“ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು” ಎಂಬ ವಿಷಯದ ಕುರಿತು ಉಪನ್ಯಾಸ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯು ಮಂಗಳೂರಿನ ರಾಮಕೃಷ್ಣ ಆಶ್ರಮದ ಸಹಯೋಗದೊಂದಿಗೆ ಎಪ್ರಿಲ್ 13 ರಂದು ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು ಎಂಬ ವಿಷಯದ ಕುರಿತು ಉಪನ್ಯಾಸವನ್ನು ಆಯೋಜಿಸಲಾಗಿತ್ತು. ಉಪನ್ಯಾಸದಲ್ಲಿ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಆಶ್ರಮದ ಅಘರಾನಂದಜೀ ಅವರು ಭಾಗವಹಿಸಿದ್ದರು. ಇವರು ಮಾತನಾಡಿ ಸ್ವಾಮಿ ವಿವೇಕನಂದರ ದೈನಂದಿನ ಚಿಂತನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಸ್ವಯಂ ಶಿಸ್ತು, ಸಕರಾತ್ಮಕ ಚಿಂತನೆಗಳು ಮತ್ತು ಸೇವಾ ಆಧಾರಿತ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದರು. […]
ಉಡುಪಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಪೀಠಾರೋಹಣ

ಉಡುಪಿ: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಸೋಮವಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರಧಾನಾಲಯದ ಕಾಲೇಜು ಮೈದಾನದಲ್ಲಿ ನಡೆದ ಪವಿತ್ರ ಸಮಾರಂಭದಲ್ಲಿ ಅಭಿಷಿಕ್ತಗೊಳಿಸಿ ಪೀಠಾರೋಹಣಗೊಳಿಸಲಾಯಿತು. ಗೋವಾ ಮತ್ತು ದಮನ್ ಮಹಾಧರ್ಮಪ್ರಾಂತ್ಯದ ಮಹಾಧರ್ಮಾಧ್ಯಕ್ಷರು ಹಾಗೂ FABC ಮತ್ತು CCBI ಅಧ್ಯಕ್ಷರಾದ ಕಾರ್ಡಿನಲ್ ಫಿಲಿಪ್ ನೆರಿ ಫೆರಾವೊ ಅವರು ಮುಖ್ಯ ಅಭಿಷೇಕಕರಾಗಿ ಧರ್ಮಾಧ್ಯಕ್ಷರ ಅಭಿಷೇಕದ ವಿಧಿ ವಿಧಾನ ನೆರವೇರಿಸಿದರು. ಬೆಂಗಳೂರು ಮಹಾಧರ್ಮಪ್ರಾಂತ್ಯದ ಮಹಾಧರ್ಮಾಧ್ಯಕ್ಷ ಡಾ. ಪೀಟರ್ ಮಚಾದೊ ಹಾಗೂ ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ. […]
‘ಅಡುಗೆ ಮಾಡಲು ಕಲಿ’ ಎಂದ ಅತ್ತೆಯ ಮಾತಿಗೆ ಮನನೊಂದು ಸೊಸೆ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ ಅತ್ತೆಯ ಸಲಹೆಯನ್ನು ಅಪಾರ್ಥ ಮಾಡಿಕೊಂಡು, 18 ವರ್ಷದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಕೆಲ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಶ್ರುತಿ, ಗಂಡನ ಮನೆಯಲ್ಲಿ ವಾಸವಾಗಿದ್ದಳು. ಮನೆಯಲ್ಲಿ ಸುಮ್ಮನೆ ಕುಳಿತು ಕಾಲಹರಣ ಮಾಡುವ ಬದಲು, ಅಡುಗೆ ಕಲಿಯಲು ಅತ್ತೆ ಸಲಹೆ ನೀಡಿದ್ದಳು ಎನ್ನಲಾಗುತ್ತಿದೆ. ಆದರೆ ಆ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ ಯುವತಿ ಮನನೊಂದು ವಿಷ ಸೇವಿಸಿದ್ದಾಳೆ ಎಂದು ತಿಳಿದುಬಂದಿದೆ. ವಿಷ ಸೇವಿಸಿದ ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ […]
ನಿಮಗೆ ಪಿ.ಎಂ.ಕಿಸಾನ್ ಸಮ್ಮಾನ್ ಹಣ ಬರುತ್ತಿಲ್ಲವೇ? ಈ ಕೆಲಸ ಮಾಡ್ಲಿಲ್ಲ ಅಂದ್ರೆ ಹಣ ಮಿಸ್ ಆಗ್ಬೋದು!

ದೇಶದ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಯೋಜನೆ ಪಿಎಂ ಕಿಸಾನ್ ಸಮ್ಮಾನ್. ಈ ಯೋಜನೆಯಡಿ ವರ್ಷಕ್ಕೆ 6,000 ರೂ.ವನ್ನು ಮೂರು ಕಂತುಗಳಲ್ಲಿ (ಪ್ರತಿ ಕಂತು 2,000 ರೂ.) ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಈಗಾಗಲೇ 22 ಕಂತುಗಳು ಬಿಡುಗಡೆಯಾಗಿದ್ದು, 23ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. 23ನೇ ಕಂತು ಯಾವಾಗ ಬರಬಹುದು? ಸಿಕ್ಕಿರುವ ಮಾಹಿತಿಯ ಪ್ರಕಾರ, 2026ರ ಮೇ ಅಥವಾ ಜೂನ್ ತಿಂಗಳಲ್ಲಿ 23ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆ ಇದೆ. […]
ಫ್ಯಾಶನ್ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ ಇಲ್ಲಿದೆ ಅವಕಾಶ

ಉಡುಪಿ: ಉದ್ಯಾವರ ಸಮೀಪದ ಸಂಸ್ಥೆಯೊಂದು ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫ್ಯಾಷನ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಉದ್ಯೋಗಾವಕಾಶವಾಗಿದೆ. ಸೆಲ್ಸ್ ಎಕ್ಸಿಕ್ಯೂಟಿವ್ ಕಮ್ ಫ್ಯಾಷನ್ ಕನ್ಸಲ್ಟೆಂಟ್ ಹುದ್ದೆಗೆ ಒಟ್ಟು 4 ಅಭ್ಯರ್ಥಿಗಳನ್ನು ಪೂರ್ಣಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 1 ರಿಂದ 3 ವರ್ಷಗಳವರೆಗೆ ಫ್ಯಾಷನ್ ರಿಟೇಲ್, ಲಕ್ಸುರಿ ಬೂಟಿಕ್ ಅಥವಾ ಅಪರಲ್ ಮಾರಾಟ ಕ್ಷೇತ್ರದಲ್ಲಿ ಅನುಭವ ಇರಬೇಕು ಎಂದು ಸೂಚಿಸಲಾಗಿದೆ. ಯಾವುದೇ ವಿಭಾಗದಲ್ಲಿ ಪದವಿ ಅಥವಾ ಡಿಪ್ಲೊಮಾ ಹೊಂದಿರುವವರು ಅರ್ಹರಾಗಿದ್ದು, […]