ಏಪ್ರಿಲ್ 20 ರಿಂದ ಏಪ್ರಿಲ್ 30ರವರೆಗೆ MSDC ವತಿಯಿಂದ ಆರ್ಟ್ & ಕ್ರಾಫ್ಟ್ ಕ್ಯಾಂಪ್.

ಶಿಬಿರದಲ್ಲಿ ಚಿತ್ರಕಲೆ, ಪೆನ್ಸಿಲ್ ಶೇಡಿಂಗ್, ಕ್ಲೇ ಮಾದರಿಕರಣ, ಲ್ಯಾಂಡ್‌ಸ್ಕೇಪ್ ಡ್ರಾಯಿಂಗ್, ಪೇಂಟಿಂಗ್ & ಹ್ಯಾಂಡ್‌ಕ್ರಾಫ್ಟ್ ತರಬೇತಿಗಳು. ಉಡುಪಿ: ಮಣಿಪಾಲ Manipal Skill Development Center ವತಿಯಿಂದ ಏಪ್ರಿಲ್ 20 ರಿಂದ ಏಪ್ರಿಲ್ 30ರವರೆಗೆ “ಆರ್ಟ್ & ಕ್ರಾಫ್ಟ್ ಕ್ಯಾಂಪ್” ಆಯೋಜಿಸಲಾಗಿದೆ. ಪ್ರತಿದಿನ ಬೆಳಗ್ಗೆ 10:30ರಿಂದ ಮಧ್ಯಾಹ್ನ 12:30ರವರೆಗೆ ನಡೆಯುವ ಈ ಶಿಬಿರದಲ್ಲಿ ಮಕ್ಕಳ ಸೃಜನಶೀಲತೆಯನ್ನು ಉತ್ತೇಜಿಸುವ ವಿವಿಧ ಚಟುವಟಿಕೆಗಳು ಇರಲಿವೆ. ಶಿಬಿರದಲ್ಲಿ ಮೂಲ ಚಿತ್ರಕಲೆ, ಪೆನ್ಸಿಲ್ ಶೇಡಿಂಗ್, ಕ್ಲೇ ಮಾದರಿಕರಣ, ಲ್ಯಾಂಡ್‌ಸ್ಕೇಪ್ ಡ್ರಾಯಿಂಗ್, ಪೇಂಟಿಂಗ್ ಹಾಗೂ ಹ್ಯಾಂಡ್‌ಕ್ರಾಫ್ಟ್ […]
ಕನ್ನಡ ಪುಸ್ತಕ ಸೊಗಸು ಬಹುಮಾನ: ಅರ್ಜಿ ಆಹ್ವಾನ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ” ಗಳಿಗಾಗಿ ವೆಬ್‌ಸೈಟ್ https://kpp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು, ಮುದ್ರಕರು ಹಾಗೂ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದ್ದು, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ […]
ಏ.20-30’ರ ವರೆಗೆ ಮಣಿಪಾಲ MSDC ಯಲ್ಲಿ ಮೆಹೆಂದಿ ಮತ್ತು ನೇಲ್ ಆರ್ಟ್ ಕ್ರಿಯೇಟಿವ್ ಕ್ಯಾಂಪ್; ಅರ್ಜಿ ಸಲ್ಲಿಸಿ.!

ಉಡುಪಿ: ಸೌಂದರ್ಯ ಹಾಗೂ ಸೃಜನಾತ್ಮಕ ಕೌಶಲ್ಯಗಳನ್ನು ಉತ್ತೇಜಿಸಲು Manipal Skill Development Center (MSDC) ಮತ್ತು Orane International ಸಂಯುಕ್ತವಾಗಿ “Mehandi & Nail Art Creative Camp” ಎಂಬ ವಿಶೇಷ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ಈ ಶಿಬಿರದಲ್ಲಿ ಕ್ಲಾಸಿಕ್ ನೇಲ್ ಆರ್ಟ್, ಮೆಹೆಂದಿ ಡಿಸೈನ್, ಜೆಲ್ ನೇಲ್ ಆರ್ಟ್ ಹಾಗೂ ಸೀಸನಲ್ ನೇಲ್ ಆರ್ಟ್ ಸೇರಿದಂತೆ ವಿವಿಧ ಕಲಾತ್ಮಕ ತರಬೇತಿಗಳನ್ನು ನೀಡಲಾಗುತ್ತದೆ. ಸೌಂದರ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಶಿಬಿರವು ಏಪ್ರಿಲ್ […]
ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿದೆ. ಲೋಕಸಭೆಯಲ್ಲಿ ನಿನ್ನೆ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಅವರು ಇಂದು ರಾತ್ರಿ ದೇಶ ಉದ್ದೇಶಿಸಿ ಮಾತನಾಡುತ್ತಿದ್ದು, ಪ್ರಧಾನಿ ನಡೆ ತೀವ್ರ ಕುತೂಹಲ ಕೆರಳಿಸಿದೆ. ಅವರು ಏನು ಮಾತನಾಡುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ. ಕೇಂದ್ರ ಸರ್ಕಾರ, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗಳ ನಡುವೆ […]
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

ಉಡುಪಿ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಆಸಕ್ತಿ ಹೊಂದಿರುವ ಹಾಗೂ ರಾಜ್ಯದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಮಂಡಳಿಗಳು, ಸೊಸೈಟಿಗಳು ಹಾಗೂ ಟ್ರಸ್ಟ್ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆಗಳು ಬಿ.ಎಸ್ಸಿ ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿoಗ್, ಬಿ.ಟೆಕ್ ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್ ಫುಡ್ ಟೆಕ್ನಾಲಜಿ, ಬಿ.ಎಸ್ಸಿ ಅರಣ್ಯ, ಬಿ.ಎಸ್ಸಿ ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ ಫುಡ್ ನ್ಯೂಟ್ರೀಶನ್ […]