ಏ. 24 ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗೋದು ಡೌಟ್! ಕಾರಣವೇನು?

ಬೆಂಗಳೂರು: ಹೈಕೋರ್ಟ್ ನಲ್ಲಿ ತೃತೀಯ ಭಾಷಾ ವಿಷಯಗಳಿಗೆ ಗ್ರೇಡಿಂಗ್ ಬದಲು ಅಂಕಗಳನ್ನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಣೆ ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ಪರೀಕ್ಷೆಗೆ ಮುನ್ನವೇ ಏಪ್ರಿಲ್ 24ರಂದು ಫಲಿತಾಂಶ ಪ್ರಕಟಿಸುವ ಸಂಭಾವ್ಯ ದಿನಾಂಕ ನಿಗದಿಯಾಗಿದ್ದರೂ, ಇದೀಗ ಅದು ಮುಂದೂಡಲ್ಪಡುವ ಸಾಧ್ಯತೆ ಇದೆ. ಈ ಕುರಿತ ಮರುಪರಿಶೀಲನಾ ಅರ್ಜಿ ಏಪ್ರಿಲ್ 21ರಂದು ವಿಚಾರಣೆಗೆ ನಿಗದಿಯಾಗಿದ್ದು, ನ್ಯಾಯಾಲಯದ ತೀರ್ಪಿನ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಭಾರೀ ಕುತೂಹಲ ಮೂಡಿದೆ. ಈ […]
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿದೆ ಅಪ್ರೆಂಟಿಸ್ ಹುದ್ದೆ: ನೀವು ಆಸಕ್ತರಾ?ಮಿಸ್ ಮಾಡದೇ ಅರ್ಜಿ ಸಲ್ಲಿಸಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಮಚಲಿಪಟ್ನಂ ಘಟಕದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತಾಂತ್ರಿಕ ಮತ್ತು ಸಾಮಾನ್ಯ ಪದವಿ ಪಡೆದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಇದು ಸುಸಂದರ್ಭವಾಗಿದೆ. ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿಯಡಿ ವಿವಿಧ ಶೈಕ್ಷಣಿಕ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಹುದ್ದೆಯ ಆಧಾರದ ಮೇಲೆ ಮಾಸಿಕ ವೇತನವನ್ನು ಈ […]
ಏ. 21 ರಿಂದ BMTC-KSRTC ನೌಕರರ ಪ್ರತಿಭಟನೆ; ಬಸ್ಗಳ ಓಡಾಟ ಇರುತ್ತಾ?

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ವಿವಿಧ ಬೇಡಿಕೆಗಳಿಗಾಗಿ ಮತ್ತೆ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ವೇತನ ಪರಿಷ್ಕರಣೆ ಹಾಗೂ ಬಾಕಿ ಇರುವ ಹಣ ಪಾವತಿಸುವಂತೆ ಆಗ್ರಹಿಸಿ, ಅವರು ಹೋರಾಟಕ್ಕೆ ಮುಂದಾಗಿದ್ದಾರೆ. ನಾಲ್ಕು ಸಂಘಟನೆಗಳ ಒಕ್ಕೂಟ ಈ ಪ್ರತಿಭಟನೆಗೆ ಕರೆ ನೀಡಿದ್ದು, ಸಾವಿರಾರು ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಿದ್ದಾರೆ. ಇದರ ಪರಿಣಾಮವಾಗಿ BMTC ಮತ್ತು KSRTC ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ನಾಳೆಯಿಂದಲೇ ಬಸ್ ಸೇವೆಗಳಲ್ಲಿ ಅಡಚಣೆ ಉಂಟಾಗಬಹುದು ಎಂದು […]
ಹುಬ್ಬಳ್ಳಿ: 4 ಗಂಟೆ ಆಗಸದಲ್ಲೇ ತೇಲಾಡಿದ ವಿಮಾನ, ಪ್ರಯಾಣಿಕರ ಬೆಚ್ಚಿಬೀಳಿಸಿ ಕೊನೆಗೂ ಲ್ಯಾಂಡ್ ಆದ FLY91 ವಿಮಾನ!

ಹುಬ್ಬಳ್ಳಿ: ಇತ್ತೀಚೆಗೆ ದೇಶದಲ್ಲಿ ವಿಮಾನ ದುರಂತಗಳ ಆತಂಕ ಹೆಚ್ಚುತ್ತಿರುವ ನಡುವೆಯೇ, ರಾಜ್ಯದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಕೊನೆಯ ಕ್ಷಣದಲ್ಲಿ ತಪ್ಪಿದ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ಏರ್ ಲೈನ್ಸ್‌ನ IC3401 (ATRTurboprop AT7) ವಿಮಾನವು ಮಧ್ಯ ಗಗನದಲ್ಲೇ ತಾಂತ್ರಿಕ ದೋಷಕ್ಕೆ ಒಳಗಾಗಿ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮವಾಗಿ ವಿಮಾನವು ಗಗನದಲ್ಲೇ ಸುಮಾರು 4 ಗಂಟೆಗಳ ಕಾಲ ಸುತ್ತಾಡಿ, ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಯಿತು. ಮಧ್ಯಾಹ್ನ 4 ಗಂಟೆಗೆ […]
ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ

ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಮುಖಂಡ ಕೆ. ಶಾಂತಾರಾಮ ಸೂಡ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿಮೆಂಡನ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಪಕ್ಕಾಲು, ಖಜಾಂಚಿಯಾಗಿ ಗುರುರಾಜ್ ಪಿ. ಆರ್., ಸದಸ್ಯರಾಗಿ ಶಬರೀಶ್ ಸುವರ್ಣ, ಶ್ರೀಧರ ಕೆ. ಶೆಟ್ಟಿ, ರಮೇಶ ಪೂಜಾರಿ, ಸಂತೋಷ್ ಕುಮಾರ್ ಹೆಗ್ಡೆ, ರವೀಂದ್ರ ಭಂಡಿ, ಹರೀಶ್ ಶೆಟ್ಟಿ, ರಮೇಶ್ ಆಚಾರ್ಯ, […]