ಭಗೀರಥರ ತಪಸ್ಸು ಪರಿಶ್ರಮ ಬದುಕಿಗೆ ಮಾದರಿ: ಎಂ ಎ ಗಫೂರ್

ಉಡುಪಿ: ರಾಜನಾಗಿ, ಋಷಿಯಾಗಿ ಭಗೀರಥರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು ನೀಡಿದ್ದಾರೆ. ಅವರು ತಮ್ಮ ಪ್ರಯತ್ನ ಹಾಗೂ ಪರಿಶ್ರಮದ ಮೂಲಕ ಗಂಗೆಯನ್ನೇ ಧರೆಗೆ ತಂದವರು. ಭಗೀರಥರ ತಪಸ್ಸು ಹಾಗೂ ಪರಿಶ್ರಮದ ಮನೋಭಾವವನ್ನು ನಮ್ಮ ದುಡಿಮೆ ಮತ್ತು ದಿನನಿತ್ಯದ ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ […]

ಎಸ್ಸೆಸ್ಸೆಲ್ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಯ 93 ವಿದ್ಯಾರ್ಥಿಗಳು 95% ಕ್ಕಿಂತ ಅಧಿಕ ಅಂಕ

ವಿದ್ಯಾಗಿರಿ: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಶಾಲೆಯ 75 ವಿದ್ಯಾರ್ಥಿಗಳು 625ರಲ್ಲಿ 600ಕ್ಕೂ ಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸಾಧ್ವಿ ಪಿ.ವಿ (622), ಪ್ರಥ್ವಿರಾಜ್ ರೆಡ್ಡಿ (621), ಆದರ್ಶ (620), ಲಕ್ಷಿö್ಮ(619), ಪವನ್ ಕುಮಾರ್ (619), ಶಾಂಭವಿ (618), ಅನ್ವಿತಾ ಬಿ(617), ಶಂಕರ […]

ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್’ನಲ್ಲಿ 2026-27ನೇ ಸಾಲಿನ ಡಿಪ್ಲೊಮಾ ಕೋರ್ಸ್‌ಗಳಿಗೆ ದಾಖಲಾತಿ ಆರಂಭ

ಮಣಿಪಾಲ: ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ Dr. T.M.A. Pai Polytechnicನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಲಭ್ಯವಿರುವ ಕೋರ್ಸ್ ಗಳು ಸಂಸ್ಥೆಯಲ್ಲಿ ಆಟೋಮೊಬೈಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಕೃತಕ ಬುದ್ಧಿಮತ್ತೆ (AI), ಕ್ಲೌಡ್ ಕಂಪ್ಯೂಟಿಂಗ್ ಮತ್ತು ಬಿಗ್ ಡೇಟಾ ಸೇರಿದಂತೆ ವಿವಿಧ ಇಂಜಿನಿಯರಿಂಗ್ ಕೋರ್ಸ್‌ಗಳು ಲಭ್ಯವಿವೆ. ಜೊತೆಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಮೆಕ್ಯಾಟ್ರಾನಿಕ್ಸ್ ಹಾಗೂ ಪ್ರಿಂಟಿಂಗ್ ಟೆಕ್ನಾಲಜಿ ವಿಭಾಗಗಳಲ್ಲಿಯೂ ತರಬೇತಿ ನೀಡಲಾಗುತ್ತಿದೆ. 10ನೇ ತರಗತಿ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಇನ್ವಿಷನ್ 2026” ರಲ್ಲಿ ರನ್ನರ್ ಆಫ್ ಟ್ರೋಫಿ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವಲಚಿಲ್ ಇಲ್ಲಿ ದಿನಾಂಕ 16 ಮತ್ತು 17 ಎಪ್ರಿಲ್ 2026 ರಂದು ನಡೆದ ರಾಷ್ಟ್ರೀಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ, ಇನ್ವಿಷನ್ 2026 ರಲ್ಲಿ ರನ್ನರ್ -ಅಪ್ ಚಾಂಪಿಯನ್ ಶಿಪ್ ಅನ್ನು ಪಡೆದಿರುತ್ತಾರೆ. ಗಣಕ ಯಂತ್ರ ವಿಭಾಗದ ವಿದ್ಯಾರ್ಥಿಗಳಾದ ರೋಹನ್ ಮೆಂಡನ್ ಮತ್ತು ಮೊಹಮ್ಮದ್ ಜುನೈದ್ ಇವರು “ಅನಿಮೆ ಕ್ವಿಜ್” ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ ಲೈನ್ […]

ಕುತಂತ್ರದಿಂದ ಕ್ಷೇತ್ರ ಪುನರ್ ವಿಂಗಡಣೆಯ ಬಿಲ್ ಜಾರಿಗೊಳಿಸಲು ಹೊರಟ ಬಿಜೆಪಿಗೆ ಸೋಲಾಗಿದೆ

ಉಡುಪಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಎನ್ ಡಿಎ ಸರಕಾರವು ಮಹಿಳಾ ಮಸೂದೆಯನ್ನು ನೆಪವಾಗಿಟ್ಟುಕೊಂಡು ಕ್ಷೇತ್ರ ಪುನರ್ ವಿಂಗಡಣೆ ಬಿಲ್ ಅನ್ನು ಜಾರಿಗೆ ತರಲು ಹೊರಟಿತ್ತು. ಆದರೆ ಅವರು ಕುತಂತ್ರದಿಂದ ಜಾರಿಗೆ ತರಲು ಹೊರಟಿದ್ದ ಕ್ಷೇತ್ರ ಪುನರ್ ವಿಂಗಡಣೆಯ ಬಿಲ್ ಗೆ ಸೋಲಾಗಿದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ‌ ನರೇಂದ್ರ ಮೋದಿಯವರಿಗೆ ಮಹಿಳೆಯರಿಗೆ ರಾಜಕೀಯವಾಗಿ ಶಕ್ತಿ ಕೊಡುವ ಮನಸ್ಸು ಇಲ್ಲ. […]