ಇಷ್ಟು ದಿನ ಕಣ್ಮರೆಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಪ್ರತ್ಯಕ್ಷ: ದರ್ಶನ್ ಬಗ್ಗೆ ಅವರು ಹೇಳಿದ ಸ್ಪೋಟಕ ಸತ್ಯವೇನು?

ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆಯಾಗಿದ್ದಾರೆಯೆಂಬ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ದರ್ಶನ್ ಜೈಲು ಸೇರಿದ ಸಮಯದಲ್ಲಿ ಮಲ್ಲಿಕಾರ್ಜುನ್ ಕಾಣೆಯಾದದ್ದಕ್ಕೂ ಸಂಬಂಧ ಇದೆಯೇ ಎಂಬ ಸಂಶಯ ವ್ಯಕ್ತವಾಗಿತ್ತು. ಆದರೆ ಇದೀಗ ಅವರು ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ. ತಾವು ಎಲ್ಲರಿಂದ ದೂರ ಉಳಿದಿದ್ದಕ್ಕೆ ಮುಖ್ಯ ಕಾರಣ ಹಣಕಾಸಿನ ನಷ್ಟ ಮತ್ತು ಅನಾರೋಗ್ಯ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಈ ವಿಷಯ ದರ್ಶನ್ ಅವರಿಗೂ ತಿಳಿದಿಲ್ಲ ಎಂಬುದನ್ನೂ ಹೇಳಿದ್ದಾರೆ. […]
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ ಅವರು ಏಪ್ರಿಲ್ 17 ಮತ್ತು 18 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏ. 17 ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ಏ. 18 ರಂದು ಬೆಳಗ್ಗೆ 11 ಗಂಟೆಗೆ ಕಾಪು ತಾಲೂಕು ಪಂಚಾಯತ್ ಕಚೇರಿಯಲ್ಲಿ, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು

ಉಡುಪಿ: ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) / ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಕಂಡ ಸಲಹೆಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಅತೀ ಹೆಚ್ಚು ತಾಪಮಾನದಿಂದಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಾಧ್ಯವಾದಷ್ಟು ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಾದ […]
ನಗರಸಭೆ: ವಿವಿಧ ಸೌಲಭ್ಯ – ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ (ಶೇ. 24.10) ಪರಿಶಿಷ್ಟ ಜಾತಿಯ ಉಪಯೋಜನೆ (ಎಸ್.ಸಿ.ಎಸ್.ಪಿ) ಅನುದಾನದ ವ್ಯಕ್ತಿ ಸಂಬoಧಿತ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ ಹಾಗೂ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಏ.17 ರಂದು ನೇರ ಸಂದರ್ಶನ

ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ ಸಂಘ ಫ್ರಧಾನ ಕಛೇರಿಯ ಎರಡನೇ ಮಹಡಿಯ ಗ್ರೋಸ್ಪೈರ್ ಗ್ರೂಪ್ ಇಲ್ಲಿ ಏಪ್ರಿಲ್ 17 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿಯುಸಿ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ […]