ವೃದ್ಧೆ ಸ್ಥಿತಿ ಚಿಂತಾಜನಕ: ವಾರಸುದಾರರಿಗೆ ಸೂಚನೆ

ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಗೌರಿ (90) ಎಂಬ ವೃದ್ಧೆಯ ಸ್ಥಿತಿ ಚಿಂತಾಜನಕವಾಗಿದ್ದು ವಾರಿಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂ: 0820-2520555/9449827833 ಅನ್ನು ಸಂಪರ್ಕಿಸುವoತೆ ಜಿಲ್ಲಾಸ್ಪತ್ರೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಮೇ 1 ರಂದು ಭಗವಾನ್ ಬುದ್ಧ ಜಯಂತಿ ಆಚರಣೆಗೆ ಸಕಲ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಭಗವಾನ್ ಬುದ್ಧ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಮೇ 01 ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ತಮ್ಮ ಕಚೇರಿಯಲ್ಲಿ ನಡೆದ ಭಗವಾನ್ ಬುದ್ಧ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿವಿಧ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ […]