ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ

ಉಡುಪಿ: ಶಿವ ಬೇರೆಯವರ ದೋಷವನ್ನು ಕಂಠದಲ್ಲಿ ಹಾಗೂ ಬೇರೆಯವರ ಉತ್ತಮ ಗುಣಗಳನ್ನು ಚಂದಿರನಂತೆ ತಲೆಯ ಮೇಲೆ ಹೊತ್ತುಕೊಂಡಂತೆ ನಾವು ಇನ್ನೊಬ್ಬರ ದೋಷಗಳ ಬದಲು ಅವರ ಸದ್ಗುಣಗಳ ಪ್ರಚಾರ ಮಾಡಿದಲ್ಲಿ ಸಮಾಜದಲ್ಲಿ ಧನಾತ್ಮಕ ವಾತಾವರಣ ನಿರ್ಮಾಣ ಮಾಡಬಹುದು. ರುದ್ರ ದೇವರ ಆರಾಧನೆ ಮಾಡಿ ಅವರ ಗುಣಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ ಪ್ರಯುಕ್ತ ರವಿವಾರ ಡಾ| ನಾಡೋಜ ಜಿ. ಶಂಕರ್ ವೇದಿಕೆಯಲ್ಲಿ ನಡೆದ […]
ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 2025-26ನೇ ಸಾಲಿನಲ್ಲಿ 18.13ಕೋಟಿ ರೂ ಲಾಭ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ 4062.29 ರೂ. ಕೋಟಿ ವಾರ್ಷಿಕ ವಹಿವಾಟು ನಡೆಸಿ 18.13 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ 108 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಸಂಘವು, 2025-26ನೇ ಆರ್ಥಿಕ ವರ್ಷಾಂತ್ಯಕ್ಕೆ 22,869 ಸದಸ್ಯರನ್ನು ಹೊಂದಿದ್ದು, ವರದಿ ವರ್ಷಾಂತ್ಯಕ್ಕೆ 658.80 ಕೋಟಿ ರೂ. ಠೇವಣಿ ಸಂಗ್ರಹಿಸಿ, ಕಳೆದ ಸಾಲಿಗಿಂತ ಶೇ.14.93 […]
ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷಾಗಿ ಪ್ರಕಾಶ್ ಡಿ ರಾಂಪುರ್

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಿರಿಯ ವಿದ್ಯಾರ್ಥಿಗಳ ಸಂಘ (APJAA)ವನ್ನು ರಚಿಸಲಾಗಿದ್ದು, ಟಿವಿ ಹಿರಿಯ ವರದಿಗಾರ ಪ್ರಕಾಶ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ನಾಡಿನ ಪ್ರಮುಖ ಪತ್ರಿಕೆ, ಟಿವಿ, ನವಮಾಧ್ಯಮ, ಶಿಕ್ಷಣ ಮತ್ತಿತರ ಸಂಸ್ಥೆಗಳಲ್ಲಿ ವೃತ್ತಿ ನಿರ್ವಹಿಸುತ್ತಿರುವ ಹಿರಿಯ ವಿದ್ಯಾರ್ಥಿಗಳು ಪದಾಧಿಕಾರಿಗಳಾದರು.ಇದಕ್ಕೂ ಮೊದಲು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ […]
ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ; 3000ಕ್ಕೂ ಅಧಿಕ ಜನರು ಭಾಗಿ

ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ ಸಮಸ್ತ ಜೈನ ಬಾಂಧವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವವನ್ನು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಆದಿತ್ಯವಾರ ಹಮ್ಮಿಕೊಳ್ಳಲಾಯಿತು. ಸಂಜೆ 4ಕ್ಕೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಮೊದಲಿಗೆ ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆ ನಡೆಯಿತು. ಕೊಂಬು ವಾದ್ಯ, ನಾದಸ್ವರ, ಪೂರ್ಣಕುಂಭದೊಂದಿಗೆ ಮಹಾವೀರ ಸ್ವಾಮಿ ಜಿನಬಿಂಬದ ಮೆರವಣಿಗೆ, ತೋರಣ ಮುಹೂರ್ತ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಮಹಾಮಂಗಳಾರತಿ ಹಮ್ಮಿಕೊಳ್ಳಲಾಯಿತು. ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ […]
ಮಣಿಪಾಲ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಮಣಿಪಾಲ: ಕಠಿಣ ಪರಿಶ್ರಮಕ್ಕೆ, ಏಕಾಗ್ರತೆಗೆ, ಸಮರ್ಪಣಾ ಮನೋಭಾವನೆಗೆ, ಹೆತ್ತವರನ್ನು, ಹುಟ್ಟೂರನ್ನು ಗೌರವಿಸುವ ವಿವಿಧ ಉತ್ತಮ ಗುಣಗಳಿಗೆ ಡಾ. ಸುಧಾಕರ್ ಶೆಟ್ಟಿ ಅವರೇ ನಮಗೆ ರೋಲ್ ಮಾಡೆಲ್ ಎಂದು ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ಶ್ರೀ ಅನಿಲ್ ಕುಮಾರ್ ಜೈನ್ ಹೇಳಿದರು. ಇವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೊದಲ ಬ್ಯಾಚಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು. ವ್ಯಕ್ತಿಯ ಬದುಕಿನಲ್ಲಿ ತಂದೆ ತಾಯಿಯ ಆಶೀರ್ವಾದದ ಶಕ್ತಿ ಎಲ್ಲಾ […]