ಎ.16ರಿಂದ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಭಂದ ಬ್ರಹ್ಮಕಲಶೋತ್ಸವ ವೈಭವ

ಉಡುಪಿ: ಇತಿಹಾಸ ಪ್ರಸಿದ್ಧ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ‘ಅಷ್ಟಭಂದ ಬ್ರಹ್ಮಕಲಶೋತ್ಸವ ವೈಭವ-2026’ ಎ.16ರಿಂದ ಎ.20ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ.ಮಾಧವ ಪೂಜಾರಿ ತಿಳಿಸಿದ್ದಾರೆ.ದೇವಸ್ಥಾನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.20ರಂದು ಬೆಳಗ್ಗೆ 9.15ಕ್ಕೆ ಶ್ರೀಮಹಾಲಿಂಗೇಶ್ವರ ದೇವರ ಪರಿಕಲಶ ಅಭಿಷೇಕ, ಬ್ರಹ್ಮಕಲಶಾಭಿಷೇಕ, ಕಲಾನ್ಯಾಸ, ಮಹಾಪೂಜೆ, ಪಲ್ಲಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ ಮತ್ತು ಸಂಜೆ 6ಗಂಟೆಗೆ ಉತ್ಸವ ಬಲಿ, ಮಹಾರಂಗ ಪೂಜೆ, ಭೂತ ಬಲಿ ನಡೆಯಲಿದೆ ಎಂದರು.ಎ.15ರಂದು ಮಧ್ಯಾಹ್ನ 3ಗಂಟೆಗೆ […]
ಡಾ. ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

ಉಡುಪಿ: ಸುದೀರ್ಘ ಕಾಲ ಕಲಾ ಸೇವೆಯನ್ನು ಮಾಡಿದ ಡಾ.ಕೆ.ಗೋವಿಂದ ಭಟ್ ಅವರಿಗಿದ್ದ ಯಕ್ಷಗಾನದ ಮೇಲಿನ ಪ್ರೀತಿ, ಕಲಾರಾಧನೆಯೇ ಅವರನ್ನು ಪ್ರೇಕ್ಷಕರ ಮನದಲ್ಲಿ ಚಿರಸ್ಥಾಯಿಯಾಗುವಂತೆ ಮಾಡಿದೆ. ಕಲಾವಿದ ಹೇಗೆ ಇರಬೇಕು ಎನ್ನುವುದಕ್ಕೆ ಗೋವಿಂದ ಭಟ್ ಇಂದಿನ ಕಲಾವಿದರಿಗೆ ಮಾದರಿಯಾಗಿದ್ದಾರೆ, ಆದರ್ಶಪ್ರಾಯರಾಗಿದ್ದಾರೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಬಂಟ್ವಾಳ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರದಲ್ಲಿ ಸೋಮವಾರ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಸಂಪಾಜೆ ವತಿಯಿಂದ ನಡೆದ ಇತ್ತೀಚಿಗೆ ಅಗಲಿದ ಯಕ್ಷಗಾನದ ಮೇರುನಟ ಡಾ.ಕೆ.ಗೋವಿಂದ […]
ಉಡುಪಿಯ ಅಮರ್ ವಿಶ್ವಾಸ್ ಹಾಲಿಡೇಸ್ & ರೆಸಾರ್ಟ್ ನಿಂದ ಉತ್ತರ ಪ್ರದೇಶದ ಪವಿತ್ರ ಯಾತ್ರಾ ಪ್ಯಾಕೇಜ್: ನಿಮ್ಮ ಯಾತ್ರೆಯ ಕನಸು ನನಸು ಮಾಡಿಕೊಳ್ಳಲು ಇದೊಳ್ಳೆ ಅವಕಾಶ

ಉಡುಪಿ: ಉಡುಪಿಯ ಅಮರ್ ವಿಶ್ವಾಸ್ ಹಾಲಿಡೇಸ್ & ರೆಸಾರ್ಟ್ ಸಂಸ್ಥೆಯು ಭಕ್ತರಿಗಾಗಿ ವಿಶೇಷವಾಗಿ ಉತ್ತರ ಪ್ರದೇಶದ ಪವಿತ್ರ ಕ್ಷೇತ್ರಗಳ ಯಾತ್ರಾ ಪ್ಯಾಕೇಜ್‌ನ್ನು ಪ್ರಕಟಿಸಿದೆ. 2 ರಾತ್ರಿ / 3 ದಿನಗಳ ಈ ಯಾತ್ರೆಯಲ್ಲಿ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ವಾರಾಣಸಿ, ಅಯೋಧ್ಯೆ ಮತ್ತು ಪ್ರಯಾಗ ಸ್ಥಳಗಳನ್ನು ಒಳಗೊಂಡಿದೆ. ಅಧಿಕ ಮಾಸ (ಜೂನ್) ಸೇರಿದಂತೆ 2026ರ ಸಂಪೂರ್ಣ ವರ್ಷದಲ್ಲಿ ಈ ಯಾತ್ರೆ ಲಭ್ಯವಿದೆ ಎಂದು ಸಂಸ್ಥೆ ತಿಳಿಸಿದೆ. ಕುಟುಂಬ ಹಾಗೂ ಗುಂಪು ಯಾತ್ರಿಕರನ್ನು ಗಮನದಲ್ಲಿಟ್ಟುಕೊಂಡು 4ರಿಂದ 40 ಜನರಿಗೆ ಅನುಕೂಲವಾಗುವಂತೆ […]
ಅಜೆಕಾರು ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ, ಪ.ಪೂ. ಕಾಲೇಜು: ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಕಾರ್ಕಳ: ಅಜೆಕಾರು ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಿರ್ಮಾಣಗೊಂಡ ಶಿಲಾಮಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ ನಡೆಯಿತು. ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ಆಶ್ರೀವಚನ ನೀಡಿ ಮಾತನಾಡಿ ತಾನು ಬದುಕುವ ಜತೆಗೆ ಇತರರನ್ನು ಬದುಕಲು ಬಿಡುವುದೇ ಜೀವನ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಸಕ ಸುನೀಲ್ ಕುಮಾರ್ ವಹಿಸಿ ಮಾತನಾಡಿ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಶಿಕ್ಷಣ ಕ್ರಾಂತಿ ಮಾಡಿದೆ ಎಂದರು. ಫಲಪುಷ್ಪ ಸಮರ್ಪಣೆಯನ್ನು […]
ಉಡುಪಿ: ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

ಉಡುಪಿ, ಏಪ್ರಿಲ್ 13: ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿಯ ಇನ್ನುಳಿದ ಭಾಗದ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂ ಕುಸಿತ ಉಂಟಾಗಿ ಕಾಂಕ್ರೀಟ್ ರಸ್ತೆಯ ಮೇಲ್ಮೆöÊನಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡುಬAದಿದ್ದು, ಸುರಕ್ಷತಾ ದೃಷ್ಟಿಯಿಂದ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್‌ಪಿನ್ ತಿರುವಿನಲ್ಲಿ ಪ್ರಸ್ತುತ ಕೈಗೊಳ್ಳುತ್ತಿರುವ […]