಣಿಕೆ ಮೆರವಣಿಗೆ

ಕಾರ್ಕಳ: ಅಜೆಕಾರು ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಪೂರ್ವಭಾವಿಯಾಗಿ ನಡೆದ ಹೊರೆಕಾಣಿಕೆ ಮೆರವಣಿಗೆ ಹಾಗೂ ಗಣಪತಿ ದೇವರ ಮೆರವಣಿಗೆ ಭಕ್ತಿಭಾವದಿಂದ ಯಶಸ್ವಿಯಾಗಿ ನೆರವೇರಿತು. ಈ ಮೆರವಣಿಗೆಗೆ ಊರಿನ ಜನರಿಂದ ಭಾರೀ ಸ್ಪಂದನೆ ವ್ಯಕ್ತವಾಗಿದ್ದು, ಧಾರ್ಮಿಕ ಸಂಭ್ರಮ ಎಲ್ಲೆಡೆ ಕಂಡುಬಂತು. ಮೆರವಣಿಗೆಗೆ ಉದ್ಯಮಿ ಅಜೆಕಾರು ಶಿವರಾಂ ಜಿ ಶೆಟ್ಟಿ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಹಾಗೂ ಅಜೆಕಾರು ಪದ್ಮಗೋಪಾಲ್ ಟ್ರಸ್ಟ್ ಸಂಸ್ಥಾಪಕ ಸುಧಾಕರ್ ಶೆಟ್ಟಿ ಚಾಲನೆ ನೀಡಿದರು. ಈ ವೇಳೆ ಅವರು ದೇವರ ಆಶೀರ್ವಾದ ಪಡೆದು ಕಾರ್ಯಕ್ರಮದ […]
ಉತ್ತರ ಪ್ರದೇಶದಲ್ಲಿ ವಾಕಿಂಗ್ ಹೋಗುತ್ತಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

ಲಕ್ನೋ: ಉತ್ತರ ಪ್ರದೇಶ ರಾಜ್ಯದ ಮಿರ್ಜಾಪುರ ನಲ್ಲಿ ನಡೆದ ದಾರುಣ ಘಟನೆಯಲ್ಲಿ ಹಿರಿಯ ವಕೀಲ ರಾಜೀವ್ ಸಿಂಗ್ (45) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬೆಳಗಿನ ವಾಕಿಂಗ್‌ಗೆ ತೆರಳಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನ ಪರಿಣಾಮವಾಗಿ ರಾಜೀವ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದಾಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ತಿಳಿದುಬಂದಿದೆ. ಹತ್ಯೆ ನಡೆಸಿದ ಬಳಿಕ ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸಿದಾಗ, ವಾಹನ ತಕ್ಷಣ ಸ್ಟಾರ್ಟ್ ಆಗದೇ […]